Agriculture ವಿವಿಯಿಂದ ರೈತರಿಗೆ ಅನಗತ್ಯ ತೊಂದರೆ; ಇರುವಕ್ಕಿ ಗ್ರಾಮಸ್ಥರ ಪ್ರತಿಭಟನೆ


Team Udayavani, Jan 19, 2024, 6:36 PM IST

Agriculture ವಿವಿಯಿಂದ ರೈತರಿಗೆ ಅನಗತ್ಯ ತೊಂದರೆ; ಇರುವಕ್ಕಿ ಗ್ರಾಮಸ್ಥರ ಪ್ರತಿಭಟನೆ

ಸಾಗರ: ತಾಲೂಕಿನ ಇರುವಕ್ಕಿ ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ರೈತರ ಜಮೀನು ಹೊರತುಪಡಿಸಿ, ಉಳಿದ ಜಮೀನು ಕೃಷಿ ವಿವಿಗೆ ಡಿನೋಟಿಫಿಕೇಶನ್ ಮಾಡಿ ಕೊಡಬೇಕು. ಸ್ಥಳೀಯ ರೈತರಿಗೆ ಕೃಷಿ ವಿಶ್ವವಿದ್ಯಾಲಯ ಅಧಿಕಾರಿಗಳು ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಗುರುವಾರ ಇರುವಕ್ಕಿ ನಮ್ಮ ಭೂಮಿ   ನಮ್ಮ ಹಕ್ಕು ಹೋರಾಟ ಸಮಿತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ತಾಲೂಕು ಪಂಚಾಯ್ತಿ ಮಾಜಿ ಸದಸ್ಯ ಸೋಮಶೇಖರ ಲ್ಯಾವಿಗೆರೆ, ಇರುವಕ್ಕಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಲ್ಲಿ ರೈತರು ನೂರಾರು ವರ್ಷಗಳಿಂದ ಕೃಷಿ ಇನ್ನಿತರೆ ಚಟುವಟಿಕೆ ಮಾಡಿಕೊಂಡು ಬರುತ್ತಿದ್ದಾರೆ. ಈಚೆಗೆ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯಾಗಿದ್ದು ಸುಮಾರು 772 ಎಕರೆ ಜಾಗವನ್ನು ವಿವಿಗೆ ಮಂಜೂರು ಮಾಡಲಾಗಿದೆ. ವಿವಿಗೆ ಮಂಜೂರು ಮಾಡಿರುವ ಜಾಗದಲ್ಲಿ ರೈತರ ಜಮೀನು, ಮನೆ, ಕೊಟ್ಟಿಗೆ ಬರುತ್ತಿದೆ. ವಿಶ್ವವಿದ್ಯಾಲಯ ಸುತ್ತಲೂ ಬೇಲಿ ಹಾಕಿ ತನ್ನ ಜಮೀನು ಬಂದೋಬಸ್ತು ಮಾಡಲು ಮುಂದಾಗಿದ್ದು ರೈತರ ಓಡಾಟದ ರಸ್ತೆಯನ್ನು ಮುಚ್ಚಲಾಗಿದೆ. ಕೃಷಿ ವಿಶ್ವವಿದ್ಯಾಲಯ ಬಂದಿದ್ದು ಒಳ್ಳೆಯದು. ಆದರೆ ರೈತರಿಗೆ ಅನಗತ್ಯ ತೊಂದರೆ ಕೊಟ್ಟರೆ ಸಹಿಸಲು ಸಾಧ್ಯವಿಲ್ಲ ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ಚೇತನರಾಜ್ ಕಣ್ಣೂರು ಮಾತನಾಡಿ, ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ರೈತರ ಮನೆ ಜಮೀನು ಕೆರೆಕಟ್ಟೆಗಳಿವೆ. ರೈತರು ಕೆರೆ ಅಭಿವೃದ್ಧಿ ಮಾಡಿದ್ದು ಅದು ಸಹ ವಿಶ್ವವಿದ್ಯಾಲಯ ಬೌಂಡರಿಯಲ್ಲಿ ಸೇರಿದೆ. ಕೃಷಿ ವಿಶ್ವವಿದ್ಯಾಲಯ ಅಧಿಕಾರಿಗಳು ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಕೊಡಬಾರದು. ರೈತರ ಸಮಸ್ಯೆಯನ್ನು ಶಾಸಕರ ಗಮನಕ್ಕೆ ತಂದಿದ್ದು ಶಾಸಕರು ಜಿಲ್ಲಾಧಿಕಾರಿಗಳು, ಕೃಷಿ ವಿಶ್ವವಿದ್ಯಾಲಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಕೊಡಬೇಡಿ ಎಂದು ಸೂಚನೆ ನೀಡಿದ್ದಾರೆ. ಸರ್ಕಾರ ಕೃಷಿ ವಿಶ್ವವಿದ್ಯಾಲಯಕ್ಕೆ ಭೂಮಿ ಡಿನೋಟಿಫಿಕೇಶನ್ ಮಾಡಿಕೊಡುವಾಗ ರೈತರ ಜಮೀನು ಬಿಟ್ಟು ಮಂಜೂರಾತಿ ಕೊಡಬೇಕು ಎಂದರು.

ಮನವಿ ಸಲ್ಲಿಕೆ ಸಂದರ್ಭದಲ್ಲಿ ಅರುಣ್ ಕರಡಿಮನೆ, ಉಮೇಶ್ ಕುಮಾರ್, ಸೋಮಶೇಖರ್, ಪ್ರವೀಣ್ ಕೆ.ವಿ., ಶಂಕರಪ್ಪ, ನವೀನ್, ತಾರಾಮೂರ್ತಿ, ಆನಂದ ಭೀಮನೇರಿ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ

police-ban

Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

missing

Mangaluru: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನಾಪತ್ತೆ

15

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.