Kalaburagi; ನಾನೂ ರಾಮ ಭಕ್ತ, ಆದರೆ ಅಯೋಧ್ಯೆಗೆ ಬರಲು ಆಹ್ವಾನ ನೀಡಿಲ್ಲ, ಹೋಗಲ್ಲ: ಶೆಟ್ಟರ್
Team Udayavani, Jan 19, 2024, 2:39 PM IST
ಕಲಬುರಗಿ: “ನೋಡಿ, ನಾನು ರಾಮಭಕ್ತ… ಹಿಂದೆ ಬಿಜೆಪಿಯಲ್ಲಿದ್ದಾಗ ರಾಮಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುವಾಗ ಈ ಭಾಗದಿಂದ ಎರಡು ಕೋಟಿ ರೂಪಾಯಿಗಳನ್ನು ಸಂಗ್ರಹ ಮಾಡಿ ಕೊಟ್ಟಿದ್ದೇವೆ. ಆದರೆ ನಮಗೆ ಅಧಿಕೃತವಾಗಿ ಆಹ್ವಾನ ಬಂದಿಲ್ಲ. ಹೀಗಾಗಿ ಅಯೋಧ್ಯೆಗೆ ಹೋಗುವುದಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಹೇಳಿದರು.
ನದರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ನಿಧಿ ಸಂಗ್ರಹಕ್ಕೆ ನಮಗೆ ಸೂಚಿಸಿತ್ತು. ಆದರೆ ಇವತ್ತು ಆಹ್ವಾನ ಬಂದಿಲ್ಲ. ಬಂದಾಗ ನೋಡೋಣ ಎಂದರು.
ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುತ್ತಾರಲ್ಲಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು ಒಂದು ವೇಳೆ ಕಾಂಗ್ರೆಸ್ ಹಿಂದು ವಿರೋಧಿಯೇ ಆಗಿದ್ದರೆ ಕರ್ನಾಟಕದಲ್ಲಿ ಕಳೆದ ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಗೆಲ್ಲಲು ಹೇಗೆ ಸಾಧ್ಯವಾಗುತ್ತಿತ್ತು ಎಂದರು. ಅದರಲ್ಲಿ ಹಿಂದೂಗಳು ಮತ ಹಾಕಿಲ್ಲವೇ ಎಂದು ಪ್ರಶ್ನಿಸಿದರು.
ಹಿಂದಿನಿಂದಲೂ ಒಂದು ಮಾತಿದೆ, ಧರ್ಮದಲ್ಲಿ ರಾಜಕಾರಣ ಬೇಡ ಆದರೆ ರಾಜಕಾರಣದಲ್ಲಿ ಧರ್ಮ ಒಪ್ಪಿತವಾದದ್ದು, ಅದರೆ ಚರ್ಚೆ ಅನಗತ್ಯ. ಆದರೆ ರಾಮ ಮಂದಿರದ ವಿಚಾರದಲ್ಲಿ ಬಿಜೆಪಿ ಲೋಕಸಭೆಯ ಚುನಾವಣೆಯನ್ನು ಮುಂದಿಟ್ಟುಕೊಂಡು ಮಾಡುತ್ತಿರುವಂತಹ ಕಾರ್ಯ ಇದು ರಾಜಕಾರಣವಾಗುತ್ತದೆ ಎಂದರು.
ಕಾಂಗ್ರೆಸ್ ನಲ್ಲಿ ಅಮಾಧಾನದಿಂದ ಇದ್ದೇನೆ. ನಾನು ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್ ಗೆ ಬಂದಿದ್ದೇನೆ. ಹಾಗೂ ಕಾಂಗ್ರೆಸ್ ನಲ್ಲಿ ಸಮಾಧಾನದಿಂದ ಇದ್ದೇನೆಲ್ಲ ಎಂದ ಶೆಟ್ಟರ್…ನೀವೂ ಕಾಂಗ್ರೆಸ್ ನಲ್ಲಿ ಸಂತೋಷದಿಂದ ಇದ್ದಿರಾ? ಎಂದು ಕೇಳಿದಾಗಲೂ ನಾನು ಸಮಾಧಾನದಿಂದ ಇದ್ದೇನಲ್ಲಾ ಎಂದು ಅರ್ಥಗರ್ಭಿತವಾಗಿ ನುಡಿದರು.
ಧಾರವಾಡ ಲೋಕಸಭೆಯಿಂದ ಕಣಕ್ಕಿಳಿಯುತ್ತಿರಾ ಎಂದ ಪ್ರಶ್ನೆಗೆ ನಾನು ಆಕಾಂಕ್ಷಿಯೂ ಅಲ್ಲ. ನನಗೆ ಸ್ಪರ್ಧಿಸುವ ಮನಸ್ಸಿಲ್ಲ ಎಂದರು.
ಬಸವಣ್ಣನವರನ್ನು ಸಾಂಕ್ಕೃತಿಕ ನಾಯಕ ಮಾಡಿರುವುದು ಚುನಾವಣೆಯಲ್ಲಿ ಕಾಂಗ್ರೆಸ್ ಗಿಮಿಕ್ ಅಲ್ಲವೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಬಹಳ ದಿನಗಳಿಂದಲೂ ಬೇಡಿಕೆ ಇತ್ತು. ಹಿಂದೆ ಕಾಂಗ್ರಸ್ ಮತ್ತು ಬಿಜೆಪಿ ಘೋಷಣೆ ಮಾಡಿಲ್ಲ. ಈಗ ಸಿದ್ಧರಾಮಯ್ಯ ಸರಕಾರ ಘೋಷಣೆ ಮಾಡಿದೆ. ಅದನ್ನು ಸ್ವಾಗತಿಸೋಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.