![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jan 20, 2024, 12:31 AM IST
ಹೊಸದಿಲ್ಲಿ: ಏಕಕಾಲದಲ್ಲಿ ವಿಧಾನಸಭೆ ಮತ್ತು ಲೋಕಸಭೆಗೆ ಚುನಾವಣೆ ನಡೆಸುವ “ಒಂದು ದೇಶ; ಒಂದು ಚುನಾವಣೆ’ ಪ್ರಸ್ತಾವವನ್ನು ಕಾಂಗ್ರೆಸ್ ಒಪ್ಪುವುದಿಲ್ಲ ಎಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದರ ಪರಿಶೀಲನೆಗೆಂದು ರಚಿಸಲಾದ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯನ್ನು ವಿಸರ್ಜಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೇಂದ್ರ ಸರಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷ, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಬರೆದ ಪತ್ರದಲ್ಲಿ ಖರ್ಗೆ ಅವರು ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಒಂದು ದೇಶ; ಒಂದು ಚುನಾವಣೆ ಎನ್ನುವ ಪರಿಕಲ್ಪನೆ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾದದ್ದು. ಅದು ಒಕ್ಕೂಟ ವ್ಯವಸ್ಥೆಗೆ ಮಾರಕವಾದದ್ದು ಎಂದೂ ಹೇಳಿದ್ದಾರೆ.
ಮಾಜಿ ರಾಷ್ಟ್ರಪತಿಯವರನ್ನು ಇಂಥ ಸಮಿತಿಗೆ ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಮೂಲಕ ಕೇಂದ್ರ ಸರಕಾರವು ರಾಷ್ಟ್ರಪತಿಗಳ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡಿದೆ. ಅದಕ್ಕೆ ಕೋವಿಂದ್ ಅವಕಾಶ ನೀಡಬಾರದು ಎಂದು ಖರ್ಗೆ ಮನವಿ ಮಾಡಿದ್ದಾರೆ. ಸಮಿತಿಯ ಮೂಲಕ ಕೇಂದ್ರ ಸರಕಾರ ಸಾಂವಿಧಾನಿಕ ಮತ್ತು ಪ್ರಜಾತ್ತಾತ್ಮತ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ.
ಕಣ್ಣೊರೆಸುವ ತಂತ್ರ ಎಂದು ಟೀಕೆ: “ಪ್ರಜಾಪ್ರಭುತ್ವ ವ್ಯವಸ್ಥೆಯ ವೈವಿಧ್ಯತೆ ಉಳಿಯಬೇಕೆಂದರೆ, ಏಕ ಚುನಾವಣೆ ನಡೆಸಕೂಡದು. ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಬಗ್ಗೆ ಸಮಿತಿ ಈಗಾಗಲೇ ತೀರ್ಮಾನ ಕೈಗೊಂಡಂತೆ ಕಾಣುತ್ತಿದೆ. ರಾಜಕೀಯ ಪಕ್ಷಗಳು, ಮುಖಂಡರಿಂದ ಸಲಹೆಯನ್ನು ಆಹ್ವಾನಿಸಿರುವುದು ಕೇವಲ ಕಣ್ಣೊರೆಸುವ ತಂತ್ರ ಎಂದು ಖರ್ಗೆ ಪತ್ರದಲ್ಲಿ ಆರೋಪಿಸಿದ್ದಾರೆ. ಜತೆಗೆ ಸಮಿತಿಯಲ್ಲಿ ವಿಪಕ್ಷಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡಲಾಗಿಲ್ಲ ಎಂದೂ ದೂರಿದ್ದಾರೆ.
ಖರ್ಗೆ ಬರೆದ ಪತ್ರದಲ್ಲಿ ಏನಿದೆ?
ಒಂದು ದೇಶ, ಒಂದು ಚುನಾವಣೆಯನ್ನು ಕಾಂಗ್ರೆಸ್ ಪ್ರಬಲವಾಗಿ ವಿರೋಧಿಸುತ್ತದೆ
ದೇಶದ ಸಾಂವಿಧಾನಿಕ ಮತ್ತು ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಈ ಪದ್ಧತಿ ಮಾರಕ
ಪರಿಶೀಲನೆಗೆ ಸಮಿತಿ ರಚಿಸುವ ಮೂಲಕ ಕೇಂದ್ರ ಸರಕಾರದಿಂದ ಮಾಜಿ ರಾಷ್ಟ್ರಪತಿಗಳ ಹುದ್ದೆ ದುರುಪಯೋಗ
ಅವಧಿಗೆ ಮುನ್ನವೇ ವಿಧಾನಸಭೆಗಳ ವಿಸರ್ಜನೆ ಜನಾದೇಶಕ್ಕೆ ಮಾಡುವ ಅವಮಾನ
ಸಲಹೆಗಳಿಗೆ ಆಹ್ವಾನ ಎನ್ನುವುದು ಕೇವಲ ಕಣ್ಣೊರೆಸುವ ತಂತ್ರವಾಗಿದೆ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.