Shakti Yojana: ಶಕ್ತಿ ಯೋಜನೆ ಬಳಿಕ ಜಿಲ್ಲೆಗೆ ಬೇಕಂತೆ 140 ಹೆಚ್ಚುವರಿ ಬಸ್‌!


Team Udayavani, Jan 29, 2024, 3:02 PM IST

10

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶಕ್ತಿ ಯೋಜನೆ ಜಾರಿ‌ಯಾದ ಬಳಿಕ ಪ್ರಯಾಣಿಕರ ದಟ್ಟಣೆ ವಿಪರೀತವಾಗಿ ಏರಿಕೆಗೊಂಡಿರುವ ಪರಿಣಾಮ ಜಿಲ್ಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ವಿವಿಧ ಮಾರ್ಗಗಳಲ್ಲಿ ಹೊಸ ಬಸ್‌ ಸಂಚಾರ ಆರಂಭಿಸಲು ಕೆಎಸ್‌ಆರ್‌ಟಿಸಿಗೆ ಬರೋಬ್ಬರಿ 140 ಹೆಚ್ಚುವರಿ ಬಸ್‌ಗಳಿಗೆ ಬೇಡಿಕೆ ಬಂದಿದೆಯಂತೆ.

ಹೌದು, ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸಂಚರಿಸುವ ಅದರಲ್ಲೂ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಇದರ ಪರಿಣಾಮ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಹೊಸ ಮಾರ್ಗಗಳಲ್ಲಿ ಬಸ್‌ ಸಂಚರಿಸುವಂತೆ ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಅಧಿಕಾರಿಗಳಿಗೆ ಒತ್ತಡ ಬರುತ್ತಲೇ ಇದೆ.

ಸದ್ಯ 566 ಬಸ್‌, 89 ಲಕ್ಷ ದಿನ ಗಳಿಕೆ: ಜಿಲ್ಲೆಯಲ್ಲಿ ಸದ್ಯ ಕೆಎಸ್‌ಆರ್‌ಟಿಸಿ ವಿಭಾಗದಲ್ಲಿ ಪ್ರಸ್ತುತ 523 ಮಾರ್ಗಗಳಲ್ಲಿ 566 ಬಸ್‌ಗಳು ಪ್ರತಿನಿತ್ಯ ಒಟ್ಟು 1.96 ಲಕ್ಷ ಕಿ.ಮೀ ಕ್ರಮಿಸುತ್ತಿವೆ. ನಿತ್ಯ ಸರಾಸರಿ 89.70 ಲಕ್ಷ ರೂ. ಆದಾಯವನ್ನು ಗಳಿಸುತ್ತಿವೆ. ನಿತ್ಯ ಸರಾಸರಿ 2.03 ಲಕ್ಷ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸಂಚರಿಸುತ್ತಿದೆ. ಅದರಲ್ಲೂ 20 ಸಾವಿರಕ್ಕೂ ಅಧಿಕ ಶಾಲಾ, ಕಾಲೇಜು ವಿದ್ಯಾರ್ಥಿಗಳಿದ್ದಾರೆ. ಆದರೆ ಶಕ್ತಿ ಯೋಜನೆ ಜಾರಿ ಬಳಿಕ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ. ಹಾಲಿ ಕಾರ್ಯಾಚರಣೆಯಲ್ಲಿರುವ ಬಸ್‌ ಗಳ ಓಡಾಟ ಪ್ರಯಾಣಿಕರಿಗೆ ಸಾಲುತ್ತಿಲ್ಲ. ಹೀಗಾಗಿ ಹೆಚ್ಚುವರಿಯಾಗಿ ಕೆಎಸ್‌ಆರ್‌ಟಿಸಿ ಘಟಕಕ್ಕೆ 140 ಬಸ್‌ ಗಳಿಗೆ ಬೇಡಿಕೆ ಇದೆ. ಸದ್ಯಕ್ಕೆ ಕೆಎಸ್‌ಆರ್‌ಟಿಸಿ ವಿಭಾಗೀಯ ಘಟಕ ಹಳೆಯ ಬಸ್‌ಗಳನ್ನು ಪುನಃ ದುರಸ್ತಿಗೊಳಿಸಿ ಬಳಸುತ್ತಿವೆ. ಆದರೆ ಅವು ಪ್ರಯಾಣಿಕರ ಸುರಕ್ಷತೆಗೆ ಯೋಗ್ಯವಲ್ಲ ಎಂಬ ಕಾರಣಕ್ಕೆ ಜಿಲ್ಲೆಗೆ ಒಟ್ಟು 140 ಕ್ಕೂ ಹೆಚ್ಚು ಬಸ್‌ಗಳಿಗೆ ಬೇಡಿಕೆ ಇದ್ದು, ರಾಜ್ಯದ ಕೆಎಸ್‌ಆರ್‌ಟಿಸಿ ನಿಗಮ ಜಿಲ್ಲೆಗೆ ಹಂತ ಹಂತವಾಗಿ ಹೊಸ ಬಸ್‌ಗಳನ್ನು ಕೊಡುವ ನಿರೀಕ್ಷೆಯನ್ನು ಸ್ಥಳೀಯ ನಿಗಮದ ಅಧಿಕಾರಿಗಳು ಹೊಂದಿದ್ದಾರೆ.

ವರ್ಷಾಂತ್ಯಕ್ಕೆ 20.01 ಲಕ್ಷ ಪ್ರಯಾಣಿಕರು ಪ್ರಯಾಣ: ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಕರ್ನಾಟಕದ ಸಾರಿಗೆ ಸಂಸ್ಥೆಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆಯಡಿ ಕಳೆದ 2023 ಡಿಸೆಂಬರ್‌ 31 ರವರೆಗೆ ಜಿಲ್ಲಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಬರೋಬ್ಬರಿ 20.01 ಲಕ್ಷ ಮಹಿಳೆಯರು ವಿವಿಧ ಕಡೆಗಳಲ್ಲಿ ಟಿಕೆಟ್‌ ರಹಿತವಾಗಿ ಉಚಿತ ಪ್ರಯಾಣ ಮಾಡಿದ್ದಾರೆ. ಅಂದಾಜು ಒಟ್ಟು 70.84 ಕೋಟಿ ಹಣ ಸಾರಿಗೆ ಸಂಸ್ಥೆಗೆ ಸರ್ಕಾರ ಇಲ್ಲಿವರೆಗೂ ಜಮೆ ಮಾಡಿದೆ ಎಂದು ತಿಳಿದು ಬಂದಿದೆ.

ಜಿಲ್ಲೆಯಲ್ಲಿ ಶಕ್ತಿ ಯೋಜನೆ ಜಾರಿ ಬಳಿಕ ಪ್ರಯಾಣಿಕರ ದಟ್ಟಣೆ ಕೆಎಸ್‌ಆರ್‌ಟಿಸಿ ಬಸ್‌ ಗಳಲ್ಲಿ ಹೆಚ್ಚಾಗಿದೆ. ಜಿಲ್ಲೆಗೆ ಹೆಚ್ಚುವರಿ 140ಕ್ಕೂ ಅಧಿಕ ಬಸ್‌ಗಳ ಅಗತ್ಯವಾಗಿವೆ. ಜಿಲ್ಲೆಯಲ್ಲಿ ಪ್ರತಿ ನಿತ್ಯ 2 ಲಕ್ಷಕ್ಕೂ ಅಧಿಕ ಪ್ರಯಾಣಿಕರು ನಿತ್ಯ ಪ್ರಯಾಣಿಸುತ್ತಾರೆ. ಸುಮಾರು 1 ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣಿಸುತ್ತಾರೆ. ಶಕ್ತಿ ಯೋಜನೆ ಜಾರಿ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಸಂಚರಿಸುವರ ಸಂಖ್ಯೆ ಹೆಚ್ಚಾಗಿದೆ. ಕೆಲವು ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರಕ್ಕೆ ಒತ್ತಾಯ ಕೇಳಿ ಬರುತ್ತಿದೆ. -ಹಿಮವರ್ಧನ ನಾಯ್ದು ಅಲ್ಲೂರಿ, ಕೆಎಸ್‌ಆರ್‌ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ

ಕಾಗತಿ ನಾಗರಾಜಪ್ಪ

 

ಟಾಪ್ ನ್ಯೂಸ್

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Police

Government Order: ಪೊಲೀಸರಿಗೆ ಅರ್ಧ ಕೋಟಿ ರೂ. ಜೀವವಿಮೆ! ವಿಮಾ ಮೊತ್ತ ಇಲಾಖೆಯಿಂದಲೇ ಪಾವತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.