Shettar ನಡೆಯಿಂದ ಕಾಂಗ್ರೆಸ್ ಗೆ ಹಾನಿಯಿಲ್ಲ, ಸವದಿ ಪಕ್ಷ ಬಿಡುವುದಿಲ್ಲ: ಎಂ.ಬಿ.ಪಾಟೀಲ್
Team Udayavani, Jan 26, 2024, 12:08 PM IST
ವಿಜಯಪುರ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಹಾನಿ ಇಲ್ಲ. ಅಲ್ಲದೇ ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಶೆಟ್ಟರ ಹಾದಿಯಲ್ಲಿ ಸಾಗುವುದಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಪ್ರತಿಕ್ರಿಯಿಸಿದ್ದಾರೆ.
ಗಣರಾಜ್ಯೋತ್ಸವ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಬಿಜೆಪಿ ಪಕ್ಷದಿಂದ ಜಗದೀಶ ಶೆಟ್ಟರ ಅವಮಾನಿತರಾಗಿದ್ದರು. ಆಗ ನಾನು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಹಲವರು ಜಗದೀಶ ಶೆಟ್ಟರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರಲು ಶ್ರಮಿಸಿದ್ದೆವು. ವಿಧಾನಸಭೆ ಟಿಕೆಟ್ ಕೊಟ್ಟ ಬಳಿಕ ಸೋತರೂ ಅವರನ್ನು ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಶಾಸಕರಾಗಿ ಮಾಡಿತ್ತು. ಇಷ್ಟೆಲ್ಲ ಗೌರವ ನೀಡಿದರೂ ಏಕಾಏಕಿ ಬಿಜೆಪಿ ಸೇರ್ಪಡೆಯಾಗಿರುವುದು ಏಕೆಂದು ಗೊತ್ತಿಲ್ಲ ಎಂದರು.
ಜಗದೀಶ್ ಶೆಟ್ಟರ್ ನಡೆ ಬಗ್ಗೆ ನಾವು ಪ್ರತಿಕ್ರಿಯಿಸುವುದಕ್ಕಿಂತ ಜನರೇ ನಿರ್ಧಾರ ಮಾಡುತ್ತಾರೆ. ಜನ ಏನನ್ನುತಾರೆ ಎನ್ನುವುದು ಅವರೇ ತಿಳಿದುಕೊಳ್ಳಲಿ ಎಂದರು.
ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ಏನು ಹೇಳಿದೆ, ಏನು ಭರವಸೆ ನೀಡಿದೆ, ಯಾವ ಒತ್ತಡ ಹಾಕಿದೆ ಎಂಬುದು ಗೊತ್ತಿಲ್ಲ. ವಾಸ್ತವ ಏನಿದೆ ಎಂಬುದನ್ನು ಶೆಟ್ಟರ್ ಅವರೇ ಬಹಿರಂಗ ಮಾಡಬೇಕು ಎಂದರು.
ಒಬ್ಬರು ಹೋಗಿದ್ದಾರೆ ಎಂದ ಮಾತ್ರಕ್ಕೆ ಮತ್ತೊಬ್ಬರ ಹೆಸರನ್ನು ತಳುಕು ಹಾಕುವುದು ತರವಲ್ಲ. ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದರು.
ಯಾರ ಬಗ್ಗೆಯೂ ಈ ರೀತಿ ಇಲ್ಲ ಸಲ್ಲದ ಮಾತನಾಡಬಾರದು. ಲಕ್ಷ್ಮಣ ಸವದಿ ಉಪ ಮುಖ್ಯಮಂತ್ರಿಯಾಗಿದ್ದವರು. ಜಗದೀಶ ಶೆಟ್ಟರ ಮಾಡಿದಂತೆ ಸವದಿ ಮಾಡುದಿಲ್ಲ ಎಂದು ವಿಶ್ವಾಸವಿದೆ ಎಂದು ಎಂ.ಬಿ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.