![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jan 29, 2024, 6:11 PM IST
ಸರ್ಫರಾಜ್, ಸೌರಭ್, ಸುಂದರ್ ತಂಡಕ್ಕೆ
ಹೊಸದಿಲ್ಲಿ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಫೆಬ್ರವರಿ 02 ರಿಂದ ವೈಜಾಗ್‌ನಲ್ಲಿ ನಡೆಯಲಿರುವ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಟೆಸ್ಟ್ ಸರಣಿಯ ಎರಡನೇ ಪಂದ್ಯದಿಂದ ಭಾರತ ತಂಡದ ಪ್ರಮುಖ ಆಟಗಾರರಾದ ರವೀಂದ್ರ ಜಡೇಜಾ ಮತ್ತು ಕೆ.ಎಲ್. ರಾಹುಲ್ ಹೊರಬಿದ್ದಿದ್ದಾರೆ.
ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ 4 ನೇ ದಿನದ ಆಟದಲ್ಲಿ ಜಡೇಜಾ ಮಂಡಿರಜ್ಜು ಗಾಯಕ್ಕೊಳಗಾಗಿದ್ದರು, ರಾಹುಲ್ ಬಲ ತೊಡೆಯ ನೋವಿಗೊಳಗಾಗಿದ್ದರು. ಬಿಸಿಸಿಐ ವೈದ್ಯಕೀಯ ತಂಡವು ಸದ್ಯ ಇಬ್ಬರ ಪ್ರಗತಿಯನ್ನು ಗಮನಿಸುತ್ತಿದೆ. ಆಯ್ಕೆ ಸಮಿತಿಯು ಸರ್ಫರಾಜ್ ಖಾನ್, ಸೌರಭ್ ಕುಮಾರ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಫೆಬ್ರವರಿ 1 ರಂದು ಅಹಮದಾಬಾದ್‌ನಲ್ಲಿ ಪ್ರಾರಂಭವಾಗುವ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಮೂರನೇ ಮತ್ತು ಅಂತಿಮ ಬಹು-ದಿನದ ಪಂದ್ಯಕ್ಕಾಗಿ ಭಾರತ ಎ ತಂಡದಲ್ಲಿ ವಾಷಿಂಗ್ಟನ್ ಸುಂದರ್ ಬದಲಿಗೆ ಸರನ್ಶ್ ಜೈನ್ ಅವರನ್ನು ಹೆಸರಿಸಲಾಗಿದೆ.
ರಣಜಿ ಟ್ರೋಫಿ ಆಡುತ್ತಿರುವ ಅವೇಶ್ ಖಾನ್ ಮಧ್ಯಪ್ರದೇಶ ತಂಡದಲ್ಲಿ ಮುಂದುವರೆಸಲಿದ್ದು ಅಗತ್ಯವಿದ್ದರೆ ಮಾತ್ರ ಟೆಸ್ಟ್ ತಂಡವನ್ನು ಸೇರಿಕೊಳ್ಳುಲಿದ್ದಾರೆ.
ತಂಡ
ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆ.ಎಸ್. ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಅವೇಶ್ ಖಾನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
You seem to have an Ad Blocker on.
To continue reading, please turn it off or whitelist Udayavani.