![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 22, 2024, 11:13 PM IST
ಬೆಂಗಳೂರು: ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದ ಅಭಿಜಿನ್ ಮುಹೂರ್ತದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹದೇವಪುರದ ಹಿರಂಡಹಳ್ಳಿಯಲ್ಲಿ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ “ಜೈ ಶ್ರೀರಾಮ್”ಘೋಷಣೆ ಹಾಕಿ ಗಮನ ಸೆಳೆದರು.
ಬಿದರಹಳ್ಳಿ ಹೋಬಳಿಯ ಹಿರಂಡಹಳ್ಳಿಯಲ್ಲಿ ಶ್ರೀರಾಮ ದೇವಸ್ಥಾನ ಟ್ರಸ್ಟ್ ನಿರ್ಮಿಸಿದ ರಾಮ ಸೀತಾ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ
ಶಿಲಾ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿದ್ದರಾಮಯ್ಯ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡರು. ಬಳಿಕ ಮಾತಾಡಿದ ಅವರು, ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳುವುದಿಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕೆನ್ನುವುದು ಶ್ರೀರಾಮನ ಆಶಯವಾಗಿದೆ ಎಂದರು.
ನಾನು ಆಸ್ತಿಕ
ನಾನು ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳಿವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾರೆ. ಗುಡಿ ಕಟ್ಟುತ್ತೇವೆ. ಯಾವುದೇ ಧರ್ಮ, ಜಾತಿ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖೀ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟರು. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇವರೆಲ್ಲ ಸಕುಟುಂಬಸ್ಥರು ಎಂದು ತಿಳಿಸಿದರು.
ಜೈ ಶ್ರೀರಾಮ್ ಎಂದ ಸಿದ್ದರಾಮಯ್ಯ
ಇದೇ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಮೊಳಗಿಸಿದ ಸಿದ್ದರಾಮಯ್ಯ ನೀವೆಲ್ಲರೂ ಜೈ ಶ್ರೀರಾಮ್ ಹೇಳುವುದಿಲ್ಲವಾ? ಹಾಗಾದರೆ ಹೇಳಿ ಮತ್ತೆ ಎಂದು ಜೈ ಶ್ರೀರಾಮ್ ಘೋಷಣೆ ಹಾಕಿಸಿ ಗಮನ ಸೆಳೆದರು. ಜೈ ಶ್ರೀರಾಮ್ ಎನ್ನುವುದು ಯಾರಧ್ದೋ ಖಾಸಗಿ ಸೊತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸೊತ್ತು ಎಂದು ಬಿಜೆಪಿಗೆ ತಿರುಗೇಟು ಕೊಟ್ಟರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.