Former Bihar CM; ಜನನಾಯಕ ಕರ್ಪೂರಿ ಠಾಕೂರ್ ಭಾರತ ರತ್ನ
ಬಿಹಾರದ ಮಾಜಿ ಮುಖ್ಯಮಂತ್ರಿಗೆ ದೇಶದ ಅತ್ಯುನ್ನತ ಪ್ರಶಸ್ತಿ
Team Udayavani, Jan 24, 2024, 6:25 AM IST
ಹೊಸದಿಲ್ಲಿ: ಬಿಹಾರದ ಮಾಜಿ ಮುಖ್ಯಮಂತ್ರಿ, ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ ಆಂದೋಲನಕ್ಕೆ ಗಣನೀಯ ಕೊಡುಗೆ ನೀಡಿದ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ “ಭಾರತ ರತ್ನ’ (ಮರಣೋತ್ತರ) ಸಂದಿದೆ. ಮಂಗಳವಾರ ಸಂಜೆ ರಾಷ್ಟ್ರಪತಿ ಭವನ ಈ ಕುರಿತು ಘೋಷಣೆ ಮಾಡಿದೆ.
ಬಿಹಾರದಾದ್ಯಂತ “ಜನನಾಯಕ’ ಎಂದೇ ಜನಪ್ರಿಯರಾಗಿದ್ದ ಕರ್ಪೂರಿ ಠಾಕೂರ್ ರಾಜ್ಯದ ಅತ್ಯಂತ ಹಿಂದುಳಿದ ವರ್ಗದ ನಾಯಕರಾಗಿದ್ದರು. ಎರಡು ಬಾರಿ, 1970ರ ಡಿಸೆಂಬರ್‌ನಿಂದ 1971ರ ಜೂನ್‌ವರೆಗೆ ಮತ್ತು 1977ರ ಡಿಸೆಂಬರ್‌ನಿಂದ 1979ರ ಎಪ್ರಿಲ್‌ವರೆಗೆ ಬಿಹಾರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಸಿಎಂ ಆಗಿದ್ದಾಗ ಸರಕಾರಿ ಉದ್ಯೋಗಗಳಲ್ಲಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಮುಂಗೇರಿ ಲಾಲ್ ಸಮಿತಿ ವರದಿಯನ್ನು ಜಾರಿಗೊಳಿಸಿದ್ದರು. ಮೀಸಲಾತಿ ಒದಗಿಸಲು “ಕರ್ಪೂರಿ ಠಾಕೂರ್ ಸೂತ್ರ’ವನ್ನು ಪರಿ ಚಯಿಸುವ ಮೂಲಕ ದೇಶಾದ್ಯಂತ ಮನೆ ಮಾತಾದರು. ಸ್ವಾತಂತ್ರ್ಯ ಹೋರಾಟದ ವೇಳೆ “ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಚಳವಳಿಯಲ್ಲಿ ಸಕ್ರಿಯ ವಾಗಿ ಭಾಗವಹಿಸಿ, ಜೈಲುವಾಸವನ್ನೂ ಅನುಭವಿಸಿದ್ದರು.
ಬಿಹಾರದಲ್ಲಿ ಸಂಪೂರ್ಣವಾಗಿ ಸಾರಾಯಿ ನಿಷೇಧಿಸಿದ ಮೊದಲ ಸಿಎಂ ಎಂಬ ಖ್ಯಾತಿಯೂ ಅವರದು. 1924ರ ಜ. 24ರಂದು ಜನಿಸಿದ ಠಾಕೂರ್ ಅವರ ಜನ್ಮಶತಮಾನೋತ್ಸವದ ಒಂದು ದಿನ ಮುಂಚಿತವಾಗಿಯೇ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಣೆಯಾಗಿರುವುದು ವಿಶೇಷ.
ಕರ್ಪೂರಿಜಿ ಹಿನ್ನೆಲೆ
-ಕರ್ಪೂರಿ ಠಾಕೂರ್‌ಜಿ ಬಿಹಾರದ ಅತ್ಯಂತ ಹಿಂದುಳಿದ ವರ್ಗದ ಜನನಾಯಕ.
-ಬಿಹಾರದ ಮುಖ್ಯಮಂತ್ರಿ ಯಾಗಿದ್ದ ಅವರು ಹಿಂದುಳಿದ ವರ್ಗಕ್ಕೆ ಮೀಸಲಾತಿ ಜಾರಿ ಗೊಳಿಸಿದ ಹರಿಕಾರ.
-ಮೆಟ್ರಿಕ್ಯುಲೇಷನ್‌ನಲ್ಲಿ ಇಂಗ್ಲಿಷ್ ಕಡ್ಡಾಯವನ್ನು ನಿಷೇಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.