Tollywood: ಟಾಲಿವುಡ್ ನಟ ಅಖಿಲ್ ಅಕ್ಕಿನೇನಿ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ?
Team Udayavani, Jan 25, 2024, 3:53 PM IST
ಹೈದರಾಬಾದ್: ಟಾಲಿವುಡ್ ನಟ ಅಖಿಲ್ ಅಕ್ಕಿನೇನಿ ಅವರ ಮುಂದಿನ ಸಿನಿಮಾದ ಅನೌನ್ಸ್ ಕುರಿತು ಕುತೂಹಲ ಹೆಚ್ಚಾಗಿದೆ. ದೊಡ್ಡ ಹಿಟ್ ಕೊಡುವ ನಿರೀಕ್ಷೆಯಿದ್ದ ಅವರ ʼ ಏಜೆಂಟ್ʼ ಸಿನಿಮಾ ಹೀನಾಯ ಸೋಲು ಕಂಡಿತು. ಆ ಬಳಿಕ ಅಖಿಲ್ ಯಾವ ಸಿನಿಮಾದಲ್ಲೂ ಕಾಣಿಸಿಕೊಂಡಿಲ್ಲ.
ಸುರೇಂದ್ರ ರೆಡ್ಡಿ ನಿರ್ದೇಶನದ ʼಏಜೆಂಟ್ʼ ಸಿನಿಮಾಕ್ಕಾಗಿ ಅಖಿಲ್ ಮೂರು ವರ್ಷ ಪರಿಶ್ರಮ ಹಾಕಿದ್ದರು. ಆದರೆ ಸಿನಿಮಾ ಮಾತ್ರ ಥಿಯೇಟರ್ ನಲ್ಲೂ ಓಡದೆ, ಪ್ರೇಕ್ಷಕರ ಮನದಲ್ಲೂ ಉಳಿಯದೆ ಹೀಗೆ ಬಂದು, ಹಾಗೇ ಹೋಯಿತು.
ʼಏಜೆಂಟ್ʼ ಬಳಿಕ ಅಖಿಲ್ ಮುಂದೆ ಯಾವ ಸಿನಿಮಾವನ್ನು ಘೋಷಿಸಿಲ್ಲ. ಕೆಲವು ದಿನಗಳ ಹಿಂದೆ, ಪ್ರಭಾಸ್ ಅವರ ಹೋಮ್ ಬ್ಯಾನರ್ ಯುವಿ ಕ್ರಿಯೇಷನ್ಸ್ ಅಖಿಲ್ ಅವರೊಂದಿಗೆ ಸಿನಿಮಾ ಮಾಡುವ ಬಗ್ಗೆ ಸುದ್ದಿ ಹರಿದಾಡಿತ್ತು. ಈ ಸಿನಿಮಾವನ್ನು ನವ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು.
ಇದೀಗ ಇದೇ ಸಿನಿಮಾದ ಬಗ್ಗೆ ಮತ್ತೊಂದು ಸುದ್ದಿ ಹರಿದಾಡಿದ್ದು, ಟಾಲಿವುಡ್ ನಲ್ಲಿ ಸದ್ದು ಮಾಡಿದೆ. ʼಕೆಜಿಎಫ್ʼ, ʼಸಲಾರ್ʼ ನಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್ ಅಖಿಲ್ ಅವರ ಸಿನಿಮಾಕ್ಕೆ ಯುವಿ ಕ್ರಿಯೇಷನ್ಸ್ ಜೊತೆಗೆ ಸಹ-ನಿರ್ಮಾಣ ಮಾಡಲಿದೆ ಎನ್ನಲಾಗುತ್ತಿದೆ.
ಇದಕ್ಕೆ ಪುಷ್ಟಿ ನೀಡುವಂತೆ, ಇತ್ತೀಚೆಗೆ ಅಖಿಲ್ ʼಸಲಾರ್ʼ ಸಕ್ಸಸ್ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ಅಖಿಲ್ ಈ ಬಗ್ಗೆ ಯಾವ ಮಾಹಿತಿಯನ್ನು ನೀಡಿಲ್ಲ. ಮುಂದಿನ ದಿನಗಳಲ್ಲಿ ಚಿತ್ರತಂಡದಿಂದ ಹೆಚ್ಚಿನ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.