ಠಾಣಾ ಮಟ್ಟದಲ್ಲಿ ಮಿನಿ ಕಮಾಂಡ್‌ ಸೆಂಟರ್‌


Team Udayavani, Jan 28, 2024, 1:31 PM IST

ಠಾಣಾ ಮಟ್ಟದಲ್ಲಿ ಮಿನಿ ಕಮಾಂಡ್‌ ಸೆಂಟರ್‌

ಬೆಂಗಳೂರು: ಇದೇ ಮೊದಲ ಬಾರಿಗೆ ಸ್ಥಳೀಯ ಸಾರ್ವಜನಿಕರ ಸಹಯೋಗದೊಂದಿಗೆ ಠಾಣಾ ಮಟ್ಟದಲ್ಲಿ “ಮಿನಿ ಕಮಾಂಡ್‌ ಸೆಂಟರ್‌’ ಸ್ಥಾಪಿಸಲಾಗಿದೆ.

ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಶನಿ ವಾರ ತಲಘಟ್ಟಪುರ ಠಾಣೆ ಆವರಣದಲ್ಲಿ ಚೇಂಜ್‌ಮೇಕರ್ಸ್‌ ಆಫ್‌ ಕನಕಪುರ ಅಸೋಸಿಯೇಷನ್‌ (ಸಿಎಂಕೆಆರ್‌ಎ) ಹಾಗೂ ಪೊಲೀಸ್‌ ಇಲಾಖೆಯ ಸಹ ಯೋಗದೊಂದಿಗೆ ಸ್ಥಾಪಿಸಿರುವ ಗರುಡ ಸಿಸಿ ಕ್ಯಾಮೆರಾ ಕಮಾಂಡ್‌ ಸೆಂಟರ್‌ಅನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಪೊಲೀಸ್‌ ಆಯಕ್ತ ಬಿ.ದಯಾನಂದ, ತಲಘಟ್ಟಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಆಯಾಕಟ್ಟಿನ ಸ್ಥಳಗಳಲ್ಲಿ ಮೊದಲ ಹಂತವಾಗಿ ಉತ್ತಮ ದರ್ಜೆಯ 101 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜತೆಗೆ ಠಾಣೆಯಲ್ಲಿ ಮಿನಿ ಕಮಾಂಡ್‌ ಸೆಂಟರ್‌ಅನ್ನು ತೆರೆಯಲಾಗಿದ್ದು, ಅದರ ನಿರ್ವಹಣೆಯನ್ನು ಮಾಡುವ ಜವಾಬ್ದಾರಿಯನ್ನು ಅಸೋಸಿಯೇಷನ್‌ ವಹಿಸಿಕೊಂಡಿದೆ. ಈ ಮೂಲಕ ನಾಗರಿಕರು ಪೊಲೀಸರೊಂದಿಗೆ ಉತ್ತಮ, ಸಂಪರ್ಕ, ಸಂಯೋಜನೆ ಹೊಂದರೆ ಪೊಲೀಸ್‌ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರಬಹುದು ಎಂಬುದಕ್ಕೆ ಇದೊಂದು ಸೂಕ್ತ ನಿರ್ದೇಶನ ಎಂದು ಹೇಳಿದರು.

ಯೋಜನೆಯ ಕುರಿತು ಸಿಎಂಕೆಆರ್‌ಎ ಕಾರ್ಯದರ್ಶಿ ವಿ.ಕೆ.ವತ್ಸ ಮಾತನಾಡಿ, ಈ ಪ್ರದೇಶದ ಭದ್ರತೆ ಮತ್ತು ಸುರಕ್ಷತೆಯನ್ನು ಹೆಚ್ಚಿಸುವುದು ಈ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ಸ್ಥಳದಲ್ಲಿ ಸಮಗ್ರ ಸಿಸಿ ಕ್ಯಾಮೆರಾ ವ್ಯವಸ್ಥೆಯೊಂದಿಗೆ ಅಪರಾಧ ಚಟುವಟಿಕೆಗಳ ಮೇಲ್ವಿಚಾರಣೆ ಮಾಡಲು ಮತ್ತು ತಡೆಯಲು ಸಾಧ್ಯ ವಾಗುತ್ತದೆ ಎಂದು ವಿವರಿಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಡಿಸಿಪಿ ರಾಹುಲ…ಕುಮಾರ್‌ ಶಾಪುರ ವಾಡ್‌, ಸುಬ್ರಹ್ಮಣ್ಯಪುರ ಉಪವಿಭಾಗದ ಎಸಿಪಿ ಎಸ್‌.ಬಿ.ಗಿರೀಶ್‌, ತಲಘಟ್ಟಪುರ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಎನ್‌.ಜಗದೀಶ್‌ ಸೇರಿ ಇತರೆ ಅಧಿಕಾರಿಗಳು ಇದ್ದರು.

