Ayodhya ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ; 1,200ಕ್ಕೂ ಅಧಿಕ ದೇಗುಲಗಳಲ್ಲಿ ನೇರಪ್ರಸಾರ


Team Udayavani, Jan 19, 2024, 11:59 PM IST

Ayodhya ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ; 1,200ಕ್ಕೂ ಅಧಿಕ ದೇಗುಲಗಳಲ್ಲಿ ನೇರಪ್ರಸಾರ

ಮಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜ. 22ರಂದು ನಡೆಯುವ ಪ್ರಾಣಪ್ರತಿಷ್ಠೆ ಸಂದರ್ಭ ಕರಾವಳಿಯ 1,200ಕ್ಕೂ ಅಧಿಕ ಧಾರ್ಮಿಕ ಕೇಂದ್ರಗಳಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಅಯೋಧ್ಯೆಯ ಕಾರ್ಯಕ್ರಮದ ನೇರಪ್ರಸಾರಕ್ಕೆ ಸಿದ್ಧತೆ ಮಾಡಲಾಗಿದೆ ಎಂದು ವಿಶ್ವಹಿಂದೂ ಪರಿಷತ್‌ ತಿಳಿಸಿದೆ.

ಕದ್ರಿ ಮಂಜುನಾಥ ದೇವಸ್ಥಾನ, ಮಂಗಳಾದೇವಿ, ಪಾಂಡೇಶ್ವರ ಮಹಾಲಿಂಗೇಶ್ವರ, ಮರೋಳಿ ಸೂರ್ಯ ನಾರಾಯಣ, ಪುತ್ತೂರು ಮಹಾಲಿಂಗೇ ಶ್ವರ, ಕಟೀಲು ದುರ್ಗಾಪರಮೇಶ್ವರೀ, ಉಜಿರೆ ಜನಾರ್ದನ ದೇವಸ್ಥಾನ, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವ ಸ್ಥಾನ, ಉಡುಪಿ ಶ್ರೀಕೃಷ್ಣ ಮಠ, ಕುಂದಾ ಪುರದ ಕುಂದೇಶ್ವರ ದೇವಸ್ಥಾನ, ಮಡಿಕೇರಿಯ ಓಂಕಾರೇಶ್ವರ ಮತ್ತು ಭಾಗಮಂಡಲ ದೇವಸ್ಥಾನ ಸೇರಿದಂತೆ ವಿವಿಧೆಡೆ ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಮುಜರಾಯಿ ಇಲಾಖೆಯು ಎಲ್ಲ ದೇವಸ್ಥಾನಗಳಲ್ಲಿ ವಿಶೇಷ
ಪೂಜೆ ನಡೆಸುವಂತೆ ಆದೇಶ ನೀಡಿದ್ದು,ಇದರಲ್ಲಿ ಪ್ರತಿಯೊಬ್ಬ ಹಿಂದೂ ಭಾಗವಹಿಸಬೇಕು ಎಂದು ವಿನಂತಿಸಿದೆ.
ಆದ್ದರಿಂದ ಉದ್ಯಮಿಗಳು, ಸಂಘ-ಸಂಸ್ಥೆಗಳು, ವ್ಯಾಪಾರ ಮಳಿಗೆಗಳು, ಶಾಲಾ ಕಾಲೇಜು ಆಡಳಿತ ಮಂಡಳಿಗಳು, ಸರಕಾರಿ ಕಚೇರಿಗಳು ತಮ್ಮ ಉದ್ಯೋಗಿ, ಸಿಬಂದಿಗೆ, ವಿದ್ಯಾರ್ಥಿಗಳಿಗೆ ಭಾಗವಹಿಸಲು ಅನುಕೂಲ ಕಲ್ಪಿಸಬೇಕು ಎಂದು ವಿಹಿಂಪ ಮನವಿ ಮಾಡಿದೆ.

7 ಲಕ್ಷ ಮನೆಗಳಿಗೆ ಮಂತ್ರಾಕ್ಷತೆ
ಜ. 1ರಿಂದ 15ರ ತನಕ ನಡೆದ ಪವಿತ್ರ ಮಂತ್ರಾಕ್ಷತೆ ವಿತರಣೆ ಯಶಸ್ವಿಯಾಗಿ ನಡೆದಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಕರಾವಳಿಯಲ್ಲಿ 7 ಲಕ್ಷ ಮನೆಗಳಿಗೆ ಪವಿತ್ರ ಮಂತ್ರಾಕ್ಷತೆ ವಿತರಿಸಲಾಗಿದೆ.

ಮನೆಯಲ್ಲಿ ಕನಿಷ್ಠ 5 ದೀಪ ಬೆಳಗಿಸಿ
ಪ್ರಾಣ ಪ್ರತಿಷ್ಠಾಪನೆಯ ದಿನ ಸಂಜೆ ಸೂರ್ಯಾಸ್ತವಾದ ಮೇಲೆ ಪ್ರತಿಯೊಬ್ಬ ರಾಮಭಕ್ತನೂ ತನ್ನ ಮನೆಯ ಮುಂದೆ ಎಲ್ಲ ದೇವಾದಿ ದೇವತೆಗಳನ್ನು ಪ್ರಸನ್ನಗೊಳಿಸಲು ಕನಿಷ್ಠ 5 ದೀಪಗಳನ್ನು ಬೆಳಗುವುದರೊಂದಿಗೆ ಮತ್ತೂಂದು ದೀಪಾವಳಿ ಆಚರಿಸಬೇಕು. ಮನೆಯವರೆಲ್ಲ ಸೇರಿ ಅಯೋಧ್ಯೆ ಶ್ರೀರಾಮ ಮಂದಿರವಿರುವ ಉತ್ತರ ದಿಕ್ಕಿಗೆ ಮುಖ ಮಾಡಿ ಮಹಾಮಂಗಳಾರತಿ ಮಾಡುವ ಮೂಲಕ ಶ್ರೀ ರಾಮಚಂದ್ರ ದೇವರ ಕೃಪೆಗೆ ಪಾತ್ರರಾಗಬೇಕೆಂದು ವಿಹಿಂಪ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

4

Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!

2(1

Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್‌

1(1

Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.