Karnataka ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕೈಗಾರಿಕಾ ನೀತಿ: ಸಚಿವ ಎಂ. ಬಿ. ಪಾಟೀಲ್
Team Udayavani, Jan 26, 2024, 9:25 PM IST
ವಿಜಯಪುರ: ರಾಜ್ಯದಲ್ಲಿ ಬರುವ ಎರಡು ತಿಂಗಳಲ್ಲಿ ಹೊಸ ಕೈಗಾರಿಕಾ ನೀತಿ ಜಾರಿಗೆ ತರಲಾಗುವುದು. ಕರ್ನಾಟಕವನ್ನು ವಿಶ್ವದಲ್ಲೇ ಆಕರ್ಷಕ ಕೈಗಾರಿಕಾ ವಲಯವಾಗಿ ರೂಪಿಸಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉದ್ಯೋಗ ನೀತಿ ಪಾಲಿಸದ ಕೈಗಾರಿಕೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು.
ವಿಶ್ವ ಮಟ್ಟದಲ್ಲಿ ಕರ್ನಾಟಕ ಕೈಗಾರಿಕಾ ಸಾಧನೆಯಿಂದ ಗುರುತಿಸುವಂತಾಗಲು ಬೆಂಗಳೂರಿನ ಆಚೆಗಿನ ರಾಜ್ಯದ ಭಾಗದಲ್ಲಿ ಕೈಗಾರಿಕಾ ಕ್ರಾಂತಿಗೆ ಮುಂದಾಗಿದ್ದೇವೆ. ಇದರಿಂದ ವೃತ್ತಿಪರ ಕೈಗಾರಿಕೆಗಳು ಸ್ಥಾಪನೆಯಾಗಿ ರಾಜ್ಯದಲ್ಲಿ ನಿರುದ್ಯೋಗ ನಿವಾರಣೆಗೆ ಸಹಕಾರಿ ಆಗಲಿದೆ ಎಂದರು.
ವಿಶ್ವ ಅರ್ಥಿಕ ಸಮ್ಮೇಳನದಿಂದ 26,000 ಕೋಟಿ ರೂ. ಹಾಗೂ ಅಮೆರಿಕ ಪ್ರವಾಸದ ಬಳಿಕ 24000 ಕೋಟಿ ರೂ. ಬಂಡವಾಳ ಕರ್ನಾಟಕಕ್ಕೆ ಹರಿದು ಬರಲಿದೆ. ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಹಲವು ವಿದೇಶಿ ಕಂಪನಿಗಳೊಂದಿಗೆ ಪರಸ್ಪರ ಒಪ್ಪಂದಕ್ಕೆ ಸಹಿಯನ್ನೂ ಹಾಕಲಾಗಿದೆ ಎಂದರು.
ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಕೇರಳ ಮೂಲದ ದುಬೈ ಉದ್ಯಮಿ ಯುಸೂಫ್ ಅಲಿ 3000 ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ಉತ್ತರ ಭಾರತದ ಕಂಪನಿಗಳೂ ಸಹ ಉತ್ತರ ಭಾರತದ ಆಹಾರ ಪದಾರ್ಥಗಳ ಮಾರುಕಟ್ಟೆ ವಿಸ್ತರಣೆಗೆ ಕರ್ನಾಟಕವನ್ನೇ ಆಯ್ಕೆ ಮಾಡಿಕೊಳ್ಳಲು ಮುಂದೆ ಬಂದಿವೆ ಎಂದರು.
ವಿಜಯಪುರ ಜಿಲ್ಲೆಯ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಿರುವ ನೀರನ್ನು ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯದಿಂದ ಪಡೆಯಲಾಗುತ್ತದೆ. ಕೈಗಾರಿಕೆ ಸೇರಿದಂತೆ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿ ಆಗಲಿರುವ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಮಾರ್ಚ್ ಅಂತ್ಯದೊಳಗೆ ಲೋಕಾರ್ಪಣೆ ಖಚಿತ ಎಂದರು.
ವಿಜಯಪುರ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನದ ಬಳಿಕ ಕುಡಿಯುವ ನೀರು, ತೋಟಗಾರಿಕೆ, ಕೃಷಿ ಅಭಿವೃದ್ಧಿ, ರೈತರ ಆರ್ಥಿಕ ಮಟ್ಟ ಬೆಳವಣಿಗೆ ಕುರಿತು ಅಧ್ಯಯನ ವರದಿ ಪಡೆಯುತ್ತೇನೆ ಎಂದರು.
ಅಭಿವೃದ್ಧಿಯಲ್ಲಿ ಹಿಂದುಳಿದ ವಿಜಯಪುರ ಜಿಲ್ಲೆಗೆ ಕಲ್ಯಾಣ ಕರ್ನಾಟಕ ಮಾದರಿಯಲ್ಲಿ ಸಂವಿಧಾನದ 371(ಜೆ) ಕಲಂ ಅನ್ವಯ ವಿಶೇಷ ಸ್ಥಾನಮಾನ ಅಸಾಧ್ಯ. ಆಗದ ಕೆಲಸದ ಬಗ್ಗೆ ಸುಳ್ಳು ಭರವಸೆ ಕೊಡಲ್ಲ. ಆದರೆ ನಂಜುಂಡಪ್ಪ ವರದಿ ಅನ್ವಯ ಹಿಂದುಳಿದ ವಿಜಯಪುರ ಜಿಲ್ಲೆಯನ್ನು 14,000 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಮಾಡುವುದು ನಮ್ಮ ಮುಂದಿರುವ ಆದ್ಯತೆ.
-ಎಂ.ಬಿ.ಪಾಟೀಲ, ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.