ಏನಿದು ಮಿನಿ ಕಮಾಂಡ್‌ ಸೆಂಟರ್‌? :

ಪೊಲೀಸರು ಎಲ್ಲಾ ಸಂದರ್ಭದಲ್ಲಿ ಘಟನಾ ಸ್ಥಳದಲ್ಲಿ ಇರಲು ಸಾಧ್ಯವಿಲ್ಲ. ಆದರೆ, ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಬಹುದಾಗಿದೆ. ಅದಕ್ಕಾಗಿ ಪೊಲೀಸರು ಠಾಣೆಯಲ್ಲಿರುವ ಮಿನಿ ಕಮಾಂಡ್‌ ಸೆಂಟರ್‌ ಸ್ಥಾಪಿಸಲಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಸಿಸಿ ಕ್ಯಾಮೆರಾಗಳಲ್ಲಿನ ದೃಶ್ಯ ನೋಡಿಕೊಂಡು ಗಸ್ತಿನಲ್ಲಿ ಇರುವ ಪೊಲೀಸರಿಗೆ ನಿರ್ದೇಶನಗಳನ್ನು ನೀಡಲಾಗುತ್ತದೆ. ಈಗ ಅಳವಡಿಸಿರುವ ಕ್ಯಾಮೆರಾಗಳು ವೈಯರ್‌ಲೆಸ್‌ ಆಗಿವೆ. ಅದರಲ್ಲಿ ಧ್ವನಿ ವರ್ಧಕಗಳನ್ನು ಅಳವಡಿಸಲಾಗಿದೆ. ಪೊಲೀಸ್‌ ಇಲಾಖೆ ನಗರದಲ್ಲಿ ಈಗಾಗಲೇ 750 ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದೆ. ಅದನ್ನು ಇತರೆ ಪೊಲೀಸ್‌ ಠಾಣಾ ವ್ಯಾಪ್ತಿಗೂ ವಿಸ್ತರಿಸಲು ಕ್ರಮಕೈಗೊಂಡಿದೆ.

200 ಸಿಸಿ ಕ್ಯಾಮೆರಾ ಅಳವಡಿಸುವ ಗುರಿ :

ಕನಕಪುರ ರಸ್ತೆಯ ವಿವಿಧ ಅಸೋಸಿಯೇಷನ್‌, ವಾಣಿಜ್ಯ ಸಂಸ್ಥೆಗಳು ಮತ್ತು ಕಾರ್ಪೊರೇಟ್‌ಗಳ ನಿಧಿಯಿಂದ ಮೊದಲ ಹಂತವಾಗಿ 101 ಹೈಡೆಫಿನಿಷನ್‌ನ 5 ಮೆಗಾಫಿಕ್ಸಲ್‌ ಮತ್ತು ವೈಯರ್‌ಲೆಸ್‌ ಇರುವ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನು 200 ಕ್ಯಾಮೆರಾಗಳನ್ನು ಅಳವಡಿಸುವ ಗುರಿ ಇದೆ. 55 ಇಂಚಿನ 9 ಎಲ್‌ಇಡಿ ವಾಲ್‌ ಪೊ›ಜೆಕ್ಷನ್‌ಗಳನ್ನು ಒಳಗೊಂಡಿರುವ ಅತ್ಯಾಧುನಿಕ ಕಮಾಂಡ್‌ ಸೆಂಟರ್‌ಅನ್ನು ಠಾಣೆ ಅಳವಡಿಸಲಾಗಿದೆ. ಈ ಕ್ಯಾಮರಾಗಳು ಈಗಾಗಲೇ 4 ಪ್ರಕರಣಗಳ ಪತ್ತೆಗೆ ಸಹಕಾರಿಯಾಗಿವೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

 

ಟಾಪ್ ನ್ಯೂಸ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.