Mangaluru; ಅಡಿಕೆ ಕಳ್ಳಸಾಗಾಣಿಕೆ ತಡೆಗಟ್ಟಲು ಸರಕಾರಕ್ಕೆ ಕ್ಯಾಂಪ್ಕೊ ಆಗ್ರಹ
Team Udayavani, Jan 24, 2024, 11:41 PM IST
ಮಂಗಳೂರು: ಕಳ್ಳ ಸಾಗಾಣಿಕೆ ಮೂಲಕ ವಿದೇಶಿ ಅಡಿಕೆ ದೇಶದೊಳಕ್ಕೆ ಅವ್ಯಾಹತವಾಗಿ ಬರುತ್ತಿದ್ದು, ಸರಕಾರದ ಖಜಾನೆಗೆ ಕನ್ನ ಹಾಕುವ ಕೆಲಸ ನಿರಾತಂಕವಾಗಿ ನಡೆಯುತ್ತಿದೆ. ಇದನ್ನು ತಡೆಗಟ್ಟಲು ಸೂಕ್ತ ಕ್ರಮ ಜರಗಿಸಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಗಿ ಸರಕಾರವನ್ನು ಆಗ್ರಹಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದ ಸಮಗ್ರ ಕಾರ್ಗೋ ಟರ್ಮಿನಲ್‌ನ ಮೂಲಕ ವಿವಿಧ ಭಾಗಗಳಿಂದ ಅಡಿಕೆ ಮಂಗಳೂರಿಗೆ ಬಂದು ಇಲ್ಲಿಂದಲೇ ಇತರ ಪ್ರದೇಶಗಳಿಗೆ ರವಾನೆಯಾಗುತ್ತಿದೆ. ಅಡಿಕೆ ಬೆಳೆಯ ಪಾರಂಪರಿಕ ಪ್ರದೇಶಗಳಾದ ಕರಾವಳಿ ಮತ್ತು ಮಲೆ ನಾಡಿಗೂ ಕಳ್ಳ ಸಾಗಾಣಿಕೆಯ ಕರಿ ನೆರಳುಬೀಳುತ್ತಿದೆ. ಅಡಿಕೆ ಬೆಳೆಯ ಮೂಲ,ದರ ಮತ್ತು ದಾಖಲೆಗಳ ಬಗ್ಗೆ ಪರಿಶೀಲನೆ ನಡೆಸಿ ಸರಕಾರಕ್ಕೆ ತೆರಿಗೆ ಪಾವತಿಯಲ್ಲಾಗುವ ವಂಚನ ಬಗ್ಗೆ ತನಿಖೆ ನಡೆಸುವಂತೆ ಅವರು ಆಗ್ರಹಿಸಿದ್ದಾರೆ.
ಅಡಿಕೆಯ ಕಾನೂನು ಬಾಹಿರ ಆಮದಿನ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್, ಕೇಂದ್ರ ವಾಣಿಜ್ಯ ಸಚಿವ ಪಿಯೂಶ್ ಗೋಯಲ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕ್ಯಾಂಪ್ಕೊ ಸಂಸ್ಥೆ ಪತ್ರ ಬರೆದು ಮನವಿ ಮಾಡಿಕೊಂಡಿಕೊಂಡಿದ್ದು ಸರಕಾರ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ
Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು
JPC ಅಧ್ಯಕ್ಷ ಪಾಲ್ ಕರ್ನಾಟಕ ಪ್ರವಾಸ ಏಕಪಕ್ಷೀಯ: ಅಸಾಸುದ್ದೀನ್ ಒವೈಸಿ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.