Pro Kabaddi: ಬೆಂಗಳೂರಿಗೆ ಭಾರೀ ಸೋಲು
Team Udayavani, Jan 21, 2024, 11:36 PM IST
ಹೈದರಾಬಾದ್: ರೈಡಿಂಗ್ನಲ್ಲಿ ಹಲವು ಅವಕಾಶ ಕಳೆದುಕೊಂಡ ಬೆಂಗಳೂರು ಬುಲ್ಸ್ ತಂಡವು ರವಿವಾರ ನಡೆದ ಪ್ರೊ ಕಬಡ್ಡಿ 10ನೇ ಅವೃತ್ತಿಯ ಪಂದ್ಯದಲ್ಲಿ ತಮಿಳ್ ತಲೈವಾಸ್ ವಿರುದ್ಧ 28-45 ಅಂಕಗಳಿಂದ ಭಾರೀ ಸೋಲನ್ನು ಕಂಡಿದೆ.ದಿನದ ಇನ್ನೊಂದು ಪಂದ್ಯದಲ್ಲಿ ಪುನೇರಿ ಪಲ್ಟಾನ್ಸ್ ತಂಡವು ಗುಜರಾತ್ ಜೈಂಟ್ಸ್ ತಂಡವನ್ನು 34-24 ಅಂಕಗಳಿಂದ ಸೋಲಿಸಿತು. ಪುನೇರಿ ಆಲ್ರೌಂಡ್ ಆಟ ಪ್ರದರ್ಶಿಸಿ ಗುಜರಾತ್ ವಿರುದ್ಧ ಜಯ ಸಾಧಿಸಿತು. ಆಡಿದ 13 ಪಂದ್ಯಗಳಲ್ಲಿ ಇದು ಪುನೇರಿ ತಂಡದ 11ನೇ ಗೆಲುವು ಆಗಿದ್ದು ತನ್ನ ಅಂಕ ಗಳಿಕೆಯನ್ನು 57ಕ್ಕೇರಿಸಿದ್ದು ಅಗ್ರಸ್ಥಾನಿ ಜೈಪುರಕ್ಕಿಂತ ಒಂದಂಕ ಹಿನ್ನೆಡೆಯಲ್ಲಿದೆ.
ತಮಿಳ್ ತಲೈವಾಸ್ ಈ ಆವೃತ್ತಿಯಲ್ಲಿ ಸಾಧಾರಣ ನಿರ್ವಹಣೆ ನೀಡಿದ ತಂಡವಾಗಿತ್ತು. ಆಡಿದ 13 ಪಂದ್ಯಗಳಲ್ಲಿ ಕೇವಲ ನಾಲ್ಕರಲ್ಲಿ ಜಯ ಸಾಧಿಸಿತ್ತು. ಆದರೆ ರವಿವಾರ ತಮಿಳ್ ರೈಡಿಂಗ್ ಮತ್ತು ಟ್ಯಾಕಲ್ನಲ್ಲಿ ಅಮೋಘ ನಿರ್ವಹಣೆ ನೀಡಿ ಬೆಂಗಳೂರು ತಂಡವನ್ನು ಬಗ್ಗುಬಡಿಯಿತು. ಬುಲ್ಸ್ ಆಟಗಾರರನ್ನು ಹಿಡಿದು ದೊಡ್ಡ ಹೊಡೆತ ನೀಡಿತು. ನರೇಂದರ್ ಮತ್ತು ಅಜಿಂಕ್ಯ ಪವಾರ್ ರೈಡಿಂಗ್ನಲ್ಲಿ ಮಿಂಚಿದರು.
ಸೋಮವಾರ ನಡೆಯುವ ಪಂದ್ಯ ಗಳಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ದಲ್ಲಿರುವ ಜೈಪುರ ಪಿಂಕ್ ಪ್ಯಾಂಥರ್ ತಂಡವು ಬೆಂಗಾಲ್ ವಾರಿಯರ್ ತಂಡವನ್ನು ಎದುರಿಸಲಿದೆ. ದಿನದ ಇನ್ನೊಂದು ಪಂದ್ಯವು ತೆಲುಗು ಟೈಟಾನ್ಸ್ ಮತ್ತು ಹರಿಯಾಣ ಸ್ಟೀಲರ್ ನಡುವೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.