Deepfake video: ರಶ್ಮಿಕಾ ಮಂದಣ್ಣ ಡೀಪ್ ಫೇಕ್ ಪ್ರಕರಣ; ಪ್ರಮುಖ ಆರೋಪಿ ಬಂಧನ
Team Udayavani, Jan 20, 2024, 4:34 PM IST
ಆಂಧ್ರ ಪ್ರದೇಶ: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ಶನಿವಾರ(ಜ.20 ರಂದು) ಪೊಲೀಸರು ಬಂಧಿಸಿದ್ದಾರೆ.
ದೆಹಲಿ ಪೊಲೀಸರು ಆಂಧ್ರ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿರುವುದು ವರದಿಯಾಗಿದೆ. ಆರೋಪಿಯನ್ನು ಆಂಧ್ರಪ್ರದೇಶದ ಗುಂಟೂರಿನ 24 ವರ್ಷದ ಈಮನಿ ನವೀನ್ ಎಂದು ಗುರುತಿಸಲಾಗಿದೆ.
ಕಳೆದ ನವೆಂಬರ್ ನಲ್ಲಿ ನಟಿ ರಶ್ಮಿಕಾ ಅವರ ಮುಖವನ್ನು ಬಳಸಿಕೊಂಡು ಇಂಡೋ – ಬ್ರಿಟಿಷ್ ಸೋಶಿಯಲ್ ಮೀಡಿಯಾ ತಾರೆ ಝಾರಾ ಪಟೇಲ್ ವಿಡಿಯೋಗೆ ಬಳಸಿ ಆಶ್ಲೀಲವಾಗಿ ಎಡಿಟ್ ವಿಡಿಯೋವನ್ನು ವೈರಲ್ ಮಾಡಲಾಗಿತ್ತು.
ಈ ವಿಡಿಯೋ ಬಳಿಕ ರಶ್ಮಿಕಾ ಪರವಾಗಿ ಅನೇಕ ಕಲಾವಿದರು ಧ್ವನಿ ಎತ್ತಿದ್ದರು. ರಶ್ಮಿಕಾ ಈ ಘಟನೆಯಿಂದ ನೊಂದುಕೊಂಡಿದ್ದರು. ಇದಾದ ಬಳಿಕ ಡೀಪ್ ಫೇಕ್ ಪ್ರಕರಣ ಹೆಚ್ಚಾಗಿತ್ತು. ಕತ್ರಿನಾ ಕೈಫ್ ಅವರ ವಿಡಿಯೋ ಕೂಡ ವೈರಲ್ ಆಗಿತ್ತು.
ಇದನ್ನೂ ಓದಿ: Sania-Shoaib .. ಪ್ರೇಮ್ ಕಹಾನಿಯಿಂದ ಸದ್ದು ಮಾಡಿದ ಇಂಡೋ – ಪಾಕ್ ಸೆಲೆಬ್ರಿಟಿಗಳಿವರು
ಕೇಂದ್ರ ಸರ್ಕಾರ ಡೀಪ್ ಫೇಕ್ ಸಂಬಂಧಿಸಿದಂತೆ ಕಾನೂನು ರಚಿಸುವ ಕುರಿತು ಹೇಳಿತ್ತು. ಘಟನೆಯ ನಂತರ ದೆಹಲಿ ಪೊಲೀಸರು ಭಾರತೀಯ ದಂಡ ಸಂಹಿತೆ, 1860 ರ ಸೆಕ್ಷನ್ 465 (ನಕಲಿ) ಮತ್ತು 469 (ಪ್ರತಿಷ್ಠೆಗೆ ಹಾನಿ) ಮತ್ತು ಮಾಹಿತಿ ತಂತ್ರಜ್ಞಾನದ 66 ಸಿ (ಗುರುತಿನ ಕಳ್ಳತನ) ಮತ್ತು 66 ಇ (ಗೌಪ್ಯತೆ ಉಲ್ಲಂಘನೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು.
ಇದೀಗ ದೆಹಲಿ ಪೊಲೀಸರು ಆಂಧ್ರ ಪ್ರದೇಶದಲ್ಲಿ ಡೀಪ್ ಫೇಕ್ ವಿಡಿಯೋ ವೈರಲ್ ಮಾಡಿದ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಸಚಿನ್ ತೆಂಡೂಲ್ಕರ್ ಹಾಗೂ ಅವರ ಮಗಳು ಸಾರಾ ಅವರ ಮುಖವನ್ನು ಬಳಸಿಕೊಂಡು ಡೀಪ್ ಫೇಕ್ ಮಾಡಲಾಗಿದೆ. ಈ ಸಂಬಂಧ ಮುಂಬಯಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.