Album Song; ಅಯೋಧ್ಯೆ ಶ್ರೀರಾಮನಿಗೆ ‘ಜಾನಕಿರಾಮ’ ಗೀತಾರ್ಪಣೆ
Team Udayavani, Jan 22, 2024, 4:58 PM IST
ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠಾಪನೆ ಆಗುತ್ತಿರುವ ಸಂದರ್ಭದಲ್ಲಿ “ಸಿರಿ ಮ್ಯೂಸಿಕ್’ ಹಾಗೂ “ಗೆಜ್ಜೆ ಡ್ಯಾನ್ಸ್ ಸ್ಟುಡಿಯೋ’ ಸಹಯೋಗದಲ್ಲಿ ಮೂಡಿ ಬಂದಿರುವ “ಜಾನಕಿ ರಾಮ’ ಆಲ್ಬಂ ಸಾಂಗ್ ಬಿಡುಗಡೆಯಾಯಿತು.
ಸುರಪುರದ ಶಾಸಕ ರಾಜುಗೌಡ, ಡಿ. ಎಸ್ ಮ್ಯಾಕ್ಸ್‌ನ ಎಂ. ಡಿ ದಯಾನಂದ್, ಫಿಲಂ ಚೇಂಬರ್ ಅಧ್ಯಕ್ಷ ಎನ್. ಎಂ. ಸುರೇಶ್, ಮಾಜಿ ಅಧ್ಯಕ್ಷ ಭಾ. ಮ. ಹರೀಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಟಿ ಪ್ರಿಯಾಂಕಾ ಉಪೇಂದ್ರ, ಪೊಲೀಸ್ ಅಧಿಕಾರಿ ಶಂಕರ್, “ಸಿರಿ ಮ್ಯೂಸಿಕ್’ನ ಸುರೇಶ್ ಚಿಕ್ಕಣ್ಣ, ನಟಿ ರೂಪಿಕಾ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದು “ಜಾನಕಿ ರಾಮ’ ಆಲ್ಬಂ ಸಾಂಗ್ ಬಿಡುಗಡೆ ಮಾಡಿದರು.
ಅದ್ದೂರಿ ಸೆಟ್‌ನಲ್ಲಿ ಈ ಹಾಡನ್ನು ಚಿತ್ರಿಸಲಾಗಿದ್ದು, ನಟ ಅನಿರುದ್ಧ್ ಜತ್ಕರ್, ನಿರಂಜನ ದೇಶಪಾಂಡೆ ಈ ಹಾಡನಲ್ಲಿ ಅಭಿನಯಿಸಿದ್ದಾರೆ. ಅದ್ವೈತ್ ಶೆಟ್ಟಿ ನಿರ್ದೇಶಿಸಿರುವ ಈ ಹಾಡನ್ನು ಮನೋಜ್ ಸೌಗಂಧ್ ಬರೆದಿದ್ದಾರೆ. ನೀತು ನಿನಾದ್ ತಾವೇ ಈ ಹಾಡಿಗೆ ಸಂಗೀತ ಸಂಯೋಜಿಸಿ, ಧ್ವನಿಯಾಗಿದ್ದಾರೆ.
ನಟಿ ರೂಪಿಕಾ ಕ್ರಿಯೇಟಿವ್ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸುವುದರ ಜೊತೆಗೆ, ಲಿಖೀತ್ ಆಚಾರ್ ಜೊತೆಗೂಡಿ ನೃತ್ಯ ನಿರ್ದೇಶನವನ್ನು ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಹಾಜರಿದ್ದ ಹಾಡಿನಲ್ಲಿ ಅಭಿನಯಿಸಿದ ಕಲಾವಿದರು ಮತ್ತು ತಂತ್ರಜ್ಞರು “ಜಾನಕಿ ರಾಮ’ ಗೀತೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.