Dharmasthala; ರಾಮನ ಹೆಸರು ಉಸಿರಾಗಬೇಕು: ಹೇಮಾವತಿ ಹೆಗ್ಗಡೆ
ಧರ್ಮಸ್ಥಳದಲ್ಲಿ ರಾಮನಾಮ ತಾರಕ ಮಂತ್ರ ಪಠಣ
Team Udayavani, Jan 22, 2024, 11:35 PM IST
ಬೆಳ್ತಂಗಡಿ: ಮರ್ಯಾದಾ ಪುರುಷೋತ್ತಮನಾಗಿ ಮೆರೆದ ಶ್ರೀರಾಮ ಪಿತೃವಾಕ್ಯ ಪರಿಪಾಲನೆ, ಕುಟುಂಬದವರ ಮೇಲಿನ ಪ್ರೀತಿ-ವಿಶ್ವಾಸ, ಸತ್ಯ-ಧರ್ಮ, ನ್ಯಾಯ-ನೀತಿ ಪರಿಪಾಲನೆ, ತಾಳ್ಮೆ, ದೃಢಸಂಕಲ್ಪ ಮೊದಲಾದ ಮಾನವೀಯ ಮೌಲ್ಯ ಹಾಗೂ ನೈತಿಕ ಗುಣಗಳಿಂದಾಗಿ ಸಾವಿರಾರು ವರ್ಷಗಳಿಂದ ಲಕ್ಷಾಂತರ ಜನರ ಮನ -ಮನೆಗಳಲ್ಲಿ ಸ್ಥಿರವಾಗಿದ್ದಾನೆ. ರಾಮನ ಹೆಸರು ನಮ್ಮ ಉಸಿರಾಗಬೇಕು ಎಂದು ಹೇಮಾವತಿ ವೀ. ಹೆಗ್ಗಡೆ ಹೇಳಿದರು.
ಅಯೋಧ್ಯೆಯ ಶ್ರೀರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಜ. 22ರಂದು ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಎಲ್ಲರೂ ರಾಮನಾಗಲು ಅಸಾಧ್ಯ. ಆದರೆ ರಾಮನ ಆದರ್ಶ ಗುಣಗಳನ್ನಾದರೂ ಪಾಲಿಸಿ ರಾಮರಾಜ್ಯದ ಕನಸು ನನಸಾಗಬೇಕು. ರಾಮನನ್ನು ಹಲವರು ದೇವರಾಗಿ ಆರಾಧಿಸಿದರೆ ಅನೇಕ ಮಂದಿ ಆತನ ಆದರ್ಶ, ಮಾನವೀಯ ಗುಣಗಳಿಗಾಗಿ ಗೌರವಿಸಿ ಅನುಸರಿಸುತ್ತಾರೆ. ಅಯೋಧ್ಯೆಯೂ ಹಲವು ಮಂದಿ ತೀರ್ಥಂಕರರ ಜನ್ಮಸ್ಥಳವಾಗಿದ್ದು ಜೈನರಿಗೂ ಪವಿತ್ರ ತೀರ್ಥಕ್ಷೇತ್ರವಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ದೃಢಸಂಕಲ್ಪ ಹಾಗೂ ಲಕ್ಷಾಂತರ ಭಕ್ತರ ಕಠಿನ ವ್ರತ-ನಿಯಮಗಳ ಪಾಲನೆ, ಶ್ರದ್ಧಾಭಕ್ತಿಯಿಂದ ರಾಮಮಂದಿರದ ಕನಸು ನನಸಾಗಿದೆ ಎಂದು ಹೇಳಿ ಹೇಮಾವತಿ ಹೆಗ್ಗಡೆಯವರು ರಾಮನಾಮತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಬೆಳ್ತಂಗಡಿ ತಾಲೂಕಿನ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯೊಂದಿಗೆ ಸಾಮೂಹಿಕ ಭಜನೆ ಹಾಗೂ ರಾಮನಾಮತಾರಕ ಮಂತ್ರ ಪಠಿಸಲಾಯಿತು. ಆಯೋಧ್ಯೆಯ ರಾಮಜನ್ಮಭೂಮಿಯ ಕರಸೇವೆಯಲ್ಲಿ ಭಾಗಿಯಾದ ಕೆಲವರನ್ನು ಸಮ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.