Kannada Cinema; ಫೆ.16ಕ್ಕೆ ಹೊಸಬರ ‘ಅಲೆಮಾರಿ ಈ ಬದುಕು’ ತೆರೆಗೆ
Team Udayavani, Jan 31, 2024, 3:05 PM IST
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿ ರುವ “ಅಲೆಮಾರಿ ಈ ಬದುಕು’ ಸಿನಿಮಾ ತೆರೆಗೆ ಬರಲು ತಯಾರಾ ಗುತ್ತಿದೆ. ಸದ್ಯ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರ ತಂಡ, ಇತ್ತೀಚೆಗೆ “ಅಲೆಮಾರಿ ಈ ಬದುಕು’ ಸಿನಿಮಾದ ಟೀಸರ್, ಟ್ರೇಲರ್ ಹಾಗೂ ಹಾಡುಗಳನ್ನು ಏಕಕಾಲಕ್ಕೆ ಬಿಡುಗಡೆ ಮಾಡಿತು.
ಫಿಲಂ ಚೇಂಬರ್ ಅಧ್ಯಕ್ಷ ಎನ್. ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಟ ಹಾಗೂ ಸಮಾಜಿಕ ಹೋರಾಟಗಾರ ಚೇತನ್ ಅಹಿಂಸ, ಪರಿಸರವಾದಿ ಪ್ರಕೃತಿ ಪ್ರಸನ್ನ ಮತ್ತಿತರರು ಮುಖ್ಯ ಅತಿಥಿಗಳಾಗಿ ಆಗಮಿಸಿ “ಅಲೆಮಾರಿ ಈ ಬದುಕು’ ಸಿನಿಮಾದ ಟೀಸರ್, ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಈ ಹಿಂದೆ “ಪ್ರೇಮಪೂಜ್ಯಂ’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಸಿದ್ದು ಸಿ. ಕಟ್ಟಿಮನಿ “ಅಲೆಮಾರಿ ಈ ಬದುಕು’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ದಿವ್ಯಕುಮಾರ್ ಹೆಚ್. ಎನ್ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.
“ಸಿನಿಮಾದ ಟೈಟಲ್ಲೇ ಹೇಳುವಂತೆ ಇದು ಅಲೆಮಾರಿಗಳ ಕುರಿತಾಗಿರುವ ಸಿನಿಮಾ. ಎಲ್ಲಿಂದಲೂ ಬಂದು ಬದುಕು ಕಟ್ಟಿಕೊಳ್ಳಲು ಹೋರಾಡುವ ಸುತ್ತ ಇಡೀ ಸಿನಿಮಾ ಕಥೆ ಸಾಗುತ್ತದೆ. ನಮ್ಮ ಚಿತ್ರತಂಡದ ಬಹುತೇಕ ಸದಸ್ಯರು ಅಲೆಮಾರಿಗಳು. ಒಂದು ಹಂತ ತಲುಪಬೇಕೆಂದು ಎಲ್ಲೆಲ್ಲೋ ಅಲೆದು ಕೊನೆಗೆ ಈ ಸಿನಿಮಾ ಮಾಡುವವರೆಗೆ ಬಂದಿದ್ದೇವೆ. ನಮ್ಮ ನಡುವೆಯೇ ನಡೆಯುವಂಥ ಹತ್ತಾರು ವಿಷಯಗಳು ಈ ಸಿನಿಮಾದಲ್ಲಿದೆ. ಎಲ್ಲರಿಗೂ ಇಷ್ಟವಾಗುವಂಥ ಸಿನಿಮಾ ಮಾಡಿದ್ದೇವೆ’ ಎಂಬುದು ಚಿತ್ರತಂಡದ ವಿಶ್ವಾಸದ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.