ಕರಾವಳಿಯ ಪುಣ್ಯಕ್ಷೇತ್ರಗಳಿಗೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ
Team Udayavani, Jan 17, 2024, 4:18 PM IST
ಕೊಲ್ಲೂರು/ಬೆಳ್ತಂಗಡಿ/ಸುಬ್ರಹ್ಮಣ್ಯ,: ಭಾರತ ಕ್ರಿಕೆಟ್ ತಂಡದ ಖ್ಯಾತ ಆಟಗಾರ ಮಂಗಳೂರು ಮೂಲದ ಕೆ.ಎಲ್. ರಾಹುಲ್ ಕರಾವಳಿಯ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದರು.
ಮಂಗಳವಾರ ಕೊಲ್ಲೂರು ಶ್ರೀ ಮೂಖಾಂಬಿಕಾ ದೇಗುಲಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ಪಿಆರ್‌ಒ ಜಯಕುಮಾರ್, ಕ್ಷೇತ್ರದ ಪುರೋಹಿತ ಸುರೇಶ ಭಟ್ ಸ್ವಾಗತಿಸಿದರು.
ಬುಧವಾರ ಧರ್ಮಸ್ಥಳಕ್ಕೆ ಭೇಟಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದಪಡೆದರು. ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬುಧವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಹಾಗೂ ಅರ್ಚಕರು ಕ್ಷೇತ್ರದ ವತಿಯಿಂದ ಗೌರವಿಸಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬುಧವಾರ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ದೇವರು, ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವತಿಯಿಂದ ರಾಹುಲ್ ಅವರನ್ನು ಗೌರವಿಸಲಾಯಿತು.
ಕುಡ್ಲಕ್ಕೆ ನಾನೆಂದೂ ಕೃತಜ್ಞ: ರಾಹುಲ್
ದಕ್ಷಿಣ ಕನ್ನಡದ ದೇವಸ್ಥಾನಗಳಿಗೆ ಭೇಟಿ ನೀಡಿದ ಬೆನ್ನಲ್ಲೇ ಕ್ರಿಕೆಟಿಗ ಕೆ.ಎಲ್. ರಾಹುಲ್ ಅವರು “ನಮ್ಮ ಕುಡ್ಲಕ್ಕೆ ನಾನೆಂದೂ ಕೃತಜ್ಞ’ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.
ರಾಹುಲ್ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ ಸಂದರ್ಭವನ್ನು ಫೋಟೋ ಸಮೇತ ತಮ್ಮ ಎಕ್ಸ್ ಖಾತೆಯಲ್ಲಿ ಹಾಕಿ ಮಂಗಳೂರಿನ ಬಗ್ಗೆ ಕೃತಜ್ಞತೆಯ ಮಾತು ಬರೆದುಕೊಂಡಿದ್ದಾರೆ. ಅವರು ಸಾಮಾನ್ಯರಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಫೋಟೋ ಕ್ಲಿಕ್ಕಿಸುವ ವೀಡಿಯೊ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ರಾಹುಲ್ ಅವರು ತನ್ನ ಬಾಲ್ಯವನ್ನು ಮಂಗಳೂರಿನಲ್ಲಿ ಕಳೆದಿದ್ದದ್ದು, ನೆಹರೂ ಮೈದಾನದಲ್ಲಿ ಕ್ರಿಕೆಟ್ ಅಭ್ಯಾಸ ಮಾಡುತ್ತಿದ್ದರು. ಅವರ ತಂದೆ ಲೋಕೇಶ್ ಅವರು ಎನ್‌ಐಟಕೆಯಲ್ಲಿ ಪ್ರೊಫೇಸರ್ ಮತ್ತು ತಾಯಿ ರಾಜೇಶ್ವರಿ ಅವರು ಮಂಗಳೂರು ವಿವಿ ಕಾಲೇಜಿನಲ್ಲಿ ಅದ್ಯಾಪಕಿಯಾಗಿದ್ದರು. ಇದೇ ಕಾರಣಕ್ಕೆ ರಾಹುಲ್ ಅವರಿಗೆ ಮಂಗಳೂರಿನ ಬಗ್ಗೆ ವಿಶೇಷ ಗೌರವವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.