Ayodhya Ram Mandir; ಸಾವಿರಾರು ಕಾರ್ಯಕರ್ತರ ಪರಿಶ್ರಮ,ಲಕ್ಷಾಂತರ ಜನರ ಇಚ್ಛೆ ಸಾಕಾರಗೊಂಡಿದೆ
ಸದಾಶಿವಾನಂದ ಮಹಾಸ್ವಾಮೀಜಿ ಸಂತಸ
Team Udayavani, Jan 22, 2024, 7:52 PM IST
ಗದಗ: ನಾಗರ ಶೈಲಿಯಲ್ಲಿ ನಿರ್ಮಾಣಗೊಂಡಿರುವ ಅಯೋಧ್ಯೆಯ ಶ್ರೀರಾಮ ಮಂದಿರ ಅತ್ಯಂತ ಭವ್ಯವಾದ ದೇವಾಲಯವಾಗಿದ್ದು, ಸಾವಿರಾರು ಕಾರ್ಯಕರ್ತರ ಪರಿಶ್ರಮ, ಲಕ್ಷಾಂತರ ಜನರ ಇಚ್ಛೆ ಸಾಕಾರಗೊಂಡಿದೆ ಎಂದು ನಗರದ ಶಿವಾನಂದ ಬೃಹನ್ಮಠದ ಸದಾಶಿವಾನಂದ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣಪ್ರತಿಷ್ಟಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉದಯವಾಣಿ ಪತ್ರಿಕೆಯೊಂದಿಗೆ ತಮ್ಮ ಅನುಭವ ಹಂಚಿಕೊಂಡ ಶ್ರೀಗಳು ಅಯೋಧ್ಯೆಯಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೊಂಡಿರುವ ಶ್ರೀರಾಮ ಮಂದಿರವನ್ನು ಕಂಡು ಸಂತಸ ವ್ಯಕ್ತಪಡಿಸಿದರು.
ಎಲ್ಲ ವೈದಿಕ ವಿಧಿವಿಧಾನಗಳಿಂದ ಲೋಕಾರ್ಪಣೆಗೊಂಡಿರುವ ಮಂದಿರವು, ರಾಮಲಲ್ಲಾ ಪ್ರಾಣಪ್ರತಿಷ್ಠಾಪನಾ ಕಾರ್ಯವು ಅತ್ಯಂತ ಯಶಸ್ವಿಯಾಗಿ, ಸಮಯಕ್ಕೆ ಸರಿಯಾಗಿ ನೆರವೇರಿತು. ಜೊತೆಗೆ ದೇಶದ ಎಲ್ಲ ವರ್ಗದ ಜನರು ಸಂತೋಷವಾಗಿ ನಿರೀಕ್ಷೆ ಮಾಡುತ್ತಿರುವುದನ್ನು ಕಂಡು ಬರುತ್ತಿತ್ತು. ದೇಶದ ಎಲ್ಲ ರಾಜಕೀಯ ಚಿಂತಕರು, ಸಿನಿಮಾ ತಾರೆಯರು, ವಿಶೇಷ ಆಮಂತ್ರಿತರು ಆಗಮಿಸಿದ್ದರು. ರಾಜ್ಯದಿಂದಲೂ 80ಕ್ಕೂ ಹೆಚ್ಚು ಸನ್ಯಾಸಿಗಳು ಪಾಲ್ಗೊಂಡಿರುವುದು ವಿಶೇಷವಾಗಿತ್ತು ಎಂದರು.
500 ವರ್ಷಗಳ ಪರಿಶ್ರಮಕ್ಕೆ ಪ್ರತಿಫಲ ದೊರೆತಿದ್ದು, ಗೌರವಶಾಲಿ ಭಾರತ ನಿರ್ಮಾಣಕ್ಕೆ ಭವ್ಯ ಶ್ರೀರಾಮ ಮಂದಿರವು ಅಡಿಪಾಯವಾಗಿದೆ. ಶ್ರೀರಾಮ ಮಂದಿರದ ಉದ್ಘಾಟನೆ ಎನ್ನುವುದಕ್ಕಿಂತ ಸಾಂಸ್ಕೃತಿಕ ಪುನರುತ್ಥಾನದ ಕೇಂದ್ರವಾಗಿ ಅಯೋಧ್ಯೆಯು ಬೆಳಗಿತು. ಭಾರತ ದೇಶದಲ್ಲಿರುವ ಎಲ್ಲ ಧಾರ್ಮಿಕ ಕೇಂದ್ರಗಳಿಗೆ ಅದರದೇ ಆದ ಮಾನ್ಯತೆ ಹಾಗೂ ಗೌರವವಿದೆ. ಅದನ್ನು ಪುನರ್‌ವ್ಯಾಪಿಸಲು ಈ ರೀತಿಯಾಗಿ ಪ್ರತಿಯೊಂದು ಕ್ಷೇತ್ರವೂ ಕೂಡ ವೈಭವಶಾಲಿಯಾದ ಅತೀತವನ್ನು ಪುನರ್‌ಸ್ಥಾಪಿತ ಮಾಡಿಕೊಳ್ಳಬೇಕು. ಅದಕ್ಕೆ ಉದಾಹರಣೆಯಾಗಿ ಅಯೋಧ್ಯೆಯ ಶ್ರೀರಾಮ ಮಂದಿರ ತಲೆ ಎತ್ತಿ ನಿಂತಿದೆ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.