Kota Srinivas Poojary; ಎಸ್ಸಿ, ಎಸ್ಟಿ , ದಲಿತರನ್ನು ಕತ್ತಲಲ್ಲಿಡುವ ಪ್ರಯತ್ನ

ಸರಕಾರದ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ಆರೋಪ

Team Udayavani, Jan 31, 2024, 1:01 AM IST

Kota Srinivas Poojary; ಎಸ್ಸಿ, ಎಸ್ಟಿ , ದಲಿತರನ್ನು ಕತ್ತಲಲ್ಲಿಡುವ ಪ್ರಯತ್ನ

ಉಡುಪಿ: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್‌ ಅವರ ಅವಧಿಯಲ್ಲಿ ಸಿದ್ಧಪಡಿಸಿದ್ದ ಜಾತಿ ಗಣತಿ ವರದಿ (ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ)ಯನ್ನು ಅಂಗೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೀನಮೇಷ ಎಣಿಸುವ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದವರು ಹಾಗೂ ದಲಿತರನ್ನು ಕತ್ತಲಲ್ಲಿ ಇಡುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಆಡಳಿತ ಶೈಲಿ, ನಿರಂತರ ವೈಫ‌ಲ್ಯ ಹಾಗೂ ಗೊಂದಲಮಯ ರಾಜಕಾರಣವು ಜನರಲ್ಲಿ ಆತಂಕ ಸೃಷ್ಟಿಸಿದೆ.ಸಿದ್ದರಾಮಯ್ಯ ಸಿಎಂ ಆಗಿದ್ದಾಗ 2015ರಲ್ಲಿ ಆಯೋಗದ ಮೂಲಕ ಸುಮಾರು 165 ಕೋ.ರೂ. ವೆಚ್ಚ ಮಾಡಿ ಜಾತಿ ಗಣತಿ ವರದಿ ಸಿದ್ಧಪಡಿಸಿದ್ದರು. ಅವರ ಮೊದಲ ಅವಧಿ ಮುಗಿದು, ಸಮ್ಮಿಶ್ರ ಸರಕಾರ ಬಂದು, ಇದೀಗ ಅವರದ್ದೇ ಸರಕಾರ ಇದ್ದರೂ ವರದಿ ಅಂಗೀಕಾರ ಮಾಡಿಲ್ಲ. ಬದಲಾಗಿ ವರದಿ ಅಂಗೀಕಾರಕ್ಕಾಗಿಯೇ ಸಮಾವೇಶ ನಡೆಸಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದರು.

ಅಲ್ಪಸಂಖ್ಯಾಕರಿಗೆ ಹೆಚ್ಚಿನ ಅನುದಾನ
ಅಹಿಂದ ನಾಯಕರಾಗಿದ್ದ ಸಿದ್ದರಾಮಯ್ಯ ಇದೀಗ ಅಲ್ಪಸಂಖ್ಯಾಕರ ನಾಯಕರಾಗಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹಾಸ್ಟೆಲ್‌ ಸೀಟ್‌ ಹೆಚ್ಚಿಸಲು ಮನವಿ ಮಾಡಿದ್ದರೂ ಹೆಚ್ಚಳ ಮಾಡಿಲ್ಲ, ವಿದ್ಯಾರ್ಥಿವೇತನ ಕಡಿತ ಮಾಡಿದ್ದಾರೆ. ಆದರೆ ಅಲ್ಪಸಂಖ್ಯಾಕರಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ ಎಂದು ದೂರಿದರು.

ಗ್ಯಾರಂಟಿ ವಿಫ‌ಲ: ರಾಜ್ಯ ಸರಕಾರದ ಗ್ಯಾರಂಟಿ ಸಂಪೂರ್ಣ ವಿಫ‌ಲವಾಗಿದೆ. ಯುವನಿಧಿ ಯಾರಿಗೆ ಅಗತ್ಯ ವಿದೆಯೋ ಅವರಿಗೆ ನೀಡುತ್ತಿಲ್ಲ. 40 ಲಕ್ಷ ಪದವೀಧರರಿದ್ದಾರೆ. ಆದರೆ ಪ್ರಸಕ್ತ ಸಾಲಿನಲ್ಲಿ ಪದವಿ ಪೂರೈಸಿದವರಿಗೆ ಮಾತ್ರ ಎನ್ನುತ್ತಿದ್ದಾರೆ. ಚುನಾವಣೆ ಮೊದಲು ಹೇಳಿದ್ದು ಒಂದು ಈಗ ಮಾಡುತ್ತಿರುವುದು ಇನ್ನೊಂದು ಎಂದು ಆರೋಪಿಸಿದರು.

ಗಂಗಾಕಲ್ಯಾಣ ಸ್ಥಗಿತ: ಬಿಜೆಪಿ ಸರಕಾರ ಇದ್ದಾಗ 16 ಸಾವಿರ ಕೊಳವೆ ಬಾವಿ ಕೊರೆಯಲು ಗಂಗಾಕಲ್ಯಾಣ ಯೋಜನೆಯಡಿ ವಿವಿಧ ನಿಗಮಗಳ ಮೂಲಕ ಅವಕಾಶ ಮಾಡಿಕೊಟ್ಟಿದ್ದೆವು. ಈ ಸರಕಾರ ಬಂದ ಅನಂತರದಲ್ಲಿ ಎಲ್ಲ ಕಾಮಗಾರಿಗಳು ನಿಂತಿವೆ. ಕೊಳವೆ ಬಾವಿ ತೆರೆಯುವ ಕಾಮಗಾರಿಗಳಿಗೆ ವೇಗ ಸಿಗಬೇಕು ಎಂದು ಆಗ್ರಹಿಸಿದರು.

ರಾಷ್ಟ್ರಪತಿಯವರಿಗೆ ಏಕವಚನ!
ರಾಷ್ಟ್ರಪತಿಯವರನ್ನು ಏಕವಚನದಲ್ಲಿ ಕರೆದಿರುವ ಸಿದ್ದರಾಮಯ್ಯ ತಮ್ಮ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯವರನ್ನು ಏಕವಚನದಲ್ಲಿ ಕರೆಯುವ ಧೈರ್ಯ ಮಾಡುತ್ತಾರೆಯೇ ಎಂದು ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನಿಸಿದರು.

ಮನೆ ಮನೆ ಕೇಸರಿ ಧ್ವಜ ಅಭಿಯಾನ
ಕುಂದಾಪುರ: ಮಂಡ್ಯದಲ್ಲಿ ಅನುಮತಿ ಪಡೆದು ಹಾಕಿದ ಓಂಕಾರದ ಕೇಸರಿ ಧ್ವಜವನ್ನು ಇಳಿಸುವ ಮೂಲಕ ಪ್ರಜಾಸತ್ತಾತ್ಮಕ ಸರಕಾರವೊಂದು ಮಾಡಬಾರದ ಉದ್ಧಟತನ ತೋರಿಸಿದೆ. ಟಿಪ್ಪು ಜಯಂತಿ ಆಚರಿಸುವ ಸರಕಾರ ಕೇಸರಿ ಧ್ವಜ ಇಳಿಸಿ ಅಟ್ಟಹಾಸ ಮೆರೆದಿದೆ. ಇದರ ಪರಿಣಾಮ ಮಂಡ್ಯದ ಮನೆ ಮನೆಗಳಲ್ಲಿ ಕೇಸರಿ ಧ್ವಜ ಹಾರಾಡಲಿದೆ. ಇದು ರಾಜ್ಯಾದ್ಯಂತ ಅಭಿಯಾನ ರೂಪದಲ್ಲಿ ವಿಸ್ತರಿಸುವ ಚಿಂತನೆಯಿದೆ ಎಂದು ಶ್ರೀನಿವಾಸ ಪೂಜಾರಿ ಕುಂದಾಪುರದಲ್ಲಿ ಹೇಳಿದರು.

40 ವರ್ಷಗಳಿಂದ ಖಾಸಗಿ ಕಟ್ಟೆಯಲ್ಲಿ ಧ್ವಜ ಹಾರಿಸಲಾಗುತ್ತಿತ್ತು. ನವೀಕರಣಕ್ಕೆ ಅನುಮತಿ ಪಡೆದು ಹನುಮಾನ್‌ ಧ್ವಜ ಹಾರಾಟಕ್ಕೆ ಪಂಚಾಯತ್‌ ಸರ್ವಾನುಮತದ ನಿರ್ಣಯ ಮಾಡಿ ಅನುಮೋದಿಸಿತ್ತು. ಹಾಗಿದ್ದರೂ ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಧ್ವಜ ಇಳಿಸಲಾಗಿದೆ. ಜಿಲ್ಲಾಧಿಕಾರಿ ಬೆಂಬಲಿಸಿದ್ದಾರೆ ಎಂದರು.

 

ಟಾಪ್ ನ್ಯೂಸ್

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್‌ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.