Arrested: 158 ಕೋಟಿ ರೂ. ವಂಚಿಸಿದ್ದ 9 ಮಂದಿ ಸೆರೆ


Team Udayavani, Jan 31, 2024, 11:35 AM IST

Arrested: 158 ಕೋಟಿ ರೂ. ವಂಚಿಸಿದ್ದ 9 ಮಂದಿ ಸೆರೆ

ಬೆಂಗಳೂರು: ವಾಟ್ಸ್‌ಆ್ಯಪ್‌, ಟೆಲಿಗ್ರಾಂ ಮೂಲಕ ವರ್ಕ್‌ ಫ್ರಂ ಹೋಮ್‌ ಕೆಲಸ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ರೂ. ಹೂಡಿಕೆ ಮಾಡಿಕೊಂಡು ವಂಚಿಸುತ್ತಿದ್ದ ಪ್ರಕರಣ ಬೇಧಿಸಿರುವ ನಗರ ಸೈಬರ್‌ ಕ್ರೈಂ ಪೊಲೀಸರು ಮಹಿಳೆ ಸೇರಿ 9 ಮಂದಿಯನ್ನು ಬಂಧಿಸಿದ್ದಾರೆ. ಇದೇ ವೇಳೆ ಆರೋಪಿಗಳ ವಿಚಾರಣೆಯಲ್ಲಿ ಬೆಂಗಳೂರು ದೇಶದ ವಿವಿಧೆಡೆ ದಾಖಲಾಗಿದ್ದ 2,143 ಪ್ರಕರಣಗಳಲ್ಲಿ 158 ಕೋಟಿ ರೂ. ವಂಚಿಸಿದ್ದಾರೆ ಎಂಬುದು ಪತ್ತೆಯಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆರೋಪಿಗಳು ಹಮೀದ್‌ ಸುಹೇಲ್‌, ಇನಾಯತ್‌ ಖಾನ್‌, ನಯಾಜ್‌ ಅಹ್ಮದ್‌, ಆದಿಲ್ ಆಗಾ, ಸೈಯದ್‌ ಅಬ್ಟಾಸ್‌ ಆಲಿಖಾನ್‌, ಮಿಥುತ್ ಅಮಿತ್ ಸುಹಾಲಿ, ನೈನಾ ತಾರಾಚಂದ್‌, ಮಿಹಿರ್‌ ಶಶಿ ಕಾಂತ್‌ ಶಾ ಮತ್ತು ಸತೀಶ್‌ ಕೊಲಂಗಿ ಬಂಧಿ ತರು. ಈ ಪೈಕಿ ಬೆಂಗಳೂರಿನ ಇಬ್ಬರು,

ಹೈದ್ರಾಬಾದ್‌ನ ಮೂವರು, ಮುಂಬೈನ ನಾಲ್ವರು ಸೇರಿದ್ದಾರೆ. ಇತರೆ ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಿದರು.

ಆರೋಪಿಗಳು ನಕಲಿ ದಾಖಲೆಗಳನ್ನು ಸಲ್ಲಿಸಿ ಬ್ಯಾಂಕ್‌ ಖಾತೆಗಳನ್ನು ತೆರೆದು, ಸಾರಸಗಟಾಗಿ ವಾಟ್ಸ್‌ಆ್ಯಪ್‌, ಟೆಲಿಗ್ರಾಂ ಮೂಲಕ ವರ್ಕ್‌ ಫ್ರಂ ಹೋಮ್‌ ಕೆಲಸ ಕೊಡುವುದಾಗಿ ಸಂದೇಶ ಕಳು ಹಿ ಸುತ್ತಿದ್ದರು. ಅದನ್ನು ನಂಬಿ ಪ್ರತಿಕ್ರಿಯೆ ನೀಡುತ್ತಿದ್ದ ಸಾರ್ವ ಜನಿಕರಿಗೆ ವಿಡಿಯೋ ಮತ್ತು ಫೋಟೋ ಗಳನ್ನು ಲೈಕ್‌ ಮಾಡಿ ಶೇರ್‌ ಮಾಡಿದರೇ ಒಂದಕ್ಕೆ 150 ರೂ. ಸಿಗಲಿದೆ. ಮನೆಯಲ್ಲಿಯೇ ಕುಳಿತು ದಿನಕ್ಕೆ 500 ರೂ.ನಿಂದ 10 ಸಾವಿರ ರೂ. ವರೆಗೂ ಸಂಪಾದನೆ ಮಾಡಬಹುದು ಎಂದು ಆಮಿಷ ವೊಡ್ಡುತ್ತಿದ್ದರು.

ಅದಕ್ಕೆ ಒಪ್ಪಿಗೆ ನೀಡುತ್ತಿದ್ದ ಅಮಾಯಕರು, ವಂಚಕರ ಆ್ಯಪ್‌ಡೌನ್‌ ಲೋಡ್‌ ಮಾಡಿಕೊಳ್ಳು   ತ್ತಿದ್ದರು. ನೋಂದಣಿ ಶುಲ್ಕವೆಂದು ಇಂತಿಷ್ಟು ಪಾವತಿ ಮಾಡಿದ ಜನರಿಗೆ ಆರಂಭದಲ್ಲಿ ಹಣವನ್ನು ಅವರ ವ್ಯಾಲೆಟ್‌ಗೆ ವರ್ಗಾವಣೆ ಮಾಡುತ್ತಿದ್ದರು. ಆದರೆ, ಅದನ್ನು ಡ್ರಾ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಡ್ರಾ ಮಾಡಲು ಪ್ರಯತ್ನಿಸುವವರಿಗೆ ಕಂಪನಿಯಲ್ಲಿ ಹೂಡಿಕೆ ಮಾಡಿದರೇ ಹೆಚ್ಚಿನ ಕಮಿಷನ್‌ ಸಿಗಲಿದೆ ಎಂದು ಆಸೆ ಹುಟ್ಟಿಸುತ್ತಿದ್ದರು. ಅದನ್ನು ನಂಬಿ ಜನರು ಲಕ್ಷಾಂತರ ರೂ. ಹೂಡಿಕೆ ಮಾಡುತ್ತಿದ್ದರು.

ಇದೇ ರೀತಿಯಾಗಿ ಆ.18ರಂದು ಬಿಇಎಲ್‌ ಲೇಔಟ್‌ ನಿವಾಸಿ ಮನೆಯಿಂದಲೇ ಕೆಲಸದ ಆಮಿಷಕ್ಕೆ ಒಳಗಾಗಿ 18.75 ಲಕ್ಷ ರೂ. ಹೂಡಿಕೆ ಮಾಡಿ ಸೈಬರ್‌ ವಂಚನೆಗೆ ಒಳಗಾಗಿದ್ದರು. ಈ ಬಗ್ಗೆ ದಾಖಲಾದ ದೂರಿನ ಮೇರೆಗೆ ಸಿಸಿಬಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯ ಪಿಐ ಹಜರೇಶ್‌ ಎ.ಕಿಲೆದಾರ್‌ ನೇತೃತ್ವದ ತಂಡ ಪ್ರಕರಣ ದಾಖಲಿಸಿಕೊಂಡು ತಾಂತ್ರಿಕ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಮಾಹಿತಿ ನೀಡಿದ್ದಾರೆ.

2,143 ಕೇಸ್‌ಗಳು ಪತ್ತೆ: ಆರೋಪಿಗಳ ಬ್ಯಾಂಕ್‌ ಖಾತೆ ಗಳ ಆಧಾರವಾಗಿ ಇಟ್ಟುಕೊಂಡು ತನಿಖೆ ನಡೆಸಿದಾಗ ಕೇಂದ್ರ ಗೃಹ ಸಚಿವಾಲಯದ ಎನ್‌ಸಿಆರ್‌ಬಿ ಪೋರ್ಟಲ್‌ನಲ್ಲಿ ದೇಶದ 28 ರಾಜ್ಯ   ಗಳಲ್ಲಿ ದಾಖಲಾಗಿದ್ದ 2,143 ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪೈಕಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ 265 ಪ್ರಕರಣಗಳು ಅದರಲ್ಲಿಯೂ ಬೆಂಗಳೂರು ನಗರದ 14 ಠಾಣೆಗಳಲ್ಲಿ ದಾಖಲಾಗಿದ್ದ 135 ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಪೊಲೀಸ್‌ ಆಯುಕ್ತರು ಮಾಹಿತಿ ನೀಡಿದರು.

30 ಬ್ಯಾಂಕ್‌ ಖಾತೆ ಜಪ್ತಿ, 62.83 ಲಕ್ಷ ರೂ. ವಶಕ್ಕೆ :

ಆರೋಪಿಗಳು ಬಳಸಿದ ಬ್ಯಾಂಕ್‌ ಖಾತೆಗಳ ವಿವರ ಸಂಗ್ರಹಿಸಿ ತನಿಖೆ ನಡೆಸಿದಾಗ ದೇಶಾ ದ್ಯಂತ ದಾಖಲಾಗಿದ್ದ 2,143 ಪ್ರಕರಣಗಳಲ್ಲಿ 158 ಕೋಟಿ ರೂ. ವಂಚಿಸಿರುವುದು ಪತ್ತೆ ಯಾಗಿದೆ. ಈ ಪೈಕಿ 30 ಬ್ಯಾಂಕ್‌ ಖಾತೆಗಳು ಜಪ್ತಿ ಮಾಡಿದ್ದು, 62.83 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಜತೆಗೆ 11 ಮೊಬೈಲ್‌, 1 ಲ್ಯಾಪ್‌ಟಾಪ್‌, 15 ಸಿಮ್‌ ಕಾರ್ಡ್‌, 3 ಬ್ಯಾಂಕ್‌ ಚೆಕ್‌ ಬುಕ್‌ಗಳನ್ನು ಸಹ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಹೇಳಿದರು.

ಬಂಧಿತರ ಆಸ್ತಿ ಜಪ್ತಿಗೆ ಇತರೆ  ಇತರೆ ರಾಜ್ಯಗಳ ಜತೆ ಚರ್ಚೆ:

ಸಾರ್ವಜನಿಕರಿಂದ ಹಣ ಹೂಡಿಕೆ ಮಾಡಿಸಿಕೊಂಡ ಬಳಿಕ ತಮ್ಮ ನೆಟ್‌ವರ್ಕ್‌ ಬಳಸಿ ನಗದು ಡ್ರಾ ಮಾಡುವುದು ಅಥವಾ ಬೇರೊಂದು ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದ ಆರೋಪಿ ಗಳು, ಅಮಾಯಕರು ಹಣ ಜಮೆ ಮಾಡಿದ ಕೆಲವೇ ತಾಸಿನಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ನಗದು ಡ್ರಾ ಮಾಡುತ್ತಾರೆ. ಅದರಿಂದ ಆರೋಪಿಗಳಿಂದ ಹಣ ಜಪ್ತಿ ಮಾಡುವುದು ದೊಡ್ಡ ಸವಾಲಾಗಿದೆ. ಹೀಗಾಗಿ ಆರೋಪಿಗಳ ಆಸ್ತಿ-ಪಾಸ್ತಿಗಳನ್ನು ಪತ್ತೆ ಹಚ್ಚಿ ಜಪ್ತಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಮತ್ತು ಇತರೆ ರಾಜ್ಯಗಳ ತನಿಖಾ ಸಂಸ್ಥೆಗಳ ಜತೆ ಚರ್ಚೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.