Mobile Thieves: ಮಹಿಳಾ ಟೆಕಿ ಸೇರಿದಂತೆ ಇಬ್ಬರ ಮೊಬೈಲ್ ಲಪಟಾಯಿಸಿದ ಕಳ್ಳರು
Team Udayavani, Jan 27, 2024, 1:42 PM IST
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೆ ಮೊಬೈಲ್ ಲಪಟಾಯಿಸುವ ಗ್ಯಾಂಗ್ ಸಕ್ರಿಯವಾಗಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಿಜಯನಗರ ಹಾಗೂ ಮಹ ದೇವಪುರ ಠಾಣಾ ವ್ಯಾಪ್ತಿಗಳಲ್ಲಿ ಮೊಬೈಲ್ ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ಮಹಿಳಾ ಟೆಕಿ ಸೇರಿ ಇಬ್ಬರ ಮೊಬೈಲ್ ಕಸಿದು ಪುಂಡರು ಪರಾರಿಯಾಗಿದ್ದಾರೆ.
ಆರ್ಪಿಸಿ ಲೇಔಟ್ ನಿವಾಸಿ ಜ್ಯೋತಿ ಸಾಫ್ಟ್ವೇರ್ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಗುರುವಾರ ಸಂಜೆ ಕೆಲಸ ಮುಗಿಸಿಕೊಂಡು ಮೊಬೈಲ್ನಲ್ಲಿ ಮಾತನಾಡುತ್ತಾ ಮನೆಗೆ ಹಿಂತಿರುಗುತ್ತಿದ್ದರು. ಮಾರ್ಗ ಮಧ್ಯೆ ವಿಜಯನಗರದ 9ನೇ ಮುಖ್ಯರಸ್ತೆಯಲ್ಲಿ ಇವರನ್ನು ಬೈಕ್ನಲ್ಲಿ ಹಿಂಬಾಲಿಸಿದ ಆರೋಪಿಗಳು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ.
ಇತ್ತ ಜ್ಯೋತಿ ಜೋರಾಗಿ ಕೂಗಿಕೊಳ್ಳುವಷ್ಟರಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆದರಿಸಿ ಮೊಬೈಲ್ ದರೋಡೆ: ಮತ್ತೂಂದು ಪ್ರಕರಣದಲ್ಲಿ ಮಹದೇವಪುರ ಠಾಣಾ ವ್ಯಾಪ್ತಿಯ ಟಿನ್ ಫ್ಯಾಕ್ಟರಿ ಬಳಿ ಗುರುವಾರ ತಡರಾತ್ರಿ 1.30ಕ್ಕೆ ಪಾದಚಾರಿ ಯೊಬ್ಬರು ಹೋಗುತ್ತಿದ್ದ ವೇಳೆ ದ್ವಿಚಕ್ರವಾಹ ನದಲ್ಲಿ ಬಂದ ಅಪರಿಚಿತರು ಇವರನ್ನು ಬೆದರಿಸಿ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.