Tipu Sultan ನಾಮಫಲಕಕ್ಕೆ ಅಪಮಾನ; ಸಿರವಾರದಲ್ಲಿ ಉದ್ವಿಗ್ನ ಪರಿಸ್ಥಿತಿ
Team Udayavani, Jan 31, 2024, 1:01 PM IST
ಸಿರವಾರ (ರಾಯಚೂರು): ಪಟ್ಟಣದ ಮುಖ್ಯರಸ್ತೆಯಲ್ಲಿರುವ ಟಿಪ್ಪು ನಾಮಫಲಕಕ್ಕೆ ರಾತ್ರಿ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದು, ಪಟ್ಟಣದಲ್ಲಿ ಉಗ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಸ್ಲಿಂ ಸಮುದಾಯದವರು ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಪಟ್ಟಣದ ಮಟನ್ ಮಾರ್ಕೆಟ್ ಹತ್ತಿರವಿರುವ ಟಿಪ್ಪು ಸರ್ಕಲ್‌ನಲ್ಲಿ ಕಿಡಿಗೇಡಿಗಳು ತಡರಾತ್ರಿ ನಾಮಫಲಕಕ್ಕೆ ಚಪ್ಪಲಿ ಹಾರ ಹಾಕಿದ್ದು, ಬೆಳ್ಳಂಬೆಳಗ್ಗೆ ಪಟ್ಟಣದಲ್ಲಿ ಉದ್ವಿಗ್ನ ವಾತವರಣ ನಿರ್ಮಾಣವಾಗಿತ್ತು. ಮುಸ್ಲಿಂ ಯುವಕರು ಮುಖ್ಯರಸ್ತೆ ತಡೆದು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಘಟನಾ ಸ್ಥಳಕ್ಕೆ ತಹಶೀಲ್ದಾರ ರವಿ ಎಸ್ ಅಂಗಡಿ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತನಾಡಿ, ಪಟ್ಟಣದ ಎಲ್ಲ ವೃತ್ತಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗುವುದು ಎಂದರು. ಘಟನೆ ಕುರಿತಂತೆ ಪೊಲೀಸರು 24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದರು.
ಟಿಪ್ಪು ನಾಮಫಲಕಕ್ಕೆ ಮಾಲಾರ್ಪಣೆ ಮಾಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಘಟನೆ ಸ್ಥಳಕ್ಕೆ ಶಾಸಕ ಜಿ.ಹಂಪಯ್ಯ ನಾಯಕ ಭೇಟಿ ನೀಡಿ ಟಿಪ್ಪು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಪಟ್ಟಣದಲ್ಲಿ ಮೊದಲಿನಿಂದಲೂ ಎಲ್ಲ ಸಮಾಜದವರು ಸೌಹಾರ್ದತೆಯಿಂದ ಬೆಳೆದು ಬಂದಿದ್ದು ಯಾರೋ ಕಿಡಿಗೇಡಿಗಳಿಂದ ಇಂತಹ ಕೃತ್ಯ ಎಸಗಿದ್ದು, ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ ಎಂದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಸಿಪಿಐ ಶಶಿಕಾಂತ ಎಂ, ಪಿಎಸ್‌ಐ ಗುರುಚಂದ್ರ ಯಾದವ್ ನೇತೃತ್ವದಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.