Yedamangala; ಕಾಂತಾರ ಸನ್ನಿವೇಶ ಮಾದರಿ ಪ್ರಸಂಗ; ದೈವ ನರ್ತನದ ಹೊಣೆ ಹೊತ್ತ ಮಕ್ಕಳು

Team Udayavani, Jan 27, 2024, 11:55 PM IST

ಸವಣೂರು: ತುಳುನಾಡಿನ ದೈವಾರಾಧನೆಯ ಕಥಾ ಹಂದರವಿರುವ ಕಾಂತಾರ ಸಿನೆಮಾದಲ್ಲಿದ್ದಂತೆ ಘಟನೆ ಯೊಂದು ಕಡಬ ತಾಲೂಕಿನ ಎಡಮಂಗಲದಲ್ಲಿ ನಡೆದಿದೆ.

ದೈವ ನರ್ತಿಸುತ್ತಾ ದೇವರ ಪಾದ ಸೇರಿದ ನರ್ತಕನ ಮಗ ದೈವ ಚಾಕರಿಯ ದೈವ ಬೂಳ್ಯ ಹಿಡಿದು ಹೊಣೆ ಹೊತ್ತ ಅಪರೂಪದ ಘಟನೆ ಇದು.

ಕೆಲವು ತಿಂಗಳ ಹಿಂದೆ ಎಡಮಂಗಲದ ಶಿರಾಡಿ ದೈವಸ್ಥಾನದ ವಾರ್ಷಿಕ ಜಾತ್ರೆ ಸಂದರ್ಭ ಉಳ್ಳಾಕುಲು ದೈವ ಹಾಗೂ ನಾಗಬ್ರಹ್ಮ ದೈವದ ನರ್ತನ ಸೇವೆ ನಡೆಯುತ್ತಿತ್ತು. ಈ ವೇಳೆ ಉಳ್ಳಾಕುಲು ದೈವದ ನರ್ತಕರಾ ಗಿದ್ದ 60 ವರ್ಷದ ಕಾಂತು ಅಜಿಲ ನರ್ತನ ಮಾಡುತ್ತಲೇ ಕುಸಿದು ಸಾವನ್ನಪ್ಪಿದ್ದರು. ಬಳಿಕ ಗ್ರಾಮಸ್ಥರು ದೈವದ ನರ್ತಕನ ಹುಡುಕಾಟದಲ್ಲಿ ತೊಡಗಿದ್ದರು. ಪ್ರಶ್ನಾ ಚಿಂತನೆ ನಡೆಸಿದಾಗ ಕಾಂತು ಅಜಿಲರ ಮಕ್ಕಳಾದ ಮೋನಪ್ಪ ಮತ್ತು ದಿನೇಶ್‌ ಅವರೇ ಮುಂದೆ ಆ ಹೊಣೆ ಹೊರಬೇಕು ಎಂಬ ಅಂಶ ಕಂಡು ಬಂದಿತು. ಅನಂತರ ಇದಕ್ಕೆ ಶಿರಾಡಿ ದೈವದ ಒಪ್ಪಿಗೆಯನ್ನೂ ಪಡೆಯಲಾಯಿತು. ಈ ಹಿನ್ನೆಲೆಯಲ್ಲಿ ಈ ವರ್ಷದ ನೇಮದ ದಿನ ಇಬ್ಬರೂ ಯುವಕರನ್ನು ದೈವದ ಮುಂದೆ ನಿಲ್ಲಿಸಲಾಯಿತು. ಆಗ ಇಬ್ಬರಿಗೂ ದೈವದ ಸೇವೆಯನ್ನು ಮಾಡುವ ರೀತಿ ವಿವರಿಸಲಾಯಿತು.

ಮೊದಲು ಶುದ್ಧವಾಗಿ ಮಡಿ ಬಟ್ಟೆಯನ್ನು ಸುತ್ತಿ ಮನೆ ಮಂದಿಯ ಹಾಗೂ ಗ್ರಾಮದ ಹಿರಿಯರ ಆಶೀರ್ವಾದ ಪಡೆದ ಬಳಿಕ ಒಂಬತ್ತು ದಿಕ್ಕಿಗೆ ಸೇರಿದ ಜನರ ಸಮ್ಮುಖದಲ್ಲಿ ದೀಕ್ಷೆ ಬೂಳ್ಯವನ್ನು ನೀಡಲಾಗುತ್ತದೆ. ದೈವ ತನ್ನ ನರ್ತಕನಿಗೆ ತನ್ನ ಸೇವೆ ಮಾಡುವಂತೆ ನೀಡುವ ಈ ದೀಕ್ಷೆ ದೈವಾರಾಧನೆಯಲ್ಲಿ ಅತ್ಯಂತ ಮಹತ್ವದ್ದು. ದೈವ ತನ್ನ ಅವಾಹನೆಯನ್ನು ಹೊಸದಾಗಿ ನೇಮಕವಾದ ದೈವ ನರ್ತಕರ ಮೂಲಕ ತೋರ್ಪಡಿಸಲಿದೆ. ದೀಕ್ಷೆ ಪಡೆದ ಬಳಿಕ ದೈವ ನರ್ತಕ ನಾಲ್ಕು ಗ್ರಾಮಕ್ಕೆ ಸಂಬಂಧಪಟ್ಟ ದೈವಗಳ ಸೇವೆಯ ಹೊಣೆಯನ್ನು ಹೊರುತ್ತಾನೆ.

ಟಾಪ್ ನ್ಯೂಸ್

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bantwal: ಕಲ್ಲಡ್ಕ ಫ್ಲೈಓವರ್‌; ಪೂರ್ಣತೆಯತ್ತ; ಕಾಂಕ್ರೀಟ್‌ ಕಾಮಗಾರಿ ಪ್ರಗತಿ

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Court-1

Puttur: ಮಹಿಳೆಯ ಮಾನಭಂಗ ಯತ್ನ ಪ್ರಕರಣ; ಆರೋಪಿ ಖುಲಾಸೆ

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.