Ram Mandir;ಅಯೋಧ್ಯೆಯಲ್ಲಿ ಆತ್ಮಾಭಿಮಾನದ ಪ್ರತಿಷ್ಠೆ: ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ

ಕುಂಭಾಶಿ ವಿಶ್ವಕರ್ಮ ಗುರುಕುಲ; ಶ್ರೀರಾಮ, ಸೀತೆ, ಲಕ್ಷ್ಮಣ, ಹನುಮನ ದೇವರ ಪ್ರತಿಷ್ಠೆ

Team Udayavani, Jan 24, 2024, 11:30 PM IST

Ram Mandir;ಅಯೋಧ್ಯೆಯಲ್ಲಿ ಆತ್ಮಾಭಿಮಾನದ ಪ್ರತಿಷ್ಠೆ: ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ

ತೆಕ್ಕಟ್ಟೆ: ನಾವೆಲ್ಲರೂ ಶ್ರೀರಾಮ ದೇವರು ನಡೆದು ತೋರಿಸಿದ ಮಾರ್ಗದಲ್ಲಿ ಸಾಗುವ ಮೂಲಕ ಭಗವಂತನ ಅನುಗ್ರಹಕ್ಕೆ ಪಾತ್ರರಾಗಬೇಕಾಗಿದೆ. ರಾಮಾಯಣ ದಲ್ಲಿ ನಮ್ಮ ಬದುಕಿಗೆ ಬೇಕಾದ ಮೂಲ ಸ್ತೋತ್ರ ಅಡಗಿದೆ.ಅಯೋಧ್ಯೆಯಲ್ಲಿ ಕೇವಲ ವಿಗ್ರಹ ಪ್ರತಿಷ್ಠೆಯಲ್ಲ; ಸನಾತನ ಸಂಸ್ಕೃತಿಯ ಆತ್ಮಾಭಿಮಾನದ ಪ್ರತಿಷ್ಠೆಯಾಗಿದೆ ಎಂದು ಶ್ರೀಮತ್‌ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ನುಡಿದರು.

ಅವರು ಬುಧವಾರ ಕುಂಭಾಶಿಯ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದ ಆವರಣದಲ್ಲಿರುವ ನೂತನ ರಾಮ ಮಂದಿರದಲ್ಲಿ ಅಯೋಧ್ಯೆಯ ಶ್ರೀ ರಾಮಲಲ್ಲಾನ ಬಾಲಾಲಯದಲ್ಲಿ ಇಟ್ಟು ಪೂಜಿಸಿ ತಂದಿರುವ ಶ್ರೀರಾಮ ಪಾದುಕೆ ಮತ್ತು ಶ್ರೀರಾಮ, ಸೀತೆ, ಲಕ್ಷ್ಮಣ, ಹನುಮನ ಜತೆಗಿರುವ ಮೂರ್ತಿಯ ಪ್ರತಿಷ್ಠಾಪನೆ, ಕಲಶಾಭಿಷೇಕ, ಶ್ರೀ ನಾಗದೇವರ ಪ್ರತಿಷ್ಠಾ ಕಲಶಾಭಿಷೇಕದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯ ಕ್ರಮದಲ್ಲಿ ಆಶೀರ್ವಚನ ನೀಡಿದರು.

ನಮ್ಮ ಸನಾತನ ಸಂಸ್ಕೃತಿಯಲ್ಲಿ ಪರಿವರ್ತನೆಯ ಕಾಲ ಬರುತ್ತಿದೆ. ಮುಂದೆ ಹಿಂದೂಗಳಲ್ಲಿಯೂ ಕೂಡ ಸ್ವಾಭಿಮಾನ ಜಾಗೃತವಾಗಲಿ. ಕಳೆದು ಹೋದ ಸುಮಾರು 3 ಸಾವಿರ ದೇವಾಲಯಗಳು ಮತ್ತೆ ಹಿಂದೂಗಳ ಪಾಲಿಗೆ ಲಭಿಸಲಿ. ಇದಕ್ಕಾಗಿ ನಾವೆಲ್ಲರೂ ಹಿಂದೂಗಳು ಎನ್ನುವ ಭಾವನೆ ಜಾಗೃತವಾಬೇಕು. ರಾಷ್ಟ್ರ ರಕ್ಷಣೆಯ ವಿಚಾರ ಬಂದಾಗ ನಾವೆಲ್ಲಾ ಭಾರತೀಯರು ಎನ್ನುವ ಭಾವ ನಮ್ಮಲ್ಲಿರಬೇಕು ಎಂದರು.

ವಿದ್ವಾನ್‌ ಪಂಜ ಭಾಸ್ಕರ ಭಟ್‌, ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಧರ್ಮದರ್ಶಿ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ, ಕೋಟೇಶ್ವರ ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನದ ಆಡಳಿತ ಧರ್ಮದರ್ಶಿ ಶ್ರೀಧರ ಕಾಮತ್‌ ಕೋಟೇಶ್ವರ, ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೋಣಿ ಕೃಷ್ಣದೇವ ಕಾರಂತ್‌, ಬಾರಕೂರು ಶ್ರೀಕಾಳಿಕಾಂಬಾ ದೇವಸ್ಥಾನದ ತಂತ್ರಿಗಳಾದ ವೇ|ಮೂ| ಲಕ್ಷ್ಮೀಕಾಂತ ಶರ್ಮ, ಕೋಟೇಶ್ವರದ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾ ರ್ಯ, ರಥಶಿಲ್ಪಿ ಕೆ. ರಾಜಗೋಪಾಲ ಆಚಾರ್ಯ, ಪುರೋಹಿತ್‌ ರೋಹಿತಾಕ್ಷ ಆಚಾರ್ಯ ಉಪಸ್ಥಿತರಿದ್ದರು.

ಬಾರಕೂರು ಶ್ರೀಕಾಳಿಕಾಂಬಾ ದೇವಸ್ಥಾನದ ತಂತ್ರಿಗಳಾದ ವೇ|ಮೂ| ಲಕ್ಷ್ಮೀಕಾಂತ ಶರ್ಮ ಸ್ವಾಗತಿಸಿ, ರಥಶಿಲ್ಪಿ ಕೆ. ರಾಜಗೋಪಾಲ ಆಚಾರ್ಯ ವಂದಿಸಿದರು.

ರಾಮ ಮಂದಿರದಲ್ಲಿ ವಿಶ್ವಕರ್ಮರ ಪಾತ್ರ
ಅಯೋಧ್ಯೆ ರಾಮಮಂದಿರದ ಸಂಪೂರ್ಣ ದೇವಶಿಲ್ಪ ವಿನ್ಯಾಸಗೊಳಿಸಿರುವ ಸ್ತಪತಿ ಚಂದ್ರಕಾಂತ್‌ ಸೋಮ್‌ಪುರ ಹಾಗೂ ರಾಮ ದೇವರ ಮೂರ್ತಿಯನ್ನು ಕೆತ್ತಿರುವ ಶಿಲ್ಪಿ ಅರುಣ್‌ ಯೋಗಿರಾಜ್‌ ಕೂಡ ವಿಶ್ವಬ್ರಾಹ್ಮಣರು. ವಿಶ್ವಕರ್ಮ ಸಮಾಜವು ಗತಕಾಲದಲ್ಲಿ ಮಾತ್ರವಲ್ಲ ಈ ಕಾಲದಲ್ಲಿಯೂ ದೇವಸ್ಥಾನ ನಿರ್ಮಾಣದಲ್ಲಿ ತಮ್ಮದೇ ವೈಶಿಷ್ಟé ಹೊಂದಿದ್ದಾರೆ ಎಂದು ತೋರಿಸಿಕೊಟ್ಟಿದ್ದಾರೆ. ರಥಶಿಲ್ಪಿ ರಾಜಗೋಪಾಲ ಆಚಾರ್ಯ ಅವರಿಂದ ಅಯೋಧ್ಯೆಯ ರಾಮ ದೇವರಿಗೆ ಬ್ರಹ್ಮ ರಥ ನಿರ್ಮಾಣ ಮಾಡುವ ಅವಕಾಶ ಒದಗಿ ಬಂದಿರುವುದು ಹೆಮ್ಮೆಯ ವಿಚಾರ ಎಂದು ಕಾಳಹಸ್ತೇಂದ್ರ ಶ್ರೀಗಳು ಹರ್ಷ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.