Udupi; ಜೀವನದಲ್ಲಿ ಸಕಾರಾತ್ಮಕ ಚಿಂತನೆ ಅಗತ್ಯ: ಕೇಮಾರು ಶ್ರೀ
ಕಿದಿಯೂರು ಹೊಟೇಲ್ ಅಷ್ಟಪವಿತ್ರ ನಾಗಮಂಡಲೋತ್ಸವ ಧಾರ್ಮಿಕ ಸಭೆ
Team Udayavani, Jan 30, 2024, 12:16 AM IST
ಉಡುಪಿ: ಸಕಾರಾತ್ಮಕ ಚಿಂತನೆಯ ಜತೆಗೆ ಜೀವನದ “ರೇಸ್’ನಲ್ಲಿ ದೇವರು ಮತ್ತು ಗುರುವಿನ ಹಿಂದೆ ಓಡಿದಾಗ ಮಾತ್ರ “ಗ್ರೇಸ್’ ಸಿಗುತ್ತಿದೆ ಎಂದು ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದರು.
ಕಿದಿಯೂರು ಹೊಟೇಲ್ಸ್‌ನ ಕಾರಣಿಕ ಶ್ರೀ ನಾಗ ಸಾನ್ನಿಧ್ಯದಲ್ಲಿ ಜ.31ರಂದು ನಡೆಯಲಿರುವ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವದ ಅಂಗವಾಗಿ ಸೋಮವಾರ ಶ್ರೀ ವಿಶ್ವೇಶತೀರ್ಥ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭೆಯನ್ನು ಪಂಚ ದೀವಟಿಗೆ ಬೆಳಗಿಸಿ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಕಿದಿಯೂರು ಹೊಟೇಲ್ ನಾಗಮಂಡಲೋತ್ಸವು ನಮ್ಮೆಲ್ಲರನ್ನು ಒಂದು ಮಾಡಿದೆ. ನಾಗಾರಾಧನೆ, ದೈವ, ದೇವರ ಆರಾಧನೆ ನಡೆಯುತ್ತಿರಬೇಕು. ಜೀವನದ ಪ್ರತೀ ಕ್ಷಣವೂ ಸಕಾರಾತ್ಮಕ ಚಿಂತನೆಯಿಂದ ನಮ್ಮನ್ನೇ ನಾವು ಅಮೂಲ್ಯ ಆಸ್ತಿ ಎಂಬ ನೆಲೆಯಲ್ಲಿ ಬದುಕಬೇಕು. ದೇವರ ಉಪಾಸನೆ, ಧಾರ್ಮಿಕ ಚಿಂತನೆ ಹಾಗೂ ಸಕಾರಾತ್ಮಕತೆ ಮಕ್ಕಳಲ್ಲಿ ಬೆಳೆಸಬೇಕು ಎಂದರು.
ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾತನಾಡಿ, ಭುವನೇಂದ್ರ ಕಿದಿಯೂರು ಅವರಿಗೆ ಸಂಪತ್ತಿನ ಅಧಿದೇವತೆಯಾಗಿರುವ ನಾಗದೇವರ ಅನುಗ್ರಹವಾಗಿದೆ. ಸಾಮಾಜಿಕ ಕಳಕಳಿ, ಸೇವೆಯ ಮೂಲಕ ಸಾರ್ಥಕ್ಯ ಕಂಡುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ವಾಸ್ತುತಜ್ಞ ವಿ| ಸುಬ್ರಹ್ಮಣ್ಯ ಭಟ್ ಗುಂಡಿಬೈಲು ಉಪನ್ಯಾಸ ನೀಡಿ, ದಾನಗಳಲ್ಲಿ ಅನ್ನದಾನವೇ ಶ್ರೇಷ್ಠ ಮತ್ತು ಅನ್ನದಾನದಿಂದ ಮಾತ್ರ ಎಲ್ಲರನ್ನು ತೃಪ್ತಿಪಡಿಸಲು ಸಾಧ್ಯ ಎಂದರು.
ನಾಗಮಂಡಲೋತ್ಸವ ಆಯೋಜನ ಸಮಿತಿ ಗೌರವಾಧ್ಯಕ್ಷ ಡಾ| ಜಿ. ಶಂಕರ್ ಅಧ್ಯಕ್ಷತೆ ವಹಿಸಿದ್ದರು. ಕಿದಿಯೂರು ಹೊಟೇಲ್ಸ್‌ನ ಎಂಡಿ ಭುವನೇಂದ್ರ ಕಿದಿಯೂರು, ಆಯೋಜನ ಸಮಿತಿ ಪ್ರಧಾನ ಕಾರ್ಯದರ್ಶಿ ಯುವರಾಜ್ ಸಾಲ್ಯಾನ್ ಮಸ್ಕತ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ನಾಗರಾಜ ಶೆಟ್ಟಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ನಗರಸಭೆ ವಿಪಕ್ಷ ನಾಯಕ ರಮೇಶ್ ಕಾಂಚನ್, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯ ಡಾ| ರವಿರಾಜ ಆಚಾರ್ಯ, ಕೊಡವೂರು ಶ್ರೀ ಸಾಯಿಬಾಬಾ ಮಂದಿರದ ಆಡಳಿತ ಟ್ರಸ್ಟಿ ದಿವಾಕರ ಶೆಟ್ಟಿ, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಕಾರ್ತಿಕ್ ಗ್ರೂಪ್‌ನ ಆಡಳಿತ ನಿರ್ದೇಶಕ ಹರಿಯಪ್ಪ ಕೋಟ್ಯಾನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ದಿನೇಶ್ ಪುತ್ರನ್, ಉಚ್ಚಿಲ ದೇವಸ್ಥಾನದ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ ಉಪಸ್ಥಿತರಿದ್ದರು.
ನಾಗಮಂಡಲೋತ್ಸವ ಸಮಿತಿ ಉಪಾಧ್ಯಕ್ಷ ಗಣೇಶ್ ರಾವ್ ಸ್ವಾಗತಿಸಿ, ಸತೀಶ್ ಕೊಡವೂರು ವಂದಿಸಿ, ಸತೀಶ್‌ಚಂದ್ರ ನಿರೂಪಿಸಿದರು.
ಸಾಧಕರಿಗೆ ಸಮ್ಮಾನ
ಬಾಲ ಪ್ರತಿಭೆ ಸಮೃದ್ಧಿ ಕುಂದಾಪುರ, ಉರಗ ತಜ್ಞ ಗುರುರಾಜ ಸನಿಲ್, ಸಮಾಜ ಸೇವಕರಾದ ವಿಶುಶೆಟ್ಟಿ ಅಂಬಲಪಾಡಿ, ನಿತ್ಯಾನಂದ ಒಳಕಾಡು, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಹೇಶ್‌ಚಂದ್ರ, ಪ್ರಮುಖರಾದ ಮೀನಾ ಲಕ್ಷಣಿ ಅಡ್ಯಂತಾಯ ಅವರನ್ನು ಸಮ್ಮಾನಿಸಲಾಯಿತು.
ಗಮನ ಸೆಳೆದ ಗಂಗಾರತಿ
ಕಿದಿಯೂರು ಹೊಟೇಲ್ ಎದುರುಗಡೆ ವಿಶೇಷವಾಗಿ ರಚಿಸಲಾದ ವೇದಿಕೆಗಳಲ್ಲಿ ವಾರಾಣಸಿಯ ಪರಿಣತ ಅರ್ಚಕರಿಂದ ಕಾಶೀ ವಿಶ್ವನಾಥನಿಗೆ ಗಂಗಾ ನದಿ ತಟದಲ್ಲಿ ಆರತಿ ಬೆಳಗುವ ಮಾದರಿಯಲ್ಲೇ ವೈಶಿಷ್ಟ್ಯ ಪೂರ್ಣ ಸಾಮೂಹಿಕ ಗಂಗಾರತಿ ಗಮನ ಸೆಳೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.