PDO ಗಳಿಗೆ ಕೌನ್ಸೆಲಿಂಗ್ ವರ್ಗ- ಪಂ. ರಾಜ್ ಇಲಾಖೆ ಚಿಂತನೆ
Team Udayavani, Jan 21, 2024, 12:53 AM IST
ಬೆಂಗಳೂರು: ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮುಂದಿನ ವರ್ಷದಿಂದ (2024-25) ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗಳ ಸಹಿತ ಇಲಾಖೆಯ ನೌಕರರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೊಳಿಸಲು ಸೇವಾ ನಿಯಮಗಳನ್ನು ರೂಪಿಸುತ್ತಿದೆ.
ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅಧಿಕಾರಿಗ ಳೊಂದಿಗೆ ಈ ಸಂಬಂಧ ಪೂರ್ವಭಾವಿ ಸಭೆ ನಡೆಸಿ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಪೂರಕ ಚಟುವಟಿಕೆಗಳು ಆರಂಭಗೊಂಡಿದ್ದು, ಈ ಸಂಬಂಧ ಸೇವಾ ನಿಯಮಗಳನ್ನು ರೂಪಿಸುವ ಪ್ರಕ್ರಿಯೆಯ ಹಂತ ತಲುಪಿದೆ.
ನೌಕರರ ಹಾಗೂ ಸರಕಾರದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೌನ್ಸೆಲಿಂಗ್ ಮಾದರಿ ವರ್ಗಾವಣೆ ಗಳನ್ನು ಮುಂದಿನ ಆರ್ಥಿಕ ವರ್ಷದಿಂದ ಜಾರಿಗೊಳಿಸಲಾಗುವುದು, ಪಂಚಾಯತ್ ಮಟ್ಟದಲ್ಲಿ ಅಧಿಕಾರಿ ಗಳು ಹಾಗೂ ನೌಕರರು ಸೇವಾ ಮನೋಭಾವದಿಂದ ಗ್ರಾಮೀಣ ಜನರಿಗೆ ನೆರವಾಗಬೇಕೆಂಬುದು ತಮ್ಮ ಆದ್ಯತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಪಿಡಿಒ ಹಾಗೂ ಪಂಚಾಯತ್ ಕಾರ್ಯದರ್ಶಿಗಳ ವರ್ಗಾವಣೆಗಳಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ಪದ್ಧತಿ ಜಾರಿಗೆ ತರುವು ದಾಗಿ ಸಚಿವರು ಹೇಳಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.