Hassan ಎದುರುಮನೆಯ ಕಿಟಕಿಯಲ್ಲಿ ಇಣುಕಿ ನೋಡಿದ್ದೇ ಜೀವಕ್ಕೆ ಮುಳುವಾಯ್ತು
Team Udayavani, Jan 24, 2024, 7:00 AM IST
ಹಾಸನ: ರಾತ್ರಿ ವೇಳೆ ಎದುರುಮನೆ ಕಿಟಕಿ ಮೂಲಕ ಇಣುಕಿ ನೋಡಿದ ಎನ್ನುವ ಕಾರಣಕ್ಕೆ ವ್ಯಕ್ತಿಯನ್ನು ಅಟ್ಟಾಡಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಹೊಳೆನರಸಿಪುರ ತಾಲೂಕಿನ ಎಲೆಗೌಡನಹಳ್ಳಿಯಲ್ಲಿ ರವಿವಾರ ರಾತ್ರಿ ನಡೆದಿದೆ.
ಜಯರಾಂ (55) ಮೃತಪಟ್ಟಿರುವ ವ್ಯಕ್ತಿ. ಜ. 21ರ ತಡರಾತ್ರಿ ಜಯರಾಂ ಪತ್ನಿ ಪ್ರಮೀಳಾ ಅವರ ತಂದೆ ತಮ್ಮೇಗೌಡ ಮೈಸೂರಿನ ಸಾಲಿಗ್ರಾಮ ತಾಲೂಕು ಕೆಸವತ್ತೂರು ಕೊಪ್ಪಲು ಗ್ರಾಮದಲ್ಲಿ ತೀರಿಕೊಂಡಿದ್ದರಿಂದ ಮನೆಮಂದಿ ಎಲ್ಲರೂ ಅಲ್ಲಿಗೆ ಹೋಗಿದ್ದರು. ಮೃತರ ಅಂತ್ಯಕ್ರಿಯೆ ಮರುದಿನ ನಿಗದಿಯಾಗಿದ್ದರಿಂದ, ಜಯರಾಂ ಅವರು ಮನೆಯಲ್ಲಿ ಸಾಕಿದ್ದ ಜಾನುವಾರು ನೋಡಿಕೊಳ್ಳಲು ಗ್ರಾಮಕ್ಕೆ ತೆರಳಿ ರಾತ್ರಿ ವಾಪಸ್ ಬಂದು, ಮನೆಯಲ್ಲಿ ಮಲಗಿದ್ದರು.
ರಾತ್ರಿ 11 ಗಂಟೆ ಸಮಯದಲ್ಲಿ ಜಯರಾಂ ಮೂತ್ರ ವಿಸರ್ಜನೆ ಮಾಡಲು ಹೊರಗೆ ಬಂದಿದ್ದರೆನ್ನಲಾಗಿದೆ. ಈ ವೇಳೆ ಎದುರುಗಡೆಯ ಮಧು ಅವರ ಮನೆಯ ಕಿಟಕಿ ಮೂಲಕ ಇಣುಕಿ ನೋಡಿದರು ಎನ್ನಲಾಗಿದೆ. ಇದನ್ನು ಗಮನಿಸಿದ ಮಧು ಮತ್ತು ಸಂಬಂಧಿಕರು ಜಯರಾಂ ಅವರನ್ನು ಅಟ್ಟಾಡಿಸಿಕೊಂಡು ಬಂದು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ತೀವ್ರ ರೀತಿಯಲ್ಲಿ ಹಲ್ಲೆ ನಡೆಸಿದ್ದಾರೆ.
ಅಷ್ಟರಲ್ಲಿ ಗ್ರಾಮಸ್ಥರು ಬಂದು ಜಗಳ ಬಿಡಿಸಿದ್ದಾರೆ. ಅನಂತರ ಗಾಯಾಳುವನ್ನು ಮನೆಯಲ್ಲಿ ಮಲಗಿಸಿದ್ದು, ಬೆಳಗಾಗುವುದರೊಳಗಾಗಿ ಜಯರಾಂ ಮೃತಪಟ್ಟಿದ್ದರು. ಮೃತರ ಮಗಳು ನೀಡಿದ ದೂರು ಆಧರಿಸಿ ಹಳ್ಳಿ ಮೈಸೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
Shravanabelagola;ಅಹಿಂಸಾ ಮಾರ್ಗದಿಂದಷ್ಟೇ ಜಗದ ಶಾಂತಿ: ಪೇಜಾವರ ಶ್ರೀ
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.