![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jan 20, 2024, 12:13 AM IST
ಹಾಸನ: ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲು ನೀಡಲು ರಾಜ್ಯ ಸರಕಾರ ಸಂಪುಟ ಸಭೆಯಲ್ಲಿ ತುರ್ತು ನಿರ್ಣಯ ಕೈಗೊಂಡು ಕೇಂದ್ರಕ್ಕೆ ಶಿಫಾರಸು ಮಾಡಿರುವುದನ್ನು ರಾಜಕೀಯವಾಗಿಯೇ ಎದುರಿಸುವುದಾಗಿ ಹೇಳಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಲೋಕಸಭಾ ಚುನಾವಣೆಯಲ್ಲೂ ಈ ವಿಷಯವನ್ನೇ ಪ್ರಧಾನವಾಗಿ ತೆಗೆದುಕೊಂಡು ಜನರ ಮುಂದೆ ಹೋಗುವುದಾಗಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರವೇ ಪರಿಶಿಷ್ಟ ಸಮುದಾಯದ ಉಪ ಜಾತಿಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಬಹುದಿತ್ತು. ನಾನು ಮುಖ್ಯಮಂತ್ರಿ ಆಗಿದ್ದಾಗ ಎಂ.ಪಿ. ಪ್ರಕಾಶ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದೆ. ಅದರಲ್ಲಿ ಸಿದ್ದರಾಮಯ್ಯ, ಪಿ.ಜಿ.ಆರ್. ಸಿಂಧ್ಯಾ, ಜಾಲಪ್ಪ, ಡಿ. ಮಂಜುನಾಥ್ ಇದ್ದರು. ಅವರ ಸಲಹೆಯಂತೆ ಪರಿಶಿಷ್ಟ ಜಾತಿಯ ಉಪ ಜಾತಿಗಳಿಗೆ ನ್ಯಾಯ ಕಲ್ಪಿಸಿದ್ದೆ ಎಂದು ಹೇಳಿದರು
ಎಲ್ಲ ಸಮುದಾಯದಲ್ಲೂ ಮೀಸಲಾತಿ ಫಲವನ್ನು ಪ್ರಭಾವಿ ಕುಟುಂಬಗಳೇ ಪಡೆದುಕೊಂಡಿವೆ ಎಂದು ಆರೋಪಿಸಿದ ಅವರು, ನಾನು ಒಕ್ಕಲಿಗ ಅನ್ನೋ ಕಾರಣಕ್ಕೆ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರು, ಅಲ್ಪ ಸಂಖ್ಯಾಕರಿಗೆ ಕೊಟ್ಟ ಮೀಸಲಾತಿ ಸೌಲಭ್ಯಗಳ ಬಗ್ಗೆ ಯಾರೂ ಮಾತನಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕಳೆದ ಚುನಾವಣೆ ಸಂದರ್ಭ É ಒಳ ಮೀಸಲಾತಿ ಜಾರಿಗೆ ತಂದೇ ತರುವುದಾಗಿ ಕಾಂಗ್ರೆಸ್ಸಿನವರು ಹೇಳಿದ್ದರು. ಆದರೆ ಈಗ ಕೇಂದ್ರಕ್ಕೆ ವರ್ಗಾವಣೆ ಮಾಡಿದ್ದಾರೆ. ಒಳ ಮೀಸಲಾತಿ ವಿವಾದ ಜೀವಂತವಾಗಿರಬೇಕು ಎಂಬುದೇ ಕಾಂಗ್ರೆಸ್ ಸರಕಾರ ಉದ್ದೇಶವಿರಬೇಕು ಎಂದು ತರಾಟೆಗೆ ತೆಗೆದುಕೊಂಡರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.