Violence: ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ… ಐವರು ನಾಗರಿಕರು ಮೃತ್ಯು
Team Udayavani, Jan 19, 2024, 9:54 AM IST
ಇಂಫಾಲ್: ಮಣಿಪುರದಲ್ಲಿ ನಡೆದ ಎರಡು ಪ್ರತ್ಯೇಕ ಘರ್ಷಣೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಐವರು ನಾಗರಿಕರನ್ನು ಕೊಂದಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ.
ಪೊಲೀಸರ ಹೇಳಿಕೆಯ ಪ್ರಕಾರ, ಬಿಷ್ಣುಪುರ್ ಜಿಲ್ಲೆಯ ನಿಂಗ್‌ತೌಖೋಂಗ್ ಖಾ ಖುನೌದಲ್ಲಿ ನಾಲ್ವರು ನಾಗರಿಕರು ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಯ ಕಾಂಗ್‌ಚುಪ್ ಚಿಂಗ್‌ಖಾಂಗ್‌ನಲ್ಲಿ ಓರ್ವನನ್ನು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಕೊಂದಿದ್ದಾರೆ ಎಂದು ಹೇಳಿದ್ದಾರೆ.
ಬಿಷ್ಣುಪುರ ಜಿಲ್ಲೆಯಲ್ಲಿ ಹತ್ಯೆಗೀಡಾದ ನಾಲ್ವರು ನಾಗರಿಕರ ಹಂತಕರನ್ನು ಬಂಧಿಸಲು ಸರ್ವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಓಯಿನಮ್ ಬಮೊನ್‌ಜಾವೊ ಸಿಂಗ್ (61), ಅವರ ಮಗ ಒಯಿನಮ್ ಮಣಿತೊಂಬ ಸಿಂಗ್ (32), ಥಿಯಂ ಸೋಮೇಂದ್ರೊ ಸಿಂಗ್ (55) ಮತ್ತು ನಿಂಗ್‌ತೌಜಮ್ ನಬದ್ವೀಪ್ ಸಿಂಗ್ (40) ಎಂದು ಗುರುತಿಸಲಾಗಿದೆ.
ಕಾಂಗ್‌ಪೋಕ್ಪಿಯಲ್ಲಿ ಮೃತಪಟ್ಟ ನಾಗರಿಕನನ್ನು ಥಿಯಮ್ ಕೊಂಜಿನ್ ನಿವಾಸಿ ತಖೆಲ್ಲಂಬಮ್ ಮನೋರಂಜನ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕಾಂಗ್‌ಚುಪ್ ಚಿಂಗ್‌ಖಾಂಗ್ ಬಳಿಯ ಬಂಕರ್ ಹಿಲ್ಸ್ ಬಳಿ ಮನೋರಂಜನ್ ಮೃತದೇಹ ಪತ್ತೆಯಾಗಿದ್ದು ಇವರೆಲ್ಲರೂ ಬುಧವಾರ ಮತ್ತು ಗುರುವಾರ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Route Deviation: ಅಸ್ಸಾಂನಲ್ಲಿ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ವಿರುದ್ಧ ಪ್ರಕರಣ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.