Mantralaya: ಮಂತ್ರಾಲಯದಲ್ಲಿ 36 ಅಡಿ ಅಭಯರಾಮ ಮೂರ್ತಿ ಸ್ಥಾಪನೆ
Team Udayavani, Jan 20, 2024, 10:18 PM IST
ರಾಯಚೂರು: ಶ್ರೀಕ್ಷೇತ್ರ ಮಂತ್ರಾಲಯದ ಹೊರವಲಯದಲ್ಲಿ 36 ಅಡಿ ಎತ್ತರದ ಶ್ರೀ ಅಭಯ ರಾಮನ ಬೃಹತ್ ಶಿಲಾಮೂರ್ತಿ ತಲೆ ಎತ್ತಿದೆ.
32 ಅಡಿ ಎತ್ತರದ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಎದುರಲ್ಲೇ ಅಭಯ ರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಧನುರ್ಧಾರಿ ಶ್ರೀರಾಮನ ಮೂರ್ತಿ ಎಲ್ಲರನ್ನು ಆಕರ್ಷಿಸುತ್ತಿದೆ. ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರು ಶನಿವಾರ ಪೂಜೆ ನೆರವೇರಿಸಿದ ಬಳಿಕ ಕ್ರೇನ್ ಸಹಾಯದಿಂದ ಮೂರ್ತಿಯನ್ನು ಪದಸ್ಥಲದ ಪೀಠದಲ್ಲಿ ನಿಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಶ್ರೀ ಸುಬುಧೇಂದ್ರ ತೀರ್ಥರು, ಅಯೋಧ್ಯೆಯಲ್ಲಿ ಬಾಲರಾಮನ ಮೂರ್ತಿ ಸ್ಥಾಪನೆಯಾಗುತ್ತಿರುವ ಶುಭ ಮುಹೂರ್ತದಲ್ಲೇ ಮಂತ್ರಾಲಯದಲ್ಲೂ ಶ್ರೀರಾಮನ ಏಕಶಿಲಾ ಮೂರ್ತಿ ಸ್ಥಾಪಿಸಲಾಗಿದೆ. ಜ.22ರಂದು ಇಲ್ಲಿಯೂ ಸಾಂಕೇತಿಕವಾಗಿ ಪೂಜೆ ನೆರವೇರಿಸಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಶಿಲ್ಪಿ ಗುಡಿಗಾರ ಅವರ ಕೈಯಿಂದ ಮೂರ್ತಿ ಸುಂದರವಾಗಿ ಮೂಡಿ ಬಂದಿದೆ. ಈ ಸ್ಥಳದಲ್ಲಿ ಕಟ್ಟಡ, ಉದ್ಯಾನವನ ಸಹಿತ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯಬೇಕಿವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.