Karkala; ವಿದ್ಯುತ್ ಅವಘಡ: ಪವರ್‌ಮನ್ ಸಾವು
Team Udayavani, Jan 28, 2024, 11:31 PM IST
ಕಾರ್ಕಳ: ತಾಲೂಕಿನ ಈದು ಎಂಬಲ್ಲಿ ವಿದ್ಯುತ್ ಅವಘಡದಲ್ಲಿ ಕಾರ್ಕಳ ಮೆಸ್ಕಾಂ ಸಿಬಂದಿ (ಪವರ್‌ಮನ್) ಬಾಗಲಕೋಟೆ ಮೂಲದ ಶ್ರೀನಿವಾಸ್ (28) ಮೃತಪಟ್ಟ ಘಟನೆ ಜ. 28ರಂದು ಸಂಜೆ ನಡೆದಿದೆ.
ಹೊಸ್ಮಾರು ಮೆಸ್ಕಾಂ ವಿಭಾಗಕ್ಕೆ ಸೇರಿದ ನೂರಾಳ್‌ಬೆಟ್ಟು ವ್ಯಾಪ್ತಿಯಲ್ಲಿ ವಿದ್ಯುತ್ ಇಲ್ಲವೆಂದು ಸ್ಥಳಿಯರು ಹೊಸ್ಮಾರು ಮೆಸ್ಕಾಂ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದರು.
ದುರಸ್ತಿಗೆಂದು ಸ್ಥಳಕ್ಕೆ ತೆರಳಿದ ಶ್ರೀನಿವಾಸ್ ಟ್ರಾನ್ಸ್‌ಫಾರ್ಮರ್‌ನಲ್ಲಿ ದೋಷ ಹುಡುಕುತಿದ್ದಾಗ ವಿದ್ಯುತ್ ಶಾಕ್ ಹೊಡೆದು ದುರ್ಘಟನೆ ಸಂಭವಿಸಿದೆ. ವಿದ್ಯುತ್ ಶಾಕ್‌ನಿಂದ ಅವರು ನೆಲಕ್ಕುರುಳಿದ್ದು, ಈ ವೇಳೆ ಅಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗುತ್ತಿದೆ. ಬಳಿಕ ಸ್ಥಳಿಯರ ಗಮನಕ್ಕೆ ಬಂದಿದೆ.
ಎರಡು ವರ್ಷದ ಹಿಂದೆ ಅವರು ಮೆಸ್ಕಾಂಗೆ ಸೇರ್ಪಡೆಗೊಂಡಿದ್ದರು. ಮೃತದೇಹ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆ ಶವಾಗಾರದಲ್ಲಿದೆ. ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಘಟನೆ ತಿಳಿದು ಆಸ್ಪತ್ರೆಗೆ ಶಾಸಕ ಮಾಜಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭೇಟಿ ನೀಡಿ ಮಾಹಿತಿ ಪಡೆದರು. ಮರಣೋತ್ತರ ಪರೀಕ್ಷೆ ಇನ್ನಿತರ ಅಗತ್ಯ ಕ್ರಮಕ್ಕೆ ಸೂಚಿಸಿದರು. ಕಾರ್ಕಳ ಉಪವಿಭಾಗ ಇಇ ನರಸಿಂಹ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.