Ayodhya ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಗೈರು
Team Udayavani, Jan 22, 2024, 10:37 AM IST
ಅಯೋಧ್ಯಾ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಇಂದು (ಜನವರಿ 22) ನೂತನ ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾ ಪ್ರತಿಷ್ಠಾಪನೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಲಾಗಿದೆ. ಚಳಿ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಅವರು ತಮ್ಮ ಅಯೋಧ್ಯೆ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಅಡ್ವಾಣಿ ಅವರಿಗೆ 96 ವರ್ಷ. ಇಂತಹ ಪರಿಸ್ಥಿತಿಯಲ್ಲಿ ಅವರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಆರೆಸ್ಸೆಸ್ ಅಧಿಕಾರಿಗಳಾದ ಕೃಷ್ಣ ಗೋಪಾಲ್, ರಾಮ್ ಲಾಲ್ ಮತ್ತು ಅಲೋಕ್ ಕುಮಾರ್ ಅವರು ಲಾಲ್ ಕೃಷ್ಣ ಅಡ್ವಾಣಿ ಅವರ ಮನೆಗೆ ಆಗಮಿಸಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದ್ದರು. ಈ ಸಂದರ್ಭದಲ್ಲಿ ಅಡ್ವಾಣಿ ಅವರು ಇಂತಹ ಭವ್ಯ ಸಮಾರಂಭದಲ್ಲಿ ನೇರವಾಗಿ ಉಪಸ್ಥಿತರಿರುವ ಅವಕಾಶ ಸಿಕ್ಕಿದ್ದು ಅದೃಷ್ಟದ ಸಂಗತಿ ಎಂದು ಹೇಳಿದ್ದರು.
ದಿಲ್ಲಿ, ಉತ್ತರ ಪ್ರದೇಶದ ಭಾಗಗಳಲ್ಲಿ ವಿಪರೀತ ಚಳಿ ವಾತಾವರಣವಿರುವುದರಿಂದ ಆರೋಗ್ಯಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ಲಾಲ್ ಕೃಷ್ಣ ಅಡ್ವಾಣಿ ಅವರು ಸಮಾರಂಭದಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.
ಇಂದು ರಾಮಮಂದಿರದಲ್ಲಿ ರಾಮ ಲಲ್ಲಾನ ಭವ್ಯವಾದ ‘ಪ್ರಾಣ ಪ್ರತಿಷ್ಠಾ’ಕ್ಕೆ ಕ್ಷಣಗಣನೆ ಪ್ರಾರಂಭವಾಗುತ್ತಿದ್ದಂತೆ ಅಯೋಧ್ಯೆಯನ್ನು ಹೂವುಗಳು ಮತ್ತು ಬೀದಿದೀಪಗಳು ಮತ್ತು ಭಗವಾನ್ ರಾಮನ ಪೋಸ್ಟರ್‌ಗಳಿಂದ ಅಲಂಕರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯಲ್ಲಿ ‘ಪ್ರಾಣ ಪ್ರತಿಷ್ಠಾ’ ವಿಧಿವಿಧಾನಗಳಿಗೆ ಚಾಲನೆ ನೀಡಲಿದ್ದಾರೆ. ಬಾಂಬ್ ನಿಗ್ರಹ ದಳ ಮತ್ತು ಸ್ನೈಪರ್‌ಗಳು ಸೇರಿದಂತೆ 13,000 ಪಡೆಗಳೊಂದಿಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಎನ್‌ಡಿಆರ್‌ಎಫ್‌ನ ತಂಡವೊಂದು ಅಯೋಧ್ಯೆಯ ರಾಮಮಂದಿರದ ಬಳಿ ಶಿಬಿರವನ್ನು ಸ್ಥಾಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.