5 years ಸಿಎಂ…;ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ
ಅಡೆತಡೆಗಳಿಲ್ಲದೆ ಮುಖ್ಯಮಂತ್ರಿಯಾಗಿ ಉಳಿಯಲು...
Team Udayavani, Jan 17, 2024, 7:10 PM IST
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಐದು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸುವ ಕುರಿತು ಮತ್ತೆ ಚರ್ಚೆಗಳು ಆರಂಭವಾಗಿದ್ದು, ಮಾಜಿ ಶಾಸಕ, ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ನೀಡಿದ ಹೇಳಿಕೆ ಕಾಂಗ್ರೆಸ್ ಪಡಸಾಲೆಯಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಮಂಗಳವಾರ ಹಾಸನದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಯತೀಂದ್ರ, ಮುಂದಿನ ಐದು ವರ್ಷಗಳ ಕಾಲ ಯಾವುದೇ ಅಡೆತಡೆಗಳಿಲ್ಲದೆ ಮುಖ್ಯಮಂತ್ರಿಯಾಗಿ ಉಳಿಯಲು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಗರಿಷ್ಠ ಲೋಕಸಭಾ ಸ್ಥಾನಗಳನ್ನು ಗೆಲ್ಲುವುದು ಅತ್ಯಗತ್ಯ ಎಂದು ಹೇಳಿದ್ದರು.
ಪುತ್ರ ನೀಡಿದ ಹೇಳಿಕೆ ಕುರಿತು ಬುಧವಾರ ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ‘ಈ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ, ಯತೀಂದ್ರ ಆಗಲಿ , ನಾನಾಗಲಿ ನಿರ್ಧರಿಸುವುದಲ್ಲ’ ಎಂದು ಹೇಳಿದ್ದಾರೆ.
ಯತೀಂದ್ರ ಅವರು “ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ಆ ಚುನಾವಣೆಯಲ್ಲೂ, ನಾವು ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗೆದ್ದರೆ, ನಮಗೆ ನೈತಿಕ ಬೆಂಬಲ ಸಿಗುತ್ತದೆ.ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಬೆಂಬಲವನ್ನು ತೋರಿಸುವ ಮೂಲಕ, ನೀವು ಅವರ ಕೈಯನ್ನು ಬಲಪಡಿಸಬೇಕು. ಮುಂದಿನ ಐದು ವರ್ಷಗಳ ಕಾಲ ಯಾವುದೇ ಅಡೆತಡೆಗಳಿಲ್ಲದೆ ಸಿಎಂ ಆಗಿರಲು ಸಾಧ್ಯ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.