Mangaluru ಜ. 28ರಂದು ಉತ್ತರ್-ದಕ್ಷಿಣ್ ಸಂಗೀತ ಕಾರ್ಯಕ್ರಮ
Team Udayavani, Jan 24, 2024, 11:50 PM IST
ಮಂಗಳೂರು: ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಸರಣಿ ಸಂಗೀತ ಕಾರ್ಯಕ್ರಮ “ಉತ್ತರ್-ದಕ್ಷಿಣ್’ ಜ. 28ರಂದು ಸಂಜೆ 5.30ರಿಂದ ನಡೆಯಲಿದೆ.
ಸಂಗೀತ ಭಾರತಿ ಪ್ರತಿಷ್ಠಾನದ ಸಹಯೋಗದೊಂದಿಗೆ ನಡೆಯುವ ಈ ಕಾರ್ಯಕ್ರಮವನ್ನು ಮುಂಬಯಿಯ ವಿವಿಧ್ ಆರ್ಟ್ಸ್ ಆ್ಯಂಡ್ ಎಂಟರ್‌ಟೈನ್‌ಮೆಂಟ್ ಪ್ರಸ್ತುತ ಪಡಿಸುತ್ತಿದೆ. ಕಾರ್ಯಕ್ರಮಕ್ಕೆ ಪ್ರವೇಶ ಉಚಿತ ಎಂದು ಸಂಗೀತ ಭಾರತಿ ಪ್ರತಿಷ್ಠಾನದ ಉಪಾಧ್ಯಕ್ಷ ನರೇಂದ್ರ ಎಲ್. ನಾಯಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿದ್ವಾನ್ ಮೈಸೂರು ನಾಗರಾಜ್ ಮತ್ತು ಡಾ| ಎಂ. ಮಂಜುನಾಥ್ ಅವರ ಪಿಟೀಲು ಯುಗಳ ವಿಶಿಷ್ಟ ಸಂಯೋಜನೆಯಾಗಿದ್ದು, ವಿದ್ವಾನ್ ಅರ್ಜುನ್ ಕುಮಾರ್ ಮತ್ತು ವಿದ್ವಾನ್ ಗಿರಿಧರ್ ಉಡುಪ ಅವರ ಮೃದಂಗ ಮತ್ತು ಘಟಂನಲ್ಲಿ ಸಾಥ್ ನೀಡಲಿದ್ದಾರೆ. ಬಳಿಕ ಪದ್ಮಶ್ರೀ ಪುರಸ್ಕೃತ ಪಂಡಿತ್ ವೆಂಕಟೇಶ್ ಕುಮಾರ್ ಅವರಿಂದ ಹಿಂದೂಸ್ತಾನಿ ಗಾಯನ ನಡೆಯಲಿದೆ. ಅವರಿಗೆ ನರೇಂದ್ರ ಎಲ್. ನಾಯಕ್ ಹಾರ್ಮೋನಿಯಂನಲ್ಲಿ ಮತ್ತು ಕೇಶವ್ ಜೋಶಿ ತಬಲಾದಲ್ಲಿ ಸಾಥ್ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.