Belthangady ನೆರಿಯ: ಚಿರತೆ ದಾಳಿಗೆ ಕಡವೆ ಬಲಿ
Team Udayavani, Jan 17, 2024, 10:13 PM IST
ಬೆಳ್ತಂಗಡಿ: ನೆರಿಯದ ಬಯಲು ಮಲ್ಲ ಎಂಬಲ್ಲಿ ಚಿರತೆ ದಾಳಿ ನಡೆಸಿ ಕಡವೆಯನ್ನು ಬಲಿ ಪಡೆದಿರುವ ಘಟನೆ ನಡೆದಿದೆ. ಇಲ್ಲಿನ ಸರಕಾರಿ ಅರಣ್ಯ ಪ್ರದೇಶದ ಬದಿಯಲ್ಲಿ ಜ. 17ರಂದು ಸುಮಾರು 3 ವರ್ಷ ಪ್ರಾಯದ ಕಡವೆಯ ಕಳೇಬರ ಕಂಡು ಬಂದಿದ್ದು ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.
ಕಡವೆಯ ಕುತ್ತಿಗೆ ಭಾಗದಲ್ಲಿ ಆಳವಾದ ಗಾಯವಾಗಿದ್ದು, ಚಿರತೆ ದಾಳಿಯಿಂದ ಉಂಟಾಗಿರುವ ಶಂಕೆ ವ್ಯಕ್ತವಾಗಿದೆ. ಸಮೀಪದ ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಕೂಡ ಆಗಾಗ ಚಿರತೆ ದಾಳಿ ನಡೆಯುತ್ತಿದ್ದು ಜಾನುವಾರು, ಸಾಕು ನಾಯಿಗಳು ಬಲಿಯಾಗುತ್ತಿವೆ.
ಅರಣ್ಯ ಇಲಾಖೆಯ ಡಿಆರ್‌ಎಫ್‌ಒಗಳಾದ ಅಧಿಕಾರಿ ಯತೀಂದ್ರ, ಭವಾನಿ ಶಂಕರ, ಪಾಂಡುರಂಗ ಕಮತಿ, ಸಿಬಂದಿ ಕಿಟ್ಟು ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಶು ಸಂಗೋಪನ ಇಲಾಖೆ ನೆರಿಯದ ವೈದ್ಯಾಧಿಕಾರಿ ಡಾ| ಯತೀಶ್ ಕುಮಾರ್ ಮರಣೋತ್ತರ ಪರೀಕ್ಷೆ ನಡೆಸಿದರು. ಕಕ್ಕಿಂಜೆಯ ಸ್ನೇಕ್ ಅನಿಲ್ ಸಹಕರಿಸಿದರು. ಬಳಿಕ ಕಡವೆಯ ಮೃತದೇಹವನ್ನು ದಹನ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.