Belthangady: ಕಾಂಕ್ರೀಟ್‌ ಮಿಕ್ಸಿಂಗ್‌ ಲಾರಿ ಅವಾಂತರ; ಉರುಳಿದ ಕಂಬ


Team Udayavani, Jan 19, 2024, 1:22 AM IST

accident 2

ಬೆಳ್ತಂಗಡಿ: ಕಾಂಕ್ರೀಟ್‌ ಮಿಕ್ಸಿಂಗ್‌ ಲಾರಿಯೊಂದು ವಿದ್ಯುತ್‌ ತಂತಿಗಳಿಗೆ ಸಿಲುಕಿದ ಘಟನೆ ನಾಲ್ಕೂರು ಗ್ರಾಮದ ಸೂಳಬೆಟ್ಟು ಎನ್ನುವಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟು ಎಂಬಲ್ಲಿ ಲಾರಿಯ ಚಾಲಕ ಮೇಲ್ಭಾಗದಲ್ಲಿದ್ದ ವಿದ್ಯುತ್‌ ತಂತಿಗಳನ್ನು ಗಮನಿಸದೆ ಚಲಾಯಿಸಿದ್ದರಿಂದ ತಂತಿಗಳು ವಾಹನಕ್ಕೆ ಸಿಲುಕಿವೆ. ಅದು ಚಾಲಕನ ಗಮನಕ್ಕೆ ಬಾರದೆ ಆತ ಏಕಾಏಕಿ ಮುಂದೆ ಸಾಗಿದ್ದಾನೆ. ಇದರಿಂದ ತಂತಿಗಳೊಂದಿಗೆ ಎರಡು ಜೋಡಿ ಕಂಬಗಳು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದವು. ತಂತಿಗಳ ಘರ್ಷಣೆಯಿಂದ ಭಾರೀ ಬೆಂಕಿ ಕಾಣಿಸಿತ್ತು. ಕಾರ್ಕಳದ ಗುತ್ತಿಗೆ ಕಂಪೆನಿಯೊಂದರ ಲಾರಿಯಾಗಿದ್ದು, ಅದನ್ನು ಅಳದಂಗಡಿಯಲ್ಲಿ ತಡೆಹಿಡಿಯಲಾಗಿದೆ. ಚಾಲಕ ಕುಷ್ಟಗಿಯ ಕುಮಾರ್‌ನನ್ನು ವೇಣೂರು ಪೊಲೀಸ್‌ ಠಾಣೆಗೆ ಹಸ್ತಾಂತರಿಸಲಾಯಿತು. ಸ್ಥಳಕ್ಕೆ ಮೆಸ್ಕಾಂ ಎಂಜಿನಿಯರ್‌, ವೇಣೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾಹನಗಳ ಸಂಚಾರಕ್ಕೆ ಅಡಚಣೆ
ಘಟನೆಯಿಂದಾಗಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. 15 ವಿದ್ಯುತ್‌ ಪರಿವರ್ತಕಗಳ ವ್ಯಾಪ್ತಿಯ 800ಕ್ಕಿಂತ ಅಧಿಕ ಗ್ರಾಹಕರಿಗೆ ವಿದ್ಯುತ್‌ ಪೂರೈಕೆಯಲ್ಲಿ ಅಡಚಣೆ ಉಂಟಾಯಿತು. ಘಟನೆ ರಾತ್ರಿ ನಡೆದ ಕಾರಣ ಹಾಗೂ ತತ್‌ಕ್ಷಣ ವಿದ್ಯುತ್‌ ಸಂಪರ್ಕ ಕಡಿತಗೊಂಡಿರುವುದರಿಂದ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ.

ಘಟನೆಯಿಂದ ಮೆಸ್ಕಾಂಗೆ 70,000 ರೂ.ಗಿಂತ ಅಧಿಕ ನಷ್ಟ ಉಂಟಾಗಿದ್ದು, ಅದನ್ನು ಗುತ್ತಿಗೆ ಕಂಪೆನಿ ವತಿಯಿಂದ ಭರಿಸಲಾಗುವುದು ಎಂದು ಠಾಣೆಯಲ್ಲಿ ಮುಚ್ಚಳಿಕೆ ಬರೆಸಲಾಗಿದೆ. ಸದ್ಯಕ್ಕೆ ಕಂಬಗಳು ಮುರಿದ ಜಾಗದಲ್ಲಿ ತಾತ್ಕಾಲಿಕ ವ್ಯವಸ್ಥೆ ಕೈಗೊಂಡಿದ್ದು, ವಿದ್ಯುತ್‌ ಪೂರೈಕೆ ಮಾಡಲಾಗಿದೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.