Kacchur Malatidevi Temple; ತಳಸಮುದಾಯದಲ್ಲಿ ಆತ್ಮಸ್ಥೈರ್ಯ ಹೆಚ್ಚಲಿ: ಸಚಿವ ಮಹದೇವಪ್ಪ
ಕಚ್ಚೂರು ಮಾಲ್ತಿದೇವಿ ವಾರ್ಷಿಕ ಉತ್ಸವ
Team Udayavani, Jan 21, 2024, 10:14 PM IST
ಬ್ರಹ್ಮಾವರ: ದೇಶ ಕಟ್ಟುವ ಕಾರ್ಯದಲ್ಲಿ ತಳಸಮುದಾಯದ ಕೊಡುಗೆ ಅಪಾರ. ಅವರು ಒಗ್ಗಟ್ಟು, ಆತ್ಮಸ್ಥೈರ್ಯದಲ್ಲಿ ಮುನ್ನಡೆದು ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ| ಎಚ್.ಸಿ. ಮಹಾದೇವಪ್ಪ ಹೇಳಿದರು.
ಅವರು ರವಿವಾರ ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ, ಶ್ರೀ ಬಬ್ಬುಸ್ವಾಮಿ ಮೂಲಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದರು. ಸಮುದಾಯದ ಬೇಡಿಕೆಯನ್ನು ಹಂತ ಹಂತವಾಗಿ ಈಡೇರಿಸುವುದಾಗಿ ಭರವಸೆ ನೀಡಿದರು.
ಹೃದಯದಲ್ಲಿ ದೇವರು
ಭಗವಂತನು ಸರ್ವರ ಹೃದಯ ದಲ್ಲಿದ್ದಾನೆ. ಶೋಷಿತರು, ಬಡವರು, ನೊಂದವರಿಗೆ ಮಾಡಿದ ಸಹಕಾರ ಶೇ. 100ರಷ್ಟು ದೇವರನ್ನು ತಲುಪುತ್ತದೆ ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನದಲ್ಲಿ ಹೇಳಿದರು. ಧರ್ಮವಿಲ್ಲದೆ ಬದುಕಿಲ್ಲ, ಅದರಲ್ಲಿರುವ ತಪ್ಪು ತಿಳುವಳಿಕೆ, ಮೂಢನಂಬಿಕೆಯಿಂದ ಹೊರಬನ್ನಿ. ಶಿಕ್ಷಣದಿಂದ ಸಮುದಾಯ, ಕ್ಷೇತ್ರ ಅಭಿವೃದ್ಧಿಯಾಗುತ್ತದೆ. ಧನಾತ್ಮಕ ಚಿಂತನೆ ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದರು.
ಅಧ್ಯಕ್ಷ ಶಿವಪ್ಪ ನಂತೂರು ಅಧ್ಯಕ್ಷತೆ ವಹಿಸಿದ್ದರು. ಜನಪ್ರತಿನಿಧಿಗಳಾದ ಛಲವಾದಿ ನಾರಾಯಣಸ್ವಾಮಿ, ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಪ್ರಮುಖರಾದ ರಘುಪತಿ ಭಟ್,ವಿನಯ ಕುಮಾರ್ ಸೊರಕೆ, ಪ್ರಸಾದ್‌ರಾಜ್ ಕಾಂಚನ್, ಮೋಹನ್, ಹರೀಶ್ಚಂದ್ರ ಕಟಪಾಡಿ, ಶಂಕರ ಮಲ್ಲಾರ್, ರಮೇಶ್ ಡಿ., ಪ್ರಭಾಕರ ಹಾರಾಡಿ, ರಮೇಶ್ ಉಚ್ಚಿಲ, ಭೋಜರಾಜ್ ಕಾವ್ರಾಡಿ, ರವಿಪ್ರಕಾಶ್ ಮಾರ್ಪಳ್ಳಿ, ವಿರೂಪಾಕ್ಷ ಬಾರಕೂರು, ಉಮೇಶ್‌ಕುಮಾರ್ ಕಾಪಿಕಾಡ್, ಸುಬ್ರಹ್ಮಣ್ಯ ಪ್ರಸಾದ್, ಚಂದ್ರಶೇಖರ ವಾಮಂಜೂರು, ನವೀನ್ ಕುಮಾರ್ ಮುಕ್ಕ ಅತಿಥಿಗಳಾಗಿದ್ದರು. ವಿವಿಧ ಬಬ್ಬುಸ್ವಾಮಿದೇವಸ್ಥಾನಗಳ ಗುರಿಕಾರರು, ಸಂಘಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.
100ಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ, ದಾನಿಗಳಿಗೆ ಸಮ್ಮಾನ ಜರಗಿತು.
ಧರ್ಮದರ್ಶಿ ಗೋಕುಲ್‌ದಾಸ್ ಬಾರಕೂರು ಬಾರಕೂರು ಸ್ವಾಗತಿಸಿ, ಪ್ರ. ಕಾರ್ಯದರ್ಶಿ ಪ್ರೇಮಾನಂದ ಬಾರಕೂರು ವಂದಿಸಿದರು. ಸಂತೋಷ್ ಪಡುಬಿದ್ರಿ ನಿರೂಪಿಸಿದರು.
ಸಮುದಾಯ ಭವನಕ್ಕೆ ಬೇಡಿಕೆ
ಉಡುಪಿ ಜಿಲ್ಲೆಯ ಕಾಪು ತಾಲೂಕು, ದ.ಕ.ದ ಮಂಗಳೂರು ತಾಲೂಕು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಡಾಳ (ಪರಿಶಿಷ್ಟ ಜಾತಿ) ಸಮುದಾಯ ಭವನ ನಿರ್ಮಿಸಲು ಸಮಾಜ ಕಲ್ಯಾಣ ಇಲಾಖೆಯಿಂದ 21 ಕೋಟಿ ರೂ. ಅನುದಾನ ನೀಡುವಂತೆ ಕಚ್ಚಾರು ಕ್ಷೇತ್ರದ ಧರ್ಮದರ್ಶಿ ಗೋಕುಲ್‌ದಾಸ್ ಬಾರಕೂರು ಸಚಿವರಿಗೆ ಮನವಿ ಸಲ್ಲಿಸಿದರು. ಪ.ಜಾತಿ/ಪಂಗಡದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಹೆಚ್ಚಳ, ಗಂಗಾ ಕಲ್ಯಾಣ ಯೋಜನೆಯಲ್ಲಿ ರಿಯಾಯಿತಿ, ಭೂಮಿ ಪರಭಾರೆ ಮತ್ತು ವಾಣಿಜ್ಯ ಪರಿವರ್ತಿತ ಕುರಿತಂತೆ ಸಮುದಾಯದ ಪರವಾಗಿ ವಿನಂತಿಸಿದರು.
ಲಕ್ಷಾಂತರ ಮಂದಿ ಭಾಗಿ
ಶನಿವಾರ ರಾತ್ರಿಯ ಕೆಂಡ ಸೇವೆ, ರವಿವಾರದ ರಥೋತ್ಸವ, ಜನಪದ ಉತ್ಸವದಲ್ಲಿ ವಿವಿಧ ಜಿಲ್ಲೆಗಳ ಲಕ್ಷಾಂತರ ಭಕ್ತರು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.