BJP: ಸವದಿಗೆ ಡಬಲ್ ಆಫರ್ , ರೆಡ್ಡಿಗೂ ಬಿಜೆಪಿ ಬುಲಾವ್ ?
ಶೆಟ್ಟರ್ ಜತೆಗೆ ಲಕ್ಷ್ಮಣ ಸವದಿ ಸೇರ್ಪಡೆಗೂ ಬಿಜೆಪಿ ವರಿಷ್ಠರ ಸಮ್ಮತಿ, ಡಬಲ್ ಆಫರ್ ಭರವಸೆ?
Team Udayavani, Jan 25, 2024, 10:18 PM IST
ಬೆಂಗಳೂರು: ಬಿಜೆಪಿಗೆ ನನ್ನ ಹೆಣವೂ ಮರಳಿ ಹೋಗುವುದಿಲ್ಲ ಎಂದು ಈ ಹಿಂದೆ ಆಕ್ರೋಶ ವ್ಯಕ್ತಪಡಿಸಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರಿಗೂ ಬಿಜೆಪಿ ಗಾಳ ಹಾಕಿದ್ದು, ಮರಳಿ ಪಕ್ಷಕ್ಕೆ ಬಂದರೆ “ಡಬಲ್ ಆಫರ್’ ಭರವಸೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಇದರ ಜತೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿಯವರಿಗೂ ಆಹ್ವಾನ ನೀಡಲಾಗಿದೆ.
ಬಿಜೆಪಿ ಮೂಲಗಳ ಪ್ರಕಾರ ಸವದಿ ಸೇರ್ಪಡೆಗೆ ಯಡಿಯೂರಪ್ಪ ಪಾಳಯದ ವಿರೋಧವಿದ್ದರೆ, ಶೆಟ್ಟರ್ ಆಗಮನಕ್ಕೆ ಸಂತೋಷ್ ಬಣದ ಅಡ್ಡಿ ಇತ್ತು. ಈಗ ಎರಡೂ ಬಣಕ್ಕೂ ಒಪ್ಪಿತವಾಗುವ ಒಡಂಬಡಿಕೆಯನ್ನು ವರಿಷ್ಠರೇ ರೂಪಿಸಿದ್ದು, ಶೆಟ್ಟರ್ ಜತೆಗೆ ಸವದಿ ಸೇರ್ಪಡೆಗೂ ಸಮ್ಮತಿ ದೊರಕಿದೆ ಎಂದು ಹೇಳಲಾಗುತ್ತಿದೆ.
ಸವದಿ ಜತೆ ಮಾತುಕತೆ ನಡೆಸುವಂತೆ ಸ್ಥಳೀಯ ನಾಯಕರಿಗೆ ಅಮಿತ್ ಶಾ ಸೂಚನೆ ನೀಡಿದ್ದು, ತೆರೆಮರೆಯಲ್ಲಿ ಈಗಾಗಲೇ ಮಾತುಕತೆಯೂ ನಡೆದಿದೆ ಎನ್ನಲಾಗಿದೆ. ಆದರೆ ಈ ಹಂತದಲ್ಲಿ ರಾಜೀನಾಮೆ ನೀಡುವುದರಿಂದ ಯಾವುದೇ ಲಾಭ ಇಲ್ಲ ಎಂಬುದು ಸವದಿ ವಾದವಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಡಬಲ್ ಆಫರ್ ನೀಡಲಾಗಿದೆ ಎಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.
ಇದರ ಪ್ರಕಾರ ಸವದಿ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಿಂದ ಸ್ಪರ್ಧಿಸಬೇಕು. ಇದಕ್ಕೆ ಪ್ರತಿಯಾಗಿ ಪುತ್ರ ಚಿದಾನಂದ ಸವದಿಯವರಿಗೆ ವಿಧಾನಸಭಾ ಟಿಕೆಟ್ ನೀಡಬೇಕೆಂಬ ಪ್ರಸ್ತಾಪವನ್ನು ಇಡಲಾಗಿದೆ. ಸವದಿ ಈ ಆಫರ್‌ನ್ನು ಇನ್ನೂ ಒಪ್ಪಿಲ್ಲ. ಆದರೆ “ವಾತಾವರಣ’ವನ್ನು ಅವಲೋಕಿಸಿ ಶೀಘ್ರ ನಿರ್ಧಾರ ತಿಳಿಸುವ ಸಾಧ್ಯತೆ ದಟ್ಟವಾಗಿದೆ.
ಇದರ ಜತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಮ್ಮದೇ ಆದ ಪ್ರಭಾವ ಹೊಂದಿರುವ ಜನಾರ್ದನ ರೆಡ್ಡಿಯವರನ್ನೂ ಮರಳಿ ಪಕ್ಷಕ್ಕೆ ಕರೆ ತರಲು ಪ್ರಯತ್ನ ನಡೆಸಲಾಗುತ್ತಿದೆ. ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಈ ಆಪರೇಷನ್‌ಗೆ ಬಳಕೆ ಮಾಡಲಾಗುತ್ತಿದೆ. ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಕಲಬುರ್ಗಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಕ್ಕಮಟ್ಟಿಗೆ ಮತ ಕೀಳುವ ಸಾಮರ್ಥ್ಯ ರೆಡ್ಡಿಗೆ ಇದೆ. ಸಹಜವಾಗಿಯೇ ಬಿಜೆಪಿ ಮತಗಳಿಗೆ ಅವರು ಕತ್ತರಿ ಹಾಕುತ್ತಿದ್ದಾರೆ. ಇದರಿಂದ ರೆಡ್ಡಿಯವರಿಗೆ ಲಾಭವಾಗದೇ ಇದ್ದರೂ ಬಿಜೆಪಿಗೆ ನಷ್ಟ ನಿರೀಕ್ಷಿತ. ಹೀಗಾಗಿ ಅವರನ್ನೂ ಪಕ್ಷಕ್ಕೆ ಮರಳಿ ಕರೆತಂದು ಕಾಂಗ್ರೆಸ್ ಕಟ್ಟಿ ಹಾಕುವುದಕ್ಕೆ ಬಿಜೆಪಿ ಲೆಕ್ಕಾಚಾರ ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.