Kakinada: ಪಾನಿಪುರಿ ತಿಂದು ಇಬ್ಬರು ಮಕ್ಕಳ ಸಾವು?
Team Udayavani, Jan 25, 2024, 10:01 PM IST
ಕಾಕಿನಾಡ: ಆಂಧ್ರಪ್ರದೇಶದ ಎಲೂರು ಜಿಲ್ಲೆಯ ಜಂಗಾರೆಡ್ಡಿಗುದೆಮ್ನಲ್ಲಿ ಬುಧವಾರ ರಾತ್ರಿ ಇಬ್ಬರು ಮಕ್ಕಳು ಪಾನಿಪುರಿ ತಿಂದು ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ಪಾನಿಪುರಿ ತಿಂದ ಮೇಲೆ ಹೊಟ್ಟೆನೋವೆಂದು ಮಕ್ಕಳು ಹೇಳಿಕೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು.
ಅಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಎಲೂರು ಜಿಲ್ಲಾಸ್ಪತ್ರೆಗೆ ಒಯ್ಯಲು ತಿಳಿಸಿದ್ದಾರೆ. ದಾರಿಯಲ್ಲೇ ಇಬ್ಬರೂ ಮಕ್ಕಳು ಮೃತಪಟ್ಟಿದ್ದಾರೆ. ಮಕ್ಕಳು ಪಾನಿಪುರಿಯನ್ನು ತಿಂದ ನಂತರ, ಅನ್ನ-ಬೀನ್ಸ್ ಸಾಂಬಾರು, ಮೊಸರನ್ನು ಸೇವಿಸಿದ್ದಾರೆ. ಆದ್ದರಿಂದ ನಿರ್ದಿಷ್ಟವಾಗಿ ಯಾವ ಕಾರಣಕ್ಕೆ ಮೃತಪಟ್ಟಿದ್ದಾರೆಂದು ತನಿಖೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.