Vitla: ಮಾಣಿಗುತ್ತು ಧರ್ಮಚಾವಡಿ: ಪುನಃ ಪ್ರತಿಷ್ಠೆ, ಬ್ರಹ್ಮಕಲಶ
Team Udayavani, Jan 19, 2024, 1:19 AM IST
ವಿಟ್ಲ: ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನ ಹಾಗೂ ಮಾಣಿಗುತ್ತು ಭಂಡಾರದಮನೆ ಶ್ರೀ ಉಳ್ಳಾಲ್ತಿ, ಬೆಮ್ಮೆರ್, ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಗಳ ಧರ್ಮಚಾವಡಿಯ ಜೀರ್ಣೋದ್ಧಾರ ಪೂರ್ಣವಾಗಿದ್ದು, ಬ್ರಹ್ಮಕಲಶಕ್ಕೆ ಸಿದ್ಧತೆ ನಡೆಯುತ್ತಿದೆ.
ಜ. 20ರಿಂದ 25ರ ವರೆಗೆ ಮಾಣಿ ಶ್ರೀ ಉಳ್ಳಾಲ್ತಿ ಮಾಡದಲ್ಲಿ ವೇ|ಮೂ| ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವ, ಕೂಡುಕಟ್ಟಿನ ಯಜಮಾನತ್ವದಲ್ಲಿ ದೈವಗಳ ಧರ್ಮಚಾವಡಿಯಲ್ಲಿ ಪುನಃ ಪ್ರತಿಷ್ಠೆ, ಬ್ರಹ್ಮಕಲಶ ಹಾಗೂ ಫೆ. 5ರಂದು ಭಂಡಾರಯೇರಿ ಫೆ. 6ರಂದು ಕಾಲಾವಧಿ ಮೆಚ್ಚಿ ಜಾತ್ರೆ ನಡೆಯಲಿದೆ.
ಜ. 20ರಂದು ಬೆಳಗ್ಗೆ 10ಕ್ಕೆ ಭಜನೆ, 11ಕ್ಕೆ ಉಗ್ರಾಣ ಮುಹೂರ್ತ, ಮಧ್ಯಾಹ್ನ ಗಂಟೆ 1.30ರಿಂದ ಅರೆಬೆಟ್ಟು, ಕಲ್ಲಡ್ಕ, ಸೂರಿಕುಮೇರು, ಮಾಣಿ, ಕೊಡಾಜೆ ಮಾರ್ಗವಾಗಿ ಹಸುರುವಾಣಿ ಹೊರೆಕಾಣಿಕೆ ಮೆರವಣಿಗೆ ಧರ್ಮಚಾವಡಿಗೆ ತಲುಪಲಿದೆ.
ಜ. 21ರಂದು ಗಣಪತಿ ಹೋಮ, ಪ್ರಾಯಶ್ಚಿತ್ತ ಹೋಮ, ಶಾಂತಿ ಹೋಮ, ಭಜನೆ, ನೃತ್ಯಾಂಜಲಿ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ಜ. 22ರಂದು ಚಂಡಿಕಾ ಹೋಮ, ಜ. 23ರಂದು ಧಾರ್ಮಿಕ ವಿಧಿ, ಶ್ರೀ ಉಳ್ಳಾಲ್ತಿ ಮಾಡದಲ್ಲಿ ಬ್ರಹ್ಮಕಲಶ, ಮಹಾಪೂಜೆ, ಜ. 24ರಂದು ಧಾರ್ಮಿಕ ವಿಧಿ ನಡೆಯಲಿದೆ. ಜ. 25ರಂದು ಮಾಣಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶ, ಅನ್ನಸಂತರ್ಪಣೆ, ಸಂಜೆ 5.30ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮತ್ತು ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರೂ ಆಡಳಿತ ಮೊಕ್ತೇಸರರೂ ಆಗಿರುವ ಎಂ. ಸಚಿನ್ ರೈ ಮಾಣಿಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಬ್ರಹ್ಮಶ್ರೀ ವೇ|ಮೂ| ನೀಲೇಶ್ವರ ಪದ್ಮನಾಭ ತಂತ್ರಿಯವರು, ಮಹೇಶ್ ಮುನಿಯಂಗಳ, ಅನಂತ ಭಟ್ ಪಳನೀರು ಉಪಸ್ಥಿತರಿರುತ್ತಾರೆ.
ಇತಿಹಾಸ
ತುಳುನಾಡಿನ ಪುಣ್ಯಭೂಮಿ ಯಾದ ಸುಳ್ಳಮಲೆ, ಬಳ್ಳಮಲೆ ಬೆಟ್ಟದ ತೀರ್ಥಸ್ನಾನ ಬಹಳ ಪ್ರಸಿದ್ಧಿ ಪಡೆದಿದೆ. ಇದೇ ಸುಳ್ಳಮಲೆ ಬೆಟ್ಟದ ತಪ್ಪಲಿನಲ್ಲಿ ಕಂಬಳ ಮತ್ತು ಬಾಕಿಮಾರು ಗದ್ದೆಗಳ ಪ್ರಾಕೃತಿಕ ಪರಿಸರದಲ್ಲಿ ಧರ್ಮ ಚಾವಡಿ ಕಂಗೊಳಿಸುತ್ತದೆ. ಈ ಧರ್ಮ ಚಾವಡಿಗೆ ಅನೇಕ ವರ್ಷಗಳ ಇತಿಹಾಸವಿದ್ದು ಶ್ರೀ ಉಳ್ಳಾಲ್ತಿ, ಬೆಮ್ಮೆರ್, ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಗಳ ನೆಲೆಯಾಗಿದೆ.
ಚಾವಡಿ ಜೀರ್ಣಾವಸ್ಥೆ ಯಲ್ಲಿರುವುದನ್ನು ಮನಗಂಡು 20 ವರ್ಷಗಳ ಹಿಂದೆ ಹಳೆಯದನ್ನು ಕೆಡವಿ ನೂತನ ಚಾವಡಿ ನಿರ್ಮಿಸಿ, ಬ್ರಹ್ಮಕಲಶ ನಡೆಸಲಾಗಿತ್ತು. ಮತ್ತೆ ನಡೆದ ಪ್ರಶ್ನೆ ಚಿಂತನೆಯಲ್ಲಿ ದೈವಗಳ ನುಡಿಯ ಪ್ರಕಾರ ಗತಕಾಲದ ವೈಭವದಂತೆ ಚಾವಡಿಯನ್ನು ಮರು ನಿರ್ಮಾಣ ಮಾಡಬೇಕು ಎನ್ನುವ ಸಂಕಲ್ಪದಂತೆ ವೇ|ಮೂ| ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಅನುಜ್ಞಾ ಕಲಶ, ಭೂಮಿ ಪೂಜೆ, ಜೀರ್ಣೋದ್ಧಾರ ಕಾರ್ಯ ಆರಂಭಗೊಂಡಿತ್ತು. ವಾಸ್ತುಶಿಲ್ಪಿ ಮಹೇಶ್ ಮುನಿಯಂಗಳ ನಿರ್ದೇಶನದಂತೆ ಭಕ್ತರ ಧನಸಹಾಯ ಮತ್ತು ಶ್ರಮ ಸೇವೆಯಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ಇದೀಗ ಧರ್ಮ ಚಾವಡಿ ಎದ್ದು ನಿಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.