Fraud Case ಆನ್ಲೈನ್ ವ್ಯವಹಾರ: 1.38 ಕೋ. ರೂ.ವಂಚನೆ
Team Udayavani, Jan 17, 2024, 1:34 AM IST
ಉಡುಪಿ: ಆನ್ಲೈನ್ ವ್ಯವಹಾರದ ಮೂಲಕ ಹೆಚ್ಚಿನ ಲಾಭಾಂಶದ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ ಒಂದು ಕೋಟಿ ರೂ. ವಂಚಿಸಿದ ಘಟನೆ ನಡೆದಿದೆ.
ಅಲೆವೂರಿನ ವೆಂಕಟರಮಣ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್ ಆ್ಯಪ್ನಲ್ಲಿ ಸಂಪರ್ಕಿಸಿ ಟ್ರೇಡಿಂಗ್ನಿಂದ ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಟ್ರೆಡಿಂಗ್ ಆ್ಯಪ್ ಲಿಂಕ್ ಕಳುಹಿಸಿದ್ದನು. ಇದನ್ನು ನಂಬಿದ ಅವರು ಲಿಂಕ್ ಮೂಲಕ ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಬಳಿಕ ಅದರಲ್ಲಿ ಮಾಹಿತಿ ನಮೂದಿಸಿ ಅನಂತರದ ಹಣವನ್ನು ಹೂಡಿಕೆ ಮಾಡಲು ಆರೋಪಿಗಳು ತಿಳಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಡಿ.5ರಿಂದ ಜ.9ರ ವರೆಗೆ ಹಂತ ಹಂತವಾಗಿ 1,38,99,000 ರೂ.ಗಳನ್ನು ಪಾವತಿಸಿದ್ದಾರೆ. ಆದರೆ ಹೂಡಿಕೆ ಮಾಡಿದ ಹಣ ಅಥವಾ ಲಾಭಾಂಶವನ್ನು ನೀಡದೇ ಆರೋಪಿಗಳು ವೆಂಕಟರಮಣ ಅವರಿಗೆ ವಂಚಿಸಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.