Sandalwood: ಜಸ್ಟ್ ಪಾಸ್ ಆದವರ ಹಾಡುಹಬ್ಬ
Team Udayavani, Jan 21, 2024, 12:20 PM IST
“ಜಸ್ಟ್‌ಪಾಸ್’ ಚಿತ್ರದ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಶಾಸಕ ಪ್ರದೀಪ್ ಈಶ್ವರ್ ಹಾಗೂ ಪತ್ರಕರ್ತ ವಿಶ್ವೇಶ್ವರ ಭಟ್ ಬಿಡುಗಡೆ ಮಾಡಿ ಶುಭಕೋರಿದರು.
ರಾಯ್ಸ್ ಎಂಟರ್ ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೆ.ವಿ.ಶಶಿಧರ್ ನಿರ್ಮಿಸಿರುವ ಈ ಚಿತ್ರವನ್ನು ಕೆ.ಎಂ.ರಘು ನಿರ್ದೇಶನ ಮಾಡಿದ್ದಾರೆ.ಚಿತ್ರದಲ್ಲಿ ಶ್ರೀ ಹಾಗೂ ಪ್ರಣತಿ ನಾಯಕ-ನಾಯಕಿ.ಕವಿರಾಜ್ ಬರೆದಿರುವ, ಹರ್ಷ ವರ್ಧನ್ ರಾಜ್ ಸಂಗೀತ ನೀಡಿರುವ “ಟೈಮಿಗೇ ಟೈಮೇನೇ ದುಶ್ಮನ್..’ ಹಾಡು ಬಿಡುಗಡೆಯಾಗಿ ಹಿಟ್‌ಲಿಸ್ಟ್ ಸೇರಿದೆ.
“ಪ್ರಪಂಚದಲ್ಲಿ ಹೆಚ್ಚು ಅಂಕ ಬಂದವರಿಗೆ ಸಾಕಷ್ಟು ಕಾಲೇಜುಗಳಿದೆ. ಆದರೆ ಜಸ್ಟ್‌ಪಾಸ್ ಆದವರಿಗಾಗಿಯೇ ನಮ್ಮ ಚಿತ್ರದಲ್ಲಿ ಕಾಲೇಜು ತೆರೆಯಲಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು ಹಾಗೂ ಟೀಸರ್ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ’ಎನ್ನುವುದು ನಿರ್ದೇಶಕ ರಘು ಮಾತು.
ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, “ನಿಜವಾಗಲೂ ನಮ್ಮ ದೇಶದಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯ ಎಂದರೆ ಅದು ಜಸ್ಟ್ ಪಾಸ್ ಆದರಿಂದ ಮಾತ್ರ. ಉದಾಹರಣೆಗೆ ನಾನೇ. ಜೀವನದಲ್ಲಿ ಸಾಕಷ್ಟು ಕಷ್ಟಪಟ್ಟ ನಾನು, ಇಂದು ಪರಿಶ್ರಮ ಅಕಾಡೆಮಿ ಸ್ಥಾಪಿಸಿ ಐನ್ನೂರಕ್ಕೂ ಹೆಚ್ಚು ಜನರಿಗೆ ಕೆಲಸ ನೀಡಿದ್ದೇನೆ. ವರ್ಷಕ್ಕೆ ಸಾಕಷ್ಟು ವಿದ್ಯಾರ್ಥಿಗಳು ನಮ್ಮ ಸಂಸ್ಥೆಯಿಂದ ವೈದ್ಯರಾಗುತ್ತಿದ್ದಾರೆ. ಜಸ್ಟ್‌ಪಾಸ್ ಆದೆ ಅಂತ ಬೇಜಾರು ಮಾಡಿಕೊಳ್ಳಬೇಡಿ. ನನಗೆ ತಿಳಿದ ಹಾಗೆ ಈ ಚಿತ್ರದ ಕಥೆಯೂ ಇದೇ ರೀತಿ ಇರಬಹುದು’ ಎನ್ನುತ್ತಾ ಚಿತ್ರತಂಡಕ್ಕೆ ಶುಭಕೋರಿದರು.
ನಾಯಕ ಶ್ರೀ, ನಾಯಕಿ ಪ್ರಣತಿ, ನಟ ಸುಚೇಂದ್ರ ಪ್ರಸಾದ್, ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್, ಛಾಯಾಗ್ರಾಹಕ ಸುಜಯ್ ಕುಮಾರ್ ಮೊದಲಾದವರು ಚಿತ್ರದ ಬಗ್ಗೆ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.