Congress ನಿಂದ ಮತ್ತೆ ಸಮೀಕ್ಷೆ- ಚುನಾವಣ ಸಮಿತಿಗೆ ತೃಪ್ತಿ ತರದ ಸಚಿವರ ವರದಿ
Team Udayavani, Jan 21, 2024, 11:23 PM IST
ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಚುನಾವಣ ಸಮಿತಿ ಹಾಗೂ ರಾಜ್ಯ ಉಸ್ತುವಾರಿ ನಿರ್ದೇಶನದಂತೆ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ಪಕ್ಷದಿಂದ ಮತ್ತೂಂದು ಸುತ್ತಿನ ಸಮೀಕ್ಷೆ ಶುರುವಾಗಿದೆ.
ಅಭ್ಯರ್ಥಿಗಳ ಆಯ್ಕೆ ಬಗ್ಗೆ ಉಸ್ತುವಾರಿ ಸಚಿವರು ನೀಡಿದ ವರದಿ ಆಧರಿಸಿ ಮೂರು ದಿನಗಳ ಹಿಂದಷ್ಟೇ ಚುನಾವಣ ಸಮಿತಿ ಸಭೆ ನಡೆಸಿತ್ತು. ಅಲ್ಲಿ ಮತ್ತೂಂದು ಸುತ್ತಿನ ಸಭೆ ಜತೆಗೆ ಪಕ್ಷವು ಪ್ರತ್ಯೇಕ ಸಮೀಕ್ಷೆಗಳನ್ನು ನಡೆಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಆ ಪ್ರಕ್ರಿಯೆಗೆ ಈಗ ಚಾಲನೆ ನೀಡಲಾಗಿದೆ. ಇನ್ನೊಂದು ವಾರದಲ್ಲಿ ಇದು ಪೂರ್ಣಗೊಳ್ಳಲಿದ್ದು, ಉಸ್ತುವಾರಿ ಮತ್ತು ಎಐಸಿಸಿ ಕಾರ್ಯದರ್ಶಿಗೆ ವರದಿ ಸಲ್ಲಿಕೆಯಾಗಲಿದೆ.
ಈ ಮೊದಲು ಸಚಿವರು ನೀಡಿದ ವರದಿಯು ಪಕ್ಷದ ಚುನಾವಣ ಸಮಿತಿಗೆ ತೃಪ್ತಿ ತಂದಿಲ್ಲ. ಕೆಲವರು ತಮಗೆ ಬೇಕಾದವರ ಅಥವಾ ಬೆಂಬಲಿಗರ ಹೆಸರುಗಳನ್ನು ಶಿಫಾರಸು ಮಾಡಿದ್ದಾರೆ. ತಮ್ಮ ಸಂಬಂಧಿಕರೂ ಸಹಿತ 5-6 ಹೆಸರುಗಳನ್ನು ಹಲವರು ಉಲ್ಲೇಖೀಸಿದ್ದಾರೆ. ಇದು ಚುನಾವಣ ಸಮಿತಿಗೆ ತುಸು ಬೇಸರ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಸಚಿವರನ್ನು ಚುನಾವಣ ಸಮಿತಿಯು ಮತ್ತೂಮ್ಮೆ “ಕಣ’ಗೆ ಇಳಿಸಿದೆ. ಈ ಬಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ, ಪಟ್ಟಿ ನೀಡಲು ನಿರ್ದೇಶಿಸಿದೆ ಎನ್ನಲಾಗಿದೆ.
ಪರ್ಯಾಯ ಸಮೀಕ್ಷೆ
ಸಚಿವರು ನಡೆಸುವ ಸಮೀಕ್ಷೆಗೆ ಪರ್ಯಾಯವಾಗಿ ಕಾಂಗ್ರೆಸ್ ವರಿಷ್ಠರು ಮತ್ತೂಂದು ಕಡೆಯಿಂದ ಹಲವು ಸಮೀಕ್ಷೆಗಳನ್ನು ನಡೆಸಲು ನಿರ್ಧರಿಸಿದ್ದಾರೆ. ಖಾಸಗಿಯಾಗಿ ಮತ್ತು ಪಕ್ಷದಲ್ಲೇ ಆಂತರಿಕವಾಗಿ ನಡೆಯುವ ಈ ಸರ್ವೇಯಲ್ಲಿ ಸ್ಥಳೀಯ ಮಟ್ಟದಲ್ಲಿ ನಿರ್ದಿಷ್ಟ ಪ್ರಶ್ನೆಗಳ ಮಾದರಿಗಳೊಂದಿಗೆ ಅಭಿಪ್ರಾಯ ಸಂಗ್ರಹಿಸಲು ಉದ್ದೇಶಿಸಲಾಗಿದೆ. ಈ ಹಿಂದೆ ಸೋತ ಅಭ್ಯರ್ಥಿಗಳು ಈಗ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದಾರೆಯೇ? ಸೋಲಿನ ಅಂತರ ಎಷ್ಟಿತ್ತು? ಜಾತಿ ಸಮೀಕರಣ, ಪ್ರತಿಸ್ಪರ್ಧಿಯ ಬಲಾಬಲ ಮತ್ತಿತರ ಅಂಶಗಳನ್ನು ಕಲೆಹಾಕಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ರಾಜ್ಯಕ್ಕೆ ಭೇಟಿ ನೀಡಲಿದ್ದು, ಹಲವು ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಒಟ್ಟಾರೆ ಮಾಸಾಂತ್ಯಕ್ಕೆ ಆಗದಿದ್ದರೂ, ಫೆಬ್ರವರಿ ಮೊದಲ ವಾರದಲ್ಲಿ ಶತಾಯಗತಾಯ ಸಂಭವನೀಯ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಶಿಫಾರಸು ಮಾಡುವ ಗುರಿ ಹೊಂದಲಾಗಿದೆ. ಆ ಪಟ್ಟಿಯಲ್ಲಿ ಪ್ರತಿ ಕ್ಷೇತ್ರದಿಂದ ಕನಿಷ್ಠ 2 ಮತ್ತು ಗರಿಷ್ಠ 3 ಅಭ್ಯರ್ಥಿಗಳ ಹೆಸರನ್ನು ಮಾತ್ರ ಉಲ್ಲೇಖೀಸಲಾಗುತ್ತದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.