Price: ಸದ್ಯದಲ್ಲೇ ಪೆಟ್ರೋಲ್, ಡೀಸೆಲ್ ದರ 5-10 ರೂ. ಇಳಿಕೆ ಸಾಧ್ಯತೆ
Team Udayavani, Jan 18, 2024, 12:22 AM IST
ಹೊಸದಿಲ್ಲಿ: ಮುಂದಿನ ತಿಂಗಳು ತೈಲ ಕಂಪೆನಿಗಳು ಪ್ರತೀ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 5ರಿಂದ 10 ರೂ.ವರೆಗೆ ತಗ್ಗಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ತಗ್ಗಿದ್ದ ಹಿನ್ನೆಲೆಯಲ್ಲಿ 2023-24 ಹಣಕಾಸು ವರ್ಷದ ಮೂರನೇ ತ್ತೈಮಾಸಿಕದಲ್ಲಿ ತೈಲ ಕಂಪನಿಗಳು 75,000 ಕೋಟಿ ರೂ. ನಿವ್ವಳ ಲಾಭ ಗಳಿಸಿವೆ.
2023-24 ಹಣಕಾಸು ವರ್ಷದ ಮೊದಲ ಆರು ತಿಂಗಳಲ್ಲಿ ಭಾರತದ ಮೂರು ತೈಲ ಕಂಪನಿಗಳ ನಿವ್ವಳ ಲಾಭ 57,091.87 ಕೋಟಿ ರೂ. ಆಗಿದೆ. 2022-23 ಹಣಕಾಸು ವರ್ಷದ ಇದೇ ಅವಧಿಯಲ್ಲಿ ನಿವ್ವಳ ಲಾಭ 1,137.89 ಕೋಟಿ ರೂ. ಆಗಿತ್ತು. ಲಾಭ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ 5ರಿಂದ 10 ರೂ.ವರೆಗೆ ಇಳಿಕೆಯಾಗುವ ಸಾಧ್ಯತೆಯಿದೆ. ಈ ಕ್ರಮವು ಹಣದುಬ್ಬರ ತಗ್ಗಿಸುವ ಜತೆಗೆ ಮುಂಬರುವ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.