Australian Open Tennis: ಜೊಕೋವಿಕ್‌ ಕ್ವಾರ್ಟರ್‌ಫೈನಲಿಗೆ


Team Udayavani, Jan 21, 2024, 11:51 PM IST

1-asdwqw

ಮೆಲ್ಬರ್ನ್: ಆಸ್ಟ್ರೇಲಿಯನ್‌ ಓಪನ್‌ನಲ್ಲಿ ಅಪರೂಪ ಎಂಬಂತೆ ಹಗಲು ಹೊತ್ತಿನಲ್ಲಿ ಆಡಿದ ನೋವಾಕ್‌ ಜೊಕೋವಿಕ್‌ ಅವರು ಆ್ಯಡ್ರಿಯನ್‌ ಮನ್ನಾರಿನೊ ಅವರನ್ನು ಸುಲಭವಾಗಿ ಮಣಿಸಿ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದರು.

ಪಂದ್ಯದ ವೇಳೆ ಆಗಾಗ್ಗೆ ಹೆಚ್ಚು ಉಸಿರಾಡುತ್ತಿದ್ದ ಅವರು ಕೆಮ್ಮು ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ಅವರ ಈ ಆರೋಗ್ಯ ಸಮಸ್ಯೆ ಆಟಕ್ಕೇನೂ ಪರಿಣಾಮ ಬೀರಲಿಲ್ಲ. 2021ರ ಬಳಿಕ ಇದೇ ಮೊದಲ ಬಾರಿ ಆರಂಭಿಕ ಅವಧಿಯಲ್ಲಿ ಆಡಿದ ಜೊಕೋವಿಕ್‌ 6-0, 6-0, 6-3 ಸೆಟ್‌ಗಳಿಂದ ಗೆದ್ದು ಅಂತಿಮ ಎಂಟರ ಸುತ್ತಿಗೇರಿದರು. ಇದು ಅವರ 32ನೇ ಸತತ ಗೆಲುವು ಮತ್ತು ಗ್ರ್ಯಾನ್‌ ಸ್ಲಾಮ್‌ನಲ್ಲಿ 58ನೇ ಬಾರಿ ಕ್ವಾರ್ಟರ್‌ಫೈನಲಿಗೇರಿದ ಸಾಧನೆ ಮಾಡಿದರಲ್ಲದೇ ಸ್ವಿಸ್‌ ತಾರೆ ರೋಜರ್‌ ಫೆಡರರ್‌ ಸಾಧನೆಯನ್ನು ಸಮಗಟ್ಟಿದರು.

ಟಿಟಿಪಸ್‌ಗೆ ಸೋಲು
ಕಳೆದ ವರ್ಷದ ರನ್ನರ್‌ ಅಪ್‌ ಸ್ಟೆಫ‌ನೋಸ್‌ ಟಿಟಿಪಸ್‌ ಅವರು ನಾಲ್ಕು ಸೆಟ್‌ಗಳ ಕಠಿನ ಹೋರಾಟದಲ್ಲಿ ಟಯ್ಲರ್‌ ಫ್ರಿಟ್ಜ್ ಅವರ ಕೈಯಲ್ಲಿ ಸೋತು ನಿರ್ಗಮಿಸಿದ್ದಾರೆ. ಅಮೆರಿಕದ ಫ್ರಿಟ್ಜ್ ಅವರು 7-6 (3), 5-7, 6-3, 6-3 ಸೆಟ್‌ಗಳಿಂದ ಗೆಲುವು ಸಾಧಿಸಿ ಮೊದಲ ಬಾರಿ ಇಲ್ಲಿ ಕ್ವಾರ್ಟರ್‌ಫೈನಲ್‌ ತಲುಪಿದ ಸಾಧನೆ ಮಾಡಿದರು. ಕಳೆದ ವರ್ಷದ ಯುಎಸ್‌ ಓಪನ್‌ನಲ್ಲಿ ಕ್ವಾರ್ಟರ್‌ಫೈನಲ್‌ ತಲುಪಿದ³ ಫ್ರಿಟ್ಜ್ ಅವರ 13 ಏಸ್‌ ಸಿಡಿಸಿದರಲ್ಲದೇ 50 ವಿಜಯಿ ಹೊಡೆತ ನೀಡಿ ಗೆಲುವು ಒಲಿಸಿಕೊಂಡರು.

ಇನ್ನೊಂದು ಪಂದ್ಯದಲ್ಲಿ ಜಾನ್ನಿಕ್‌ ಸಿನ್ನರ್‌ ಅವರು ಕರೆನ್‌ ಕಚನೋವ್‌ ಅವರನ್ನು 6-4, 7-5, 6-3 ಸೆಟ್‌ಗಳಿಂದ ಸೋಲಿಸಿ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದರು. ಕಚನೋವ್‌ ಕಳೆದ ವರ್ಷ ಇಲ್ಲಿ ಸೆಮಿಫೈನಲ್‌ ತಲುಪಿದ್ದರು.

ಕೊಕೊ ಗಾಫ್ ಮುನ್ನಡೆ
ಮೆಲ್ಬರ್ನ್: ನಾಲ್ಕನೇ ಶ್ರೇಯಾಂಕದ ಕೊಕೊ ಗಾಫ್ ಅವರನ ಪೋಲಂಡಿನ ಮಗ್ಡಲೆನಾ ಫ್ರೆಚ್‌ ಅವರನನ್ನ 6-1, 6-2 ಸೆಟ್‌ಗಳಿಂದ ಸುಲಭವಾಗಿ ಸೋಲಿಸಿ ಇದೇ ಮೊದಲ ಬಾರಿ ಇಲ್ಲಿ ಕ್ವಾರ್ಟರ್‌ಫೈನಲ್‌ಗೇರಿದರು. ಯುಎಸ್‌ ಓಪನ್‌ ಚಾಂಪಿಯನ್‌ ಆಗಿರುವ ಗ್ರಾಫ್ ಮೆಲ್ಬರ್ನ್ ಪಾರ್ಕ್‌ನಲ್ಲಿ ಇನ್ನೂ ಒಂದೇ ಒಂದು ಸೆಟ್‌ ಕಳೆದುಕೊಂಡಿಲ್ಲ. ಈ ಪಂದ್ಯವನ್ನು ಆಸ್ಟ್ರೇಲಿಯದ ಖ್ಯಾತ ಆಟಗಾರ ರಾಡ್‌ ಲೆವರ್‌ ವೀಕ್ಷಿಸಿದ್ದರು.

ಸಬಲೆಂಕಾಗೆ ಗೆಲುವು
ಹಾಲಿ ಚಾಂಪಿಯನ್‌ ಆರ್ಯಾನಾ ಸಬಲೆಂಕಾ ಅವರು ಅಮೆರಿಕದ ಅಮಂಡಾ ಅನಿಸಿಮೋವಾ ಅವರನ್ನು 6-3, 6-2 ಸೆಟ್‌ಗಳಿಂದ ಸೋಲಿಸಿ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದರು. ಈ ಗೆಲುವಿನಿಂದ ನನಗೆ ಸೂಪರ್‌ ಖುಷಿಯಾಗಿದೆ ಎಂದವರು ಹೇಳಿದರು.

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.