Israel-Hamas ಯುದ್ಧ: ಗಾಜಾದಲ್ಲಿ 25,105 ಮಂದಿ ಸಾವು
ಗಾಜಾ ಸರ್ಕಾರದಿಂದಲೇ ಅಧಿಕೃತ ಮಾಹಿತಿ
Team Udayavani, Jan 21, 2024, 9:33 PM IST
ರಫಾಹ್: ಕಳೆದ ಮೂರು ತಿಂಗಳುಗಳಿಂದ ಇಸ್ರೇಲ್ ಪಡೆಗಳು ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಗಾಜಾಪಟ್ಟಿಯಲ್ಲಿ 25,105 ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದರೆ, 62,681 ಮಂದಿ ಗಾಯಗೊಂಡಿದ್ದಾರೆ. ಕಳೆದ 24 ತಾಸುಗಳ ಅವಧಿಯಲ್ಲಿ ಗಾಜಾದ ಆಸ್ಪತ್ರೆಗಳಿಗೆ ಕನಿಷ್ಠ 178 ಮೃತದೇಹಗಳನ್ನು ತರಲಾಗಿದ್ದರೆ, ಸುಮಾರು 300 ಮಂದಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದೇ ವೇಳೆ ಇಸ್ರೇಲ್-ಹಮಾಸ್ ಉಗ್ರರ ನಡುವಣ ಕಾದಾಟದಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ.
ಕಳೆದ ವರ್ಷದ ಅ.7ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ಏಕಾಏಕಿ ಸರಣಿ ದಾಳಿ ನಡೆಸಿದ ಬಳಿಕ ಇತ್ತಂಡಗಳ ನಡುವೆ ಯುದ್ಧ ನಡೆಯುತ್ತಿದೆ. ಏತನ್ಮಧ್ಯೆ ಇಸ್ರೇಲ್ ಸೇನೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಹಮಾಸ್‌ನ 9,000 ಉಗ್ರರನ್ನು ಹತ್ಯೆಗೈದಿರುವುದಾಗಿ ತಿಳಿಸಿದ್ದು, ಕಾರ್ಯಾಚರಣೆ ವೇಳೆ 195 ಮಂದಿ ಯೋಧರನ್ನು ಕಳೆದುಕೊಂಡಿರುವುದಾಗಿ ಹೇಳಿದೆ. ಹಮಾಸ್ ಉಗ್ರರು ಜನವಸತಿ ಪ್ರದೇಶಗಳನ್ನು ತಮ್ಮ ಆಡಗುದಾಣಗಳನ್ನಾಗಿಸಿಕೊಂಡುರುವುದರಿಂದಾಗಿ ನಾಗರಿಕರು ಸಾವನ್ನಪ್ಪುವಂತಾಗಿದೆ. ಅಮಾಯಕ ನಾಗರಿಕರ ಸಾವಿಗೆ ಹಮಾಸ್ ಉಗ್ರರೇ ಕಾರಣ ಎಂದು ದೂರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.