Bilkis Bano Case: ಗೋಧ್ರಾ ಜೈಲು ಅಧಿಕಾರಿಗಳ ಮುಂದೆ ಶರಣಾದ 11 ಅಪರಾಧಿಗಳು
Team Udayavani, Jan 22, 2024, 9:42 AM IST
ಗುಜರಾತ್: ಬಿಲ್ಕಿಸ್ ಬಾನೊ ಪ್ರಕರಣದ ಎಲ್ಲಾ 11 ಅಪರಾಧಿಗಳು ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾ ಸಬ್ ಜೈಲಿನಲ್ಲಿ ಭಾನುವಾರ ಸಂಜೆ ಶರಣಾದರು, ಸುಪ್ರೀಂ ಕೋರ್ಟ್ ನೀಡಿದ ಗಡುವು ಇಂದು ಕೊನೆಗೊಳ್ಳುವ ಹಿನ್ನೆಲೆಯಲ್ಲಿ ಎಲ್ಲ ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.
ಅಪರಾಧಿಗಳು ತಡರಾತ್ರಿ ಎರಡು ಖಾಸಗಿ ವಾಹನಗಳಲ್ಲಿ ಸಿಂಗ್ವಾಡ್ ರಂಧಿಕ್‌ಪುರದಿಂದ 11:30 ಕ್ಕೆ ಗೋಧ್ರಾ ಸಬ್ ಜೈಲಿಗೆ ಬಂದು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ” ಎಂದು ಸ್ಥಳೀಯ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಎನ್‌ಎಲ್ ದೇಸಾಯಿ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಜನವರಿ 8 ರಂದು, 2002 ರ ಗೋಧ್ರಾ ನಂತರದ ಗಲಭೆಯ ಸಂದರ್ಭದಲ್ಲಿ ಗುಜರಾತ್ ಸರ್ಕಾರವು ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳಿಗೆ ನೀಡಿದ್ದ ವಿನಾಯಿತಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತು, ಅಲ್ಲದೆ ಕೂಡಲೇ ಅಪರಾಧಿಗಳು ಜನವರಿ 22 ರ ಮೊದಲು ಜೈಲು ಅಧಿಕಾರಿಗಳಿಗೆ ಶರಣಾಗುವಂತೆ ಹೇಳಿತ್ತು. ಅದರಂತೆ ಭಾನುವಾರ ತಡರಾತ್ರಿ ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.
ಇದನ್ನೂ ಓದಿ: Vijayapura: ದ್ವೇಷ… ಸಂಬಂಧಿಯ ಮೇಲೆಯೇ ಗುಂಡಿನ ದಾಳಿ, ಆರೋಪಿ ಪರಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.