Lok Sabha Election; ಐಎನ್‌ಡಿಐಎಗೆ ದೀದಿ ಆಘಾತ: ಸೀಟು ಹಂಚಿಕೆಗೆ ಹೊಸ ಸೂತ್ರ

ನಿರ್ದಿಷ್ಟ ಕ್ಷೇತ್ರ ನಮಗೆ ಬಿಡಿ: ಮಮತಾ; ಕಾಂಗ್ರೆಸ್‌ ಕಿಡಿ

Team Udayavani, Jan 24, 2024, 6:50 AM IST

westLok Sabha Election; ಐಎನ್‌ಡಿಐಎಗೆ ದೀದಿ ಆಘಾತ: ಸೀಟು ಹಂಚಿಕೆಗೆ ಹೊಸ ಸೂತ್ರ

ಹೊಸದಿಲ್ಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ವಿಪಕ್ಷಗಳ ಐಎನ್‌ಡಿಐಎ ಒಕ್ಕೂಟದಲ್ಲಿ ಬಿರುಕುಗಳು ಹೆಚ್ಚಾಗುತ್ತಿವೆ. ಪಶ್ಚಿಮ ಬಂಗಾಲದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮತ್ತು ಕಾಂಗ್ರೆಸ್‌ ನಡುವೆ ವಾಗ್ವಾದಗಳು ದಿನೇ ದಿನೆ ಬಿರುಸಾಗುತ್ತಿವೆ.

ಅದಕ್ಕೆ ಹೊಸ ಸೇರ್ಪಡೆಯೆಂಬಂತೆ ಸೋಮವಾರ ಸರ್ವಧರ್ಮ ಸಮನ್ವಯ ನಡಿಗೆಯ ವೇಳೆ ಸಿಎಂ ಮಮತಾ ಅವರು ಹೊಸ ಯೋಜನೆ ಯೊಂದನ್ನು ವಿಪಕ್ಷಗಳ ಒಕ್ಕೂಟದ ಮುಂದಿಟ್ಟಿದ್ದಾರೆ. ಲೋಕಸಭೆ ಚುನಾವಣೆ ಯಲ್ಲಿ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಸ್ಪರ್ಧಿಸಲು ಆಯಾ ಪ್ರಾದೇಶಿಕ ಪಕ್ಷಗಳಿಗೆ ಬಿಟ್ಟುಬಿಡಬೇಕು. ಕಾಂಗ್ರೆಸ್‌ 300 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿ. ಅಂಥ ಕ್ಷೇತ್ರಗಳಲ್ಲಿ ಅಭ್ಯರ್ಥಿ ಕಣಕ್ಕಿಳಿಸದೆ ನಾವು ಅವರನ್ನು ಬೆಂಬಲಿಸೋಣ. ಆದರೆ ಅವರು ನಮ್ಮ ಸಲಹೆಗಳನ್ನು ಪರಿಗಣಿಸದೆ ಮೊಂಡುವಾದ ಮುಂದಿಡುತ್ತಿದ್ದಾರೆ ಎಂದು ದೀದಿ ಹೇಳಿದ್ದಾರೆ.

ಸೀಟು ಹಂಚಿಕೆಯಲ್ಲಿ ವಿಳಂಬಕ್ಕೂ ಅಸಮಾ ಧಾನ ವ್ಯಕ್ತಪಡಿಸಿರುವ ದೀದಿ, “ಬಿಜೆಪಿಯನ್ನು ಎದುರಿಸಿ, ಹೋರಾಡುವ ಶಕ್ತಿ ನನಗಿದೆ. ಆದರೆ ಕೆಲವರು ಸೀಟು ಹಂಚಿಕೆ ವಿಚಾರದಲ್ಲಿ ನಮ್ಮನ್ನು ಪರಿಗಣಿಸುತ್ತಲೇ ಇಲ್ಲ. ನಿಮಗೆ ಬಿಜೆಪಿ ವಿರುದ್ಧ ಹೋರಾಡಲು ಮನಸ್ಸಿಲ್ಲದಿದ್ದರೂ ಪರವಾಗಿಲ್ಲ, ಕನಿಷ್ಠ ಪಕ್ಷ ಆ ಪಕ್ಷಕ್ಕೆ ಲಾಭ ಮಾಡಿಕೊಡಬೇಡಿ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಂಗಾಲ ಸಿಪಿಎಂ ಕಾರ್ಯದರ್ಶಿ ಮೊಹಮ್ಮದ್‌ ಸಲೀಂ, “ಮಮತಾ ಅವರಿಗೆ ಸ್ಪಷ್ಟವಾದ ಸಿದ್ಧಾಂತವಿಲ್ಲ. ಬಿಜೆಪಿ ದೀದಿಯ ಮಿತ್ರಪಕ್ಷ. ಅವರ ಎಲ್ಲ ಹತಾಶೆಗಳು ಈಗ ಹೊರಗೆ ಬರುತ್ತಿವೆ’ ಎಂದಿದ್ದಾರೆ.

ದೊಡ್ಡ ವಿಚಾರವೇನೂ ಅಲ್ಲ: ರಾಹುಲ್‌
“ಮಮತಾ ನನಗೆ ಆತ್ಮೀಯರು. ಕೆಲವೊಮ್ಮೆ ಹೇಳಿಕೆಗಳು, ಪ್ರತಿಹೇಳಿಕೆಗಳೆಲ್ಲ ಸಹಜ. ಅದರಿಂದ ಏನೂ ಸಮಸ್ಯೆಯಾಗದು’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಮಮತಾ ಅವರ ಸಹಾಯವಿಲ್ಲದೆ ಪ. ಬಂಗಾಲದಲ್ಲಿ ಕಾಂಗ್ರೆಸ್‌ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಯಲಿದೆ ಎಂಬ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿಕೆ ಕುರಿತು ಪ್ರಶ್ನಿಸಿದಾಗ ರಾಹುಲ್‌ ಈ ಹೇಳಿಕೆ ನೀಡಿದ್ದಾರೆ.

ಕುತೂಹಲ ಕೆರಳಿಸಿದ ಬಿಹಾರ ರಾಜಕೀಯ
ಮತ್ತೊಂದೆಡೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಮತ್ತು ಮಿತ್ರಪಕ್ಷ ಆರ್‌ಜೆಡಿ ನಡುವೆ “ಎಲ್ಲವೂ ಸರಿ ಇಲ್ಲ’ ಎಂಬ ಗುಸು ಗುಸುಗಳ ನಡುವೆಯೇ ಮಂಗಳವಾರ ನಿತೀಶ್‌ ಅನಿರೀಕ್ಷಿತವಾಗಿ ರಾಜ್ಯಪಾಲರನ್ನು ಭೇಟಿಯಾಗಿದ್ದು, ರಾಜಕೀಯ ಪಡಸಾಲೆಯಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮಂಗಳವಾರ ಸರಕಾರಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಿತೀಶ್‌, ಅಲ್ಲಿಂದ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಾಜೇಂದ್ರ ಅಲೇìಕರ್‌ರನ್ನು ಭೇಟಿಯಾಗಿದ್ದಾರೆ. ಈ ವೇಳೆ ಸಂಪುಟ ಸಚಿವ ವಿಜಯ್‌ ಚೌಧರಿ ನಿತೀಶ್‌ಗೆ ಸಾಥ್‌ ನೀಡಿದ್ದರು. ಈ ದಿಢೀರ್‌ ಭೇಟಿಯಿಂದಾಗಿ ನಿತೀಶ್‌ ಮತ್ತೆ ಎನ್‌ಡಿಎ ಸಖ್ಯ ಬೆಳೆಸಲಿದ್ದಾರೆ ಎಂಬ ಸುದ್ದಿಗಳಿಗೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